‘ಬಾಂಡ್’ ಬಗ್ಗೆ ಬಾಯಿಬಿಡದ ಅಣ್ಣಾ ಹಝಾರೆ, ಕೇಜ್ರಿವಾಲ್ ಬಂಧನದ ಬೆನ್ನಲ್ಲೇ ಪ್ರತ್ಯಕ್ಷ!

Date:

Advertisements

2014ಕ್ಕೂ ಮೊದಲು ದೇಶದಲ್ಲಿನ ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಅಣ್ಣಾ ಹಝಾರೆ, ಅಬಕಾರಿ ನೀತಿ ಯೋಜನೆಯ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನವಾಗುತ್ತಿದ್ದಂತೆಯೇ ಪ್ರತ್ಯಕ್ಷಗೊಂಡಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆಗೆ ಮಾತನಾಡಿರುವ ಅಣ್ಣಾ ಹಝಾರೆ, “ನನ್ನೊಂದಿಗೆ ಕೆಲಸ ಮಾಡುತ್ತಿದ್ದ ಹಾಗೂ ಮದ್ಯದ ವಿರುದ್ಧ ಧ್ವನಿ ಎತ್ತುತ್ತಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರೇ, ಈಗ ಮದ್ಯದ ನೀತಿಗಳನ್ನು ಮಾಡುತ್ತಿರುವುದಕ್ಕೆ ನನಗೆ ತುಂಬಾ ಬೇಸರವಾಗಿದೆ. ಅವರ ಬಂಧನಕ್ಕೆ ಸ್ವಂತ ಕೃತ್ಯವೇ ಕೇಜ್ರಿವಾಲ್‌ಗೆ ಮುಳುವಾಗಿದೆ” ಎಂದು ಹೇಳಿಕೆ ನೀಡಿದ್ದಾರೆ.

ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನವಾಗಿದೆ. ಆಮ್ ಆದ್ಮಿ ಪಾರ್ಟಿ, ಕಾಂಗ್ರೆಸ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಕೇಜ್ರಿವಾಲ್ ಬೆಂಬಲಕ್ಕೆ ನಿಂತಿದ್ದಾರೆ. ಇಡಿ ಹಾಗೂ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆಯೇ ಅಣ್ಣಾ ಹಜಾರೆ ಪ್ರತಿಕ್ರಿಯೆ ನೀಡಿದ್ದು, ಪರೋಕ್ಷವಾಗಿ ಕೇಂದ್ರ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡಿದ್ದು, “ಈ ಬಂಧನ ಕೇಜ್ರಿವಾಲ್ ಸ್ವಯಂಕೃತ ಅಪರಾಧದಿಂದ ಆಗಿದೆ” ಎಂದಿದ್ದಾರೆ.

Advertisements

“ನನ್ನ ಜೊತೆ ಹಲವು ಹೋರಾಟದಲ್ಲಿ ಪಾಲ್ಗೊಂಡಿದ್ದ ಕೇಜ್ರಿವಾಲ್ ಬಂಧನದಿಂದ ಬೇಸರವಾಗಿದೆ. ಆದರೆ ಅವರ ಕೃತ್ಯದಿಂದಲೇ ಈ ಬಂಧನವಾಗಿದೆ. ಈಗ ಅವರೇನು ಮಾಡುತ್ತಾರೆ? ಅಧಿಕಾರದ ಮುಂದೆ ಏನೂ ನಡೆಯುವುದಿಲ್ಲ. ಇನ್ನು ಕಾನೂನು ಪ್ರಕಾರ ಏನು ಆಗಬೇಕೋ ಅದು ನಡೆಯಲಿದೆ” ಎಂದು ಅಣ್ಣಾ ಹಝಾರೆ ಹೇಳಿದ್ದಾರೆ.

ಸದ್ಯ ಮಹಾರಾಷ್ಟ್ರದ ಅಹ್ಮದ್‌ನಗರದಲ್ಲಿ ನೆಲೆಸಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಝಾರೆಯವರು, ಲೋಕಪಾಲ್ ಬಿಲ್ ಜಾರಿಗೆ 2011ರಲ್ಲಿ ದೊಡ್ಡಮಟ್ಟದಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು. ಈ ಹೋರಾಟದಲ್ಲಿ ಕಾಣಿಸಿಕೊಂಡಿದ್ದ ಅರವಿಂದ್ ಕೇಜ್ರಿವಾಲ್, ದೇಶಾದ್ಯಂತ ಭಾರೀ ಪ್ರಚಾರ ಗಿಟ್ಟಿಸಿಕೊಂಡಿದ್ದರು. ಅಣ್ಣಾ ಹಝಾರೆ ಜೊತೆಗೆ ಹಲವು ಹೋರಾಟದಲ್ಲಿ ಕೇಜ್ರಿವಾಲ್ ಮುಂಚೂಣಿಯಲ್ಲಿದ್ದರು. ಬಳಿಕ ಅಣ್ಣಾ ಹಝಾರೆಯಿಂದ ದೂರ ಸರಿದು ಆಮ್ ಆದ್ಮಿ ಪಾರ್ಟಿ ಕಟ್ಟಿ ಬೆಳೆಸಿದ ಅರವಿಂದ್ ಕೇಜ್ರಿವಾಲ್, ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ, ದೆಹಲಿಯ ಮುಖ್ಯಮಂತ್ರಿಯಾಗಿದ್ದರು.

WhatsApp Image 2024 03 22 at 1.36.34 PM

ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವು ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ ನಡೆಸಿ, ಹಗರಣಗಳ ವಿರುದ್ಧ ಬಂಡಾಯವೆದ್ದಿದ್ದ 86 ವರ್ಷದ ಅಣ್ಣಾ ಹಝಾರೆ, 2014ರಿಂದ ಅಂದರೆ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿಯ ವಿರುದ್ಧ ಯಾವುದೇ ಧ್ವನಿ ಎತ್ತಿಲ್ಲ.

ಅಲ್ಲದೇ, ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಬಗ್ಗೆಯಾಗಲೀ, ಮಣಿಪುರದ ಗಲಭೆಯ ಬಗ್ಗೆಯಾಗಲೀ, ರೈತರ ಪ್ರತಿಭಟನೆ ಬಗ್ಗೆಯಾಗಲೀ, ಅದಾನಿ ಹಗರಣದ ಬಗ್ಗೆಯಾಗಲೀ ಅಥವಾ ಇತ್ತೀಚೆಗೆ ಸುದ್ದಿಯಲ್ಲಿರುವ ಚುನಾವಣಾ ಬಾಂಡ್‌ ಹಗರಣಗಳ ಬಗ್ಗೆಯಾಗಲೀ ಈವರೆಗೆ ಧ್ವನಿ ಎತ್ತಿಲ್ಲ ಎಂಬುದೇ ವಿಪರ್ಯಾಸ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ಇಂಗ್ಲಿಷ್ ನಲ್ಲಿ ಇಂಟೆಗ್ರಿಟಿ ಎಂಬ ಪದವಿದೆ. ಅಂದರೆ, ಪ್ರಾಮಾಣಿಕತೆ, ನಿಷ್ಪಕ್ಷಪಾತ ಇವೆಲ್ಲವೂ ಕೂಡಿದ ಸಮಗ್ರತೆ. ಹಜಾರೆಯವರ ಸಾರ್ವಜನಿಕ ಬದುಕಲ್ಲಿ ಇದರ ಕೊರತೆಯೇ ಎದ್ದು ಕಾಣುತ್ತದೆ. ಸಲ್ವಾರ್ ಕಮೀಜ್ ಬಾಬಾನ ಕಟ್ಟಿಕೊಂಡು ಕಪಟ ಭ್ರಷ್ಟಾಚಾರ ವಿರೋಧಿ ಆಂದೋಲನದ ನಾಟಕ ಆಡಿದ್ದಷ್ಟೆ ,ಫಲಿತಾಂಶ ಏನೆಂದರೆ ಸರ್ವಾಧಿಕಾರಿಯ ರಾಜ್ಯಭಾರ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X