ಆಂಧ್ರ ಪ್ರದೇಶ | ವಿಧಾನಸಭೆಯಿಂದ 8 ಶಾಸಕರು ಅನರ್ಹ

Date:

ಆಂಧ್ರಪ್ರದೇಶದ ಎಂಟು ಹಾಲಿ ಶಾಸಕರನ್ನು ವಿಧಾನಸಭಾ ಸ್ಪೀಕರ್ ತಮ್ಮಿನೇನಿ ಸೀತಾರಾಮ್ ಅವರು  ಅನರ್ಹಗೊಳಿಸಿದ್ದಾರೆ. ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಮತ್ತು ಪ್ರತಿಪಕ್ಷ ತೆಲುಗು ದೇಶಂ ಪಕ್ಷದ (ಟಿಡಿಪಿ) ತಲಾ ನಾಲ್ವರನ್ನು ಆಯಾ ಪಕ್ಷಗಳು ನೀಡಿರುವ ಪಕ್ಷಾಂತರದ ದೂರುಗಳ ಆಧಾರದ ಮೇಲೆ ಅಮಾನತು ಮಾಡಲಾಗಿದೆ.

- Advertisement -

ಟಿಡಿಪಿಯ ಮದ್ದಾಳು ಗಿರಿಧರ್ ರಾವ್, ಕರಣಂ ಬಲರಾಮ್, ವಲ್ಲಭನೇನಿ ವಂಶಿ ಮತ್ತು ವಾಸುಪಲ್ಲಿ ಗಣೇಶ್ ಹಾಗೂ ವೈಎಸ್‌ಆರ್‌ ಕಾಂಗ್ರೆಸ್‌ನ ಆನಂ ರಾಮನಾರಾಯಣ ರೆಡ್ಡಿ, ಮೇಕಪತಿ ಚಂದ್ರಶೇಖರ್ ರೆಡ್ಡಿ, ಕೆ ಶ್ರೀಧರ್ ರೆಡ್ಡಿ ಮತ್ತು ಉಂಡವಳ್ಳಿ ಶ್ರೀದೇವಿ ಅನರ್ಹಗೊಂಡಿದ್ದಾರೆ ಎಂದು ಸ್ಪೀಕರ್ ಕಚೇರಿಯ ಸುತ್ತೋಲೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

2024ರ ಫೆಬ್ರವರಿ 26ರಂದು ಶಾಸಕರನ್ನು ಅನರ್ಹಗೊಳಿಸಲಾಗಿದೆ. ಅವರೆಲ್ಲರನ್ನೂ ಭಾರತದ ಸಂವಿಧಾನದ X ಶೆಡ್ಯೂಲ್ ಅಡಿಯಲ್ಲಿ ಮತ್ತು ಆಂಧ್ರ ಪ್ರದೇಶ ಅಸೆಂಬ್ಲಿಯ ಸದಸ್ಯರ ಪಕ್ಷಾಂತರ ನಿಯಮಗಳು-1986ರ ಆಧಾರದ ಮೇಲೆ ಅನರ್ಹಗೊಳಿಸಲಾಗಿದೆ ಎಂದು ಸ್ಪೀಕರ್ ಕಚೇರಿ ಹೇಳಿದೆ.

ರಾಜಕೀಯ ವಿಶ್ಲೇಷಕರ ಪ್ರಕಾರ, ಶಾಸಕರ ಅನರ್ಹತೆಗೆ ಉಪಚುನಾವಣೆ ಅಗತ್ಯವಿಲ್ಲ. ಏಕೆಂದರೆ, ಕೆಲವೇ ವಾರಗಳಲ್ಲಿ ಆಂಧ್ರಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯುವ ನಿರೀಕ್ಷೆಯಿದೆ.

ಸ್ಪೀಕರ್ ಅವರು ಅನರ್ಹಗೊಳಿಸುವ ಮೊದಲು ಎಲ್ಲಾ ಎಂಟು ಸದಸ್ಯರಿಗೆ ತಮ್ಮ ಅಭಿಪ್ರಾಯವನ್ನು ತಿಳಿಸುವಂತೆ ಈ ಹಿಂದೆ ನೋಟಿಸ್ ನೀಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...