ಆಂಧ್ರ ಪ್ರದೇಶ | ಅಧಿಕಾರಕ್ಕೆ ಬಂದರೆ ಕುಟುಂಬಕ್ಕೆ ₹5000: ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್

Date:

ಗ್ಯಾರಂಟಿ ಘೋಷಣೆಗಳ ಮೂಲಕ ಕರ್ನಾಟಕ, ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಆಂಧ್ರ ಪ್ರದೇಶದಲ್ಲೂ ಇದನ್ನೇ ಮುಂದುವರಿಸಿದೆ. ಕರ್ನಾಟಕದಲ್ಲಿ ಐದು ಪ್ರಮುಖ ಗ್ಯಾರಂಟಿ ಘೋಷಿಸಿದ್ದರೆ, ತೆಲಂಗಾಣದಲ್ಲಿ ಆರು ಗ್ಯಾರಂಟಿಯನ್ನು ಕಾಂಗ್ರೆಸ್ ಘೋಷಿಸಿತ್ತು.

ಇಂದು (ಫೆ.26) ಆಂಧ್ರ ಪ್ರದೇಶದ ಅನಂತಪುರಂನಲ್ಲಿ ನಡೆದ ಕಾಂಗ್ರೆಸ್ ಸಾರ್ವಜನಿಕ ಸಭೆಯಲ್ಲಿ ಹೊಸ ಘೋಷಣೆಯೊಂದನ್ನು ಕಾಂಗ್ರೆಸ್ ಮಾಡಿದೆ. ಪಕ್ಷ ಅಧಿಕಾರಕ್ಕೆ ಬಂದರೆ ಪ್ರತೀ ಅರ್ಹ ಬಡ ಕುಟುಂಬಕ್ಕೆ ತಿಂಗಳಿಗೆ ₹5000 ಮೊತ್ತವನ್ನು ನೀಡುವ ಗ್ಯಾರಂಟಿಯನ್ನು ಘೋಷಿಸಿದೆ. ಈ ಯೋಜನೆಗೆ ಇಂದಿರಮ್ಮ ಸಾರ್ವತ್ರಿಕ ಮೂಲ ಆದಾಯ (Indiramma Universal Basic Income Support Guarantee) ಎಂದು ಹೆಸರಿಟ್ಟಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಘೋಷಣೆಯನ್ನು ಕನ್ನಡದಲ್ಲೇ ಘೋಷಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಾವು ಅಧಿಕಾರಕ್ಕೆ ಬಂದ ತಕ್ಷಣ ಸಾರ್ವತ್ರಿಕ ಮೂಲ ಆದಾಯ ಯೋಜನೆಯನ್ನು ಜಾರಿಗೆ ತರುವ ಮೂಲಕ ಪ್ರತೀ ಬಡ ಕುಟುಂಬಕ್ಕೆ ತಿಂಗಳಿಗೆ ಐದು ಸಾವಿರವನ್ನು ಕೊಡುವಂತಹ ಕೆಲಸವನ್ನು ಮಾಡಲಿದ್ದೇವೆ. ಇದು ನಮ್ಮ ಗ್ಯಾರಂಟಿ” ಎಂದು ಖರ್ಗೆ ಘೋಷಿಸಿದರು.

“ಪ್ರತಿ ಬಡ ಕುಟುಂಬಕ್ಕೆ ತಿಂಗಳಿಗೆ ₹500 ಆಂಧ್ರಪ್ರದೇಶದ ಜನರಿಗೆ ಕಾಂಗ್ರೆಸ್ ಪಕ್ಷದ ಭರವಸೆ. ನಾವು ಹಣವನ್ನು ನೇರವಾಗಿ ಕುಟುಂಬದ ಮಹಿಳೆಯ ಬ್ಯಾಂಕ್ ಖಾತೆಗೆ ವರ್ಗಾಯಿಸುತ್ತೇವೆ. ನಮ್ಮ ಗ್ಯಾರಂಟಿ ‘ಮೋದಿಯವರ ಗ್ಯಾರಂಟಿಯಂತೆ ಅಲ್ಲ, ಕಾಂಗ್ರೆಸ್ ಪಕ್ಷ ಏನೇ ಭರವಸೆ ನೀಡಿದರೂ ನಾವು ಈಡೇರಿಸುತ್ತೇವೆ” ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಆಂಧ್ರಪ್ರದೇಶ ಕಾಂಗ್ರೆಸ್‌ ಅಧ್ಯಕ್ಷೆ ವೈ ಎಸ್ ಶರ್ಮಿಳಾ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೇ ನಡೆಯಲಿರುವ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದೆ. ಆಂಧ್ರಪ್ರದೇಶದಲ್ಲಿ 175 ವಿಧಾನಸಭೆ ಮತ್ತು 25 ಸಂಸತ್ ಸ್ಥಾನಗಳಿದ್ದು, ಅಲ್ಲಿ ಏಕಕಾಲಕ್ಕೆ ಚುನಾವಣೆ ನಡೆಯಲಿದೆ.

ಇದನ್ನು ಓದಿದ್ದೀರಾ? ಆಂಧ್ರಪ್ರದೇಶ | ಲೋಕಸಭಾ ಚುನಾವಣೆ: ಪ್ರಚಾರಕ್ಕೆ ‘ಕಾಂಡೋಮ್’ ಮೊರೆ ಹೋದ ರಾಜಕೀಯ ಪಕ್ಷಗಳು!

ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷ ಚುನಾವಣೆಗಾಗಿ ಮೈತ್ರಿ ಮಾಡಿಕೊಂಡಿದೆ. ಅಲ್ಲದೇ, ಕಳೆದ ಶನಿವಾರ 118 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಮೊದಲ ಜಂಟಿ ಪಟ್ಟಿಯನ್ನು ಪ್ರಕಟಿಸಿದ್ದರು. ಸದ್ಯ ಆಂಧ್ರ ಪ್ರದೇಶದಲ್ಲಿ ಜಗನ್‌ಮೋಹನ್ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಆಡಳಿತದಲ್ಲಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿಎ ಅವಧಿಗಿಂತ ಬಿಜೆಪಿ ಅವಧಿಯಲ್ಲಿ 86 ಪಟ್ಟು ಹೆಚ್ಚು ಇ.ಡಿ ದಾಳಿ

ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಯುಪಿಎ...

‘ಮೋದಿ, ಯೋಗಿಗಿಂತ ದೊಡ್ಡವರಿದ್ದಾರೆ ಎನ್ನುವವರು ದೇಶದ್ರೋಹಿ; ಬಿಜೆಪಿ ಅಭ್ಯರ್ಥಿ ಮಹೇಶ್‌ ಶರ್ಮಾ ವಿವಾದಾತ್ಮಕ ಹೇಳಿಕೆ

"ಪ್ರಧಾನಿ ಮೋದಿ-ಸಿಎಂ ಯೋಗಿಯನ್ನು ತಮ್ಮವರು ಎಂದು ಯಾರು ಪರಿಗಣಿಸುವುದಿಲ್ಲವೋ ಅವರು ತಮ್ಮ...

ಲೋಕಸಭಾ ಚುನಾವಣೆ | ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ: ಓವೈಸಿ

ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದ ಅಕೋಲಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ವಂಚಿತ್ ಬಹುಜನ ಅಘಾಡಿ...

ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

"ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ...