2014ಕ್ಕೂ ಮೊದಲು ದೇಶದಲ್ಲಿನ ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಅಣ್ಣಾ ಹಝಾರೆ, ಅಬಕಾರಿ ನೀತಿ ಯೋಜನೆಯ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನವಾಗುತ್ತಿದ್ದಂತೆಯೇ ಪ್ರತ್ಯಕ್ಷಗೊಂಡಿದ್ದಾರೆ.
ಸುದ್ದಿ ಸಂಸ್ಥೆ ಎಎನ್‌ಐ ಜೊತೆಗೆ ಮಾತನಾಡಿರುವ ಅಣ್ಣಾ ಹಝಾರೆ, “ನನ್ನೊಂದಿಗೆ ಕೆಲಸ ಮಾಡುತ್ತಿದ್ದ ಹಾಗೂ ಮದ್ಯದ ವಿರುದ್ಧ ಧ್ವನಿ ಎತ್ತುತ್ತಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರೇ, ಈಗ ಮದ್ಯದ ನೀತಿಗಳನ್ನು ಮಾಡುತ್ತಿರುವುದಕ್ಕೆ ನನಗೆ ತುಂಬಾ ಬೇಸರವಾಗಿದೆ. ಅವರ ಬಂಧನಕ್ಕೆ ಸ್ವಂತ ಕೃತ್ಯವೇ ಕೇಜ್ರಿವಾಲ್‌ಗೆ ಮುಳುವಾಗಿದೆ” ಎಂದು ಹೇಳಿಕೆ ನೀಡಿದ್ದಾರೆ.
ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನವಾಗಿದೆ. ಆಮ್ ಆದ್ಮಿ ಪಾರ್ಟಿ, ಕಾಂಗ್ರೆಸ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಕೇಜ್ರಿವಾಲ್ ಬೆಂಬಲಕ್ಕೆ ನಿಂತಿದ್ದಾರೆ. ಇಡಿ ಹಾಗೂ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆಯೇ ಅಣ್ಣಾ ಹಜಾರೆ ಪ್ರತಿಕ್ರಿಯೆ ನೀಡಿದ್ದು, ಪರೋಕ್ಷವಾಗಿ ಕೇಂದ್ರ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡಿದ್ದು, “ಈ ಬಂಧನ ಕೇಜ್ರಿವಾಲ್ ಸ್ವಯಂಕೃತ ಅಪರಾಧದಿಂದ ಆಗಿದೆ” ಎಂದಿದ್ದಾರೆ.
#WATCH | Ahmednagar, Maharashtra: On ED arresting Delhi CM Arvind Kejriwal, Social activist Anna Hazare says, “I am very upset that Arvind Kejriwal, who used to work with me, raise his voice against liquor, is now making liquor policies. His arrest is because of his own deeds…” pic.twitter.com/aqeJEeecfM
— ANI (@ANI) March 22, 2024
“ನನ್ನ ಜೊತೆ ಹಲವು ಹೋರಾಟದಲ್ಲಿ ಪಾಲ್ಗೊಂಡಿದ್ದ ಕೇಜ್ರಿವಾಲ್ ಬಂಧನದಿಂದ ಬೇಸರವಾಗಿದೆ. ಆದರೆ ಅವರ ಕೃತ್ಯದಿಂದಲೇ ಈ ಬಂಧನವಾಗಿದೆ. ಈಗ ಅವರೇನು ಮಾಡುತ್ತಾರೆ? ಅಧಿಕಾರದ ಮುಂದೆ ಏನೂ ನಡೆಯುವುದಿಲ್ಲ. ಇನ್ನು ಕಾನೂನು ಪ್ರಕಾರ ಏನು ಆಗಬೇಕೋ ಅದು ನಡೆಯಲಿದೆ” ಎಂದು ಅಣ್ಣಾ ಹಝಾರೆ ಹೇಳಿದ್ದಾರೆ.
ಸದ್ಯ ಮಹಾರಾಷ್ಟ್ರದ ಅಹ್ಮದ್‌ನಗರದಲ್ಲಿ ನೆಲೆಸಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಝಾರೆಯವರು, ಲೋಕಪಾಲ್ ಬಿಲ್ ಜಾರಿಗೆ 2011ರಲ್ಲಿ ದೊಡ್ಡಮಟ್ಟದಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು. ಈ ಹೋರಾಟದಲ್ಲಿ ಕಾಣಿಸಿಕೊಂಡಿದ್ದ ಅರವಿಂದ್ ಕೇಜ್ರಿವಾಲ್, ದೇಶಾದ್ಯಂತ ಭಾರೀ ಪ್ರಚಾರ ಗಿಟ್ಟಿಸಿಕೊಂಡಿದ್ದರು. ಅಣ್ಣಾ ಹಝಾರೆ ಜೊತೆಗೆ ಹಲವು ಹೋರಾಟದಲ್ಲಿ ಕೇಜ್ರಿವಾಲ್ ಮುಂಚೂಣಿಯಲ್ಲಿದ್ದರು. ಬಳಿಕ ಅಣ್ಣಾ ಹಝಾರೆಯಿಂದ ದೂರ ಸರಿದು ಆಮ್ ಆದ್ಮಿ ಪಾರ್ಟಿ ಕಟ್ಟಿ ಬೆಳೆಸಿದ ಅರವಿಂದ್ ಕೇಜ್ರಿವಾಲ್, ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ, ದೆಹಲಿಯ ಮುಖ್ಯಮಂತ್ರಿಯಾಗಿದ್ದರು.
ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವು ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ ನಡೆಸಿ, ಹಗರಣಗಳ ವಿರುದ್ಧ ಬಂಡಾಯವೆದ್ದಿದ್ದ 86 ವರ್ಷದ ಅಣ್ಣಾ ಹಝಾರೆ, 2014ರಿಂದ ಅಂದರೆ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿಯ ವಿರುದ್ಧ ಯಾವುದೇ ಧ್ವನಿ ಎತ್ತಿಲ್ಲ.
At 14-15 sec, Someone is heard whispering from behind the camera. Well done @ANI @smitaprakash for your Propaganda with Anna Hazare. pic.twitter.com/TO9v836JBO
— Mohammed Zubair (@zoo_bear) March 22, 2024
ಅಲ್ಲದೇ, ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಬಗ್ಗೆಯಾಗಲೀ, ಮಣಿಪುರದ ಗಲಭೆಯ ಬಗ್ಗೆಯಾಗಲೀ, ರೈತರ ಪ್ರತಿಭಟನೆ ಬಗ್ಗೆಯಾಗಲೀ, ಅದಾನಿ ಹಗರಣದ ಬಗ್ಗೆಯಾಗಲೀ ಅಥವಾ ಇತ್ತೀಚೆಗೆ ಸುದ್ದಿಯಲ್ಲಿರುವ ಚುನಾವಣಾ ಬಾಂಡ್ ಹಗರಣಗಳ ಬಗ್ಗೆಯಾಗಲೀ ಈವರೆಗೆ ಧ್ವನಿ ಎತ್ತಿಲ್ಲ ಎಂಬುದೇ ವಿಪರ್ಯಾಸ.
ಇಂಗ್ಲಿಷ್ ನಲ್ಲಿ ಇಂಟೆಗ್ರಿಟಿ ಎಂಬ ಪದವಿದೆ. ಅಂದರೆ, ಪ್ರಾಮಾಣಿಕತೆ, ನಿಷ್ಪಕ್ಷಪಾತ ಇವೆಲ್ಲವೂ ಕೂಡಿದ ಸಮಗ್ರತೆ. ಹಜಾರೆಯವರ ಸಾರ್ವಜನಿಕ ಬದುಕಲ್ಲಿ ಇದರ ಕೊರತೆಯೇ ಎದ್ದು ಕಾಣುತ್ತದೆ. ಸಲ್ವಾರ್ ಕಮೀಜ್ ಬಾಬಾನ ಕಟ್ಟಿಕೊಂಡು ಕಪಟ ಭ್ರಷ್ಟಾಚಾರ ವಿರೋಧಿ ಆಂದೋಲನದ ನಾಟಕ ಆಡಿದ್ದಷ್ಟೆ ,ಫಲಿತಾಂಶ ಏನೆಂದರೆ ಸರ್ವಾಧಿಕಾರಿಯ ರಾಜ್ಯಭಾರ.
Thank u sir