ಅನ್ನಭಾಗ್ಯ | ಅನೇಕರ ಕೈ ಸೇರದ ಹಣ; ಬಾಕಿ ಪಾವತಿಸುವುದಿಲ್ಲ ಎಂದಿರುವ ಸರ್ಕಾರ

Date:

ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಯಲ್ಲಿದೆ. ಪಡಿತರದಾರರಿಗೆ ತಲಾ 10 ಕೆ.ಜಿ ಅಕ್ಕಿ ಕೊಡಲು ಅಕ್ಕಿ ಕೊರತೆಯನ್ನು ಸರ್ಕಾರ ಎದುರಿಸುತ್ತಿದೆ. ಹೀಗಾಗಿ, ಐದು ಕೆ.ಜಿ ಅಕ್ಕಿಯ ಬದಲು ತಲಾ 179 ರೂ. ಹಣ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ನಗದು ನೀಡುವ ಕ್ರಮ ಜಾರಿಯಾಗಿ ಎರಡು ತಿಂಗಳು ಕಳೆದಿವೆ. ಆದರೂ, ರಾಜ್ಯದ ಹಲವಾರು ಮಂದಿಗೆ ಈ ಎರಡು ತಿಂಗಳ ನಗದು ಹಣ ಕೈಸೇರಿಲ್ಲ. ಫಲಾನುಭವಿಗಳಿಗೆ ಸುಮಾರು 294 ಕೋಟಿ ರೂಪಾಯಿ ನಗದು ವರ್ಗಾವಣೆಯಾಗಿಲ್ಲ ಎಂದು ತಿಳಿದುಬಂದಿದೆ.

ದಾಖಲೆ ಪರಿಶೀಲನೆ ಮತ್ತು ನಿಷ್ಕ್ರಿಯ ಬ್ಯಾಂಕ್ ಖಾತೆಗಳಂತಹ ಸಮಸ್ಯೆಗಳನ್ನು ಮುಂದಿಟ್ಟಿರುವ ಸರ್ಕಾರ, ಜುಲೈನಲ್ಲಿ ಸುಮಾರು 30.90 ಲಕ್ಷ ಕಾರ್ಡ್‌ಗಳ (1.08 ಕೋಟಿ ಫಲಾನುಭವಿಗಳು) ಮತ್ತು ಆಗಸ್ಟ್‌ನಲ್ಲಿ 24.44 ಲಕ್ಷ ಕಾರ್ಡ್‌ಗಳ (73 ಲಕ್ಷ ಫಲಾನುಭವಿಗಳು) ಖಾತೆಗಳಿಗೆ ಹಣ ಜಮಾ ಮಾಡಿಲ್ಲ. ಅಲ್ಲದೆ, ಕಳೆದ ಎರಡು ತಿಂಗಳಿನಿಂದ ಪಾವತಿಸದ ಹಣವನ್ನು ಫಲಾನುಭವಿಗಳಿಗೆ ವರ್ಗಾಯಿಸದಿರಲು ಸರ್ಕಾರ ನಿರ್ಧರಿಸಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮೂಲಗಳು ತಿಳಿಸಿವೆ.

ಫಲಾನುಭವಿಗಳ ಖಾತೆಗಳನ್ನು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್‌ಪಿಸಿಐ) ಪರಿಶೀಲಿಸದೇ ಇರುವುದು ಅವರು ಅನ್ನಭಾಗ್ಯದ ಮೊತ್ತವನ್ನು ಪಡೆಯಲಾಗದ್ದಕ್ಕೆ ಪ್ರಮುಖ ಕಾರಣವೆಂದು ಹೇಳಲಾಗಿದೆ. ಇದರಿಂದಾಗಿ ಜುಲೈನಲ್ಲಿ 30.90 ಲಕ್ಷ ಕುಟುಂಬಗಳು ಹಣ ಪಡೆಯಲಾಗಿಲ್ಲ. ಆದರೆ, ಈ ತಿಂಗಳು ಹಣ ಪಡೆಯಲಾಗದ ಕುಟುಂಬಗಳ ಸಂಖ್ಯೆ 14.8 ಲಕ್ಷಕ್ಕೆ ಇಳಿದಿದೆ ಎಂದು ಹೇಳಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸಕ್ರಿಯ ಬ್ಯಾಂಕ್ ಖಾತೆ ಹೊಂದಿದ್ದರೂ ನಮಗೆ ಹಣ ಜಮಾ ಆಗಿಲ್ಲ. ನಗದು ಜಮೆಯಾಗದಿರಲು ಬ್ಯಾಂಕ್ ಅಥವಾ ನ್ಯಾಯಬೆಲೆ ಅಂಗಡಿ ಕಾರಣವನ್ನು ನೀಡಿಲ್ಲ” ಎಂದು ಧಾರವಾಡದ ಕೃಷಿ ಕಾರ್ಮಿಕ ಗಿರಿಜವ್ವ ಶೇಖಪ್ಪ ಹುಲಿಕಟ್ಟಿ ಹೇಳಿದ್ದಾರೆ.

ಯೋಜನೆಯಡಿಯಲ್ಲಿ, ಪ್ರತಿ ಪಡಿತರ ಚೀಟಿಯಲ್ಲಿ ನಮೂದಿಸಲಾದ ಕುಟುಂಬದ ಮುಖ್ಯಸ್ಥರ ಖಾತೆಗೆ ಸರ್ಕಾರವು ಹಣವನ್ನು ಜಮೆ ಮಾಡುತ್ತದೆ. ರಾಜ್ಯದಲ್ಲಿ ಸುಮಾರು 94.4% ಕುಟುಂಬಗಳ ಮುಖ್ಯಸ್ಥರು ಮಹಿಳೆಯರಾಗಿದ್ದಾರೆ. 5.2% ಪುರುಷರು ಕುಟುಂಬಗಳ ಮುಖ್ಯಸ್ಥರಾಗಿದ್ದಾರೆ.

ಸುಮಾರು 1.12 ಲಕ್ಷ ಕುಟುಂಬಗಳ ಮುಖ್ಯಸ್ಥರು ತಮ್ಮ ಆಧಾರ್ ಕಾರ್ಡ್‌ಗಳನ್ನು ತಮ್ಮ ಪಡಿತರ ಕಾರ್ಡ್‌ಗಳೊಂದಿಗೆ ಇನ್ನೂ ಲಿಂಕ್ ಮಾಡಿಸಿಲ್ಲ. ಹಲವರ ಖಾತೆಗಳು ನಿಷ್ಕ್ರಿಯವಾಗಿವೆ ಎಂದು ವರದಿಯಾಗಿದೆ.

“ಮೊದಲ ತಿಂಗಳಲ್ಲಿ (ಜುಲೈ) 21 ಲಕ್ಷ ಬಿಪಿಎಲ್ ಕುಟುಂಬಗಳು ಬ್ಯಾಂಕಿಂಗ್ ಸಂಬಂಧಿತ ಸಮಸ್ಯೆಗಳನ್ನು ಹೊಂದಿದ್ದವು. ಹೀಗಾಗಿ ಸರ್ಕಾರಕ್ಕೆ ಹಣ ವರ್ಗಾವಣೆ ಮಾಡಲು ಸಾಧ್ಯವಾಗಲಿಲ್ಲ. ಈಗ, ಎಲ್ಲ ಫಲಾನುಭವಿಗಳಿಗೂ ನಗದು ದೊರೆಯುವಂತೆ ಮಾಡಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ” ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ನಿರ್ದೇಶಕರಾದ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದಿರಾ?: ಚಂದ್ರಯಾನ-3 ಲ್ಯಾಂಡರ್ ಸ್ಥಳಕ್ಕೆ ‘ಶಿವಶಕ್ತಿ’ ಎಂಬ ಹೆಸರು: ಪ್ರಧಾನಿ ಮೋದಿ ಘೋಷಣೆ

ಇತ್ತೀಚಿನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ ಎಚ್ ಮುನಿಯಪ್ಪ, “ಕಳೆದ ಎರಡು ತಿಂಗಳಿನಿಂದ ನಗದು ಪ್ರಯೋಜನವನ್ನು ಪಡೆಯದ ಫಲಾನುಭವಿಗಳಿಗೆ ಬಾಕಿ ಹಣವನ್ನು ಪಾವತಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

ಕಳೆದ ಮೂರು ತಿಂಗಳಲ್ಲಿ ಸರಿಸುಮಾರು 5.36 ಲಕ್ಷ ಕುಟುಂಬಗಳು ಒಮ್ಮೆಯೂ ಪಡಿತರವನ್ನು ಪಡೆದಿಲ್ಲ. ಈ ಕುಟುಂಬಗಳಿಗೆ ನಗದು ಪ್ರಯೋಜನದ ಅಗತ್ಯವಿಲ್ಲ ಎಂದು ಸರ್ಕಾರ ಭಾವಿಸಿದೆ ಎಂದು ಅವರು ಹೇಳಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆ; ಜೀಪಿನಲ್ಲಿ ಹುಚ್ಚಾಟ ಮೆರೆದ ವ್ಯಕ್ತಿಯ ಬಂಧನ

ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ...

2028ರೊಳಗೆ ಜಿಲ್ಲೆಗೆ ಮತ್ತೆ ರಾಮನಗರ ಹೆಸರು ಬರುತ್ತದೆ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

ರಾಮನಗರ ಜಿಲ್ಲೆಯಲ್ಲಿ ರಾಮನ ಹೆಸರಿದೆ. ಭೂಮಿ ಇರುವವರೆಗೂ ರಾಮನಗರ ಹೆಸರನ್ನು ತೆಗೆಯಲು...

ಹುಣಸೂರು | ಸೋರುತ್ತಿದೆ ಆರ್‌ಟಿಓ ಕಚೇರಿ ಮಾಳಿಗೆ; ಅಧಿಕಾರಿಗಳಿಗೇ ಇಲ್ಲ ಮೂಲ ಸೌಕರ್ಯ!

ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಓ ಕಚೇರಿ ಹಳೆಯ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು,...

‘ಬಜೆಟ್ ಪಕ್ಷಪಾತ, ರಾಜ್ಯಗಳನ್ನು ವಿಭಜಿಸುವ ಪಿತೂರಿ’; ನೀತಿ ಆಯೋಗ ಸಭೆಯಲ್ಲಿ ಪ್ರತಿಭಟನೆಗೆ ಮಮತಾ ಸಜ್ಜು

ಜುಲೈ 27 ರಂದು ದೆಹಲಿಯಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸುವುದಾಗಿ...