ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು ಮದ್ರಾಸ್ ಹೈಕೋರ್ಟ್ ಇಂದು ಹೇಳಿದೆ. ಈ ಪ್ರಕರಣದ ವಿರುದ್ಧವಾಗಿ ಪ್ರತಿಭಟನೆಗೆ ಪೊಲೀಸರ ಅನುಮತಿ ನಿರಾಕರಣೆ ಕುರಿತು ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ವಕೀಲರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ನಡೆದ ವಿಚಾರಣೆ ವೇಳೆ ಮದ್ರಾಸ್ ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರಾಜಕೀಯಗೊಳಿಸಲಾಗುತ್ತಿದೆ. ಮಹಿಳೆಯರ ಸುರಕ್ಷತೆಯ ಬಗ್ಗೆ ನಿಜವಾಗಿಯೂ ಕಾಳಜಿಯಿಲ್ಲ ಎಂದು ಹೈಕೋರ್ಟ್ ಟೀಕೆ ಮಾಡಿದೆ.
ಇದನ್ನು ಓದಿದ್ದೀರಾ? ವಿಡಿಯೊ | ಚಾಟಿಯಲ್ಲಿ ಹೊಡೆದುಕೊಂಡು ನಗೆಪಾಟಲಿಗೀಡಾದ ಅಣ್ಣಾಮಲೈ!
ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯೂ) ನಿವೃತ್ತ ಐಪಿಎಸ್ ಅಧಿಕಾರಿ ಪ್ರವೀಣ್ ದೀಕ್ಷಿತ್ ಸೇರಿದಂತೆ ಇಬ್ಬರು ಸದಸ್ಯರ ಸತ್ಯಶೋಧನಾ ಸಮಿತಿಯನ್ನು ರಚಿಸಿದೆ. ಎರಡು ದಿನಗಳ ತನಿಖೆಯಲ್ಲಿ, ಸಮಿತಿಯು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ್ದು, ಸಂತ್ರಸ್ತೆಯ ಕುಟುಂಬಸ್ಥರನ್ನು, ಅಧಿಕಾರಿಗಳು ಮತ್ತು ಎನ್‌ಜಿಒಗಳಿಗೆ ಭೇಟಿ ನೀಡಿದೆ. ಕ್ಯಾಂಪಸ್ ಭದ್ರತೆ ಪರಿಶೀಲಿಸಿದೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಎನ್‌ಸಿಡಬ್ಲ್ಯೂ, “ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ಎನ್‌ಸಿಡಬ್ಲ್ಯೂ ಭದ್ರತೆ ಪರಿಶೀಲಿಸಿದೆ. ಎಸ್‌ಐಟಿಯನ್ನು ಭೇಟಿ ಮಾಡಿದೆ. ಶಿಫಾರಸುಗಳೊಂದಿಗೆ ವರವಾದ ವರದಿಯನ್ನು ಸಿದ್ಧಪಡಿಸಲಾಗಿದೆ” ಎಂದು ಹೇಳಿದೆ.
ಡಿಸೆಂಬರ್ 23ರಂದು ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ 19 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಸಂತ್ರಸ್ತೆ ಈ ಬಗ್ಗೆ ದೂರು ನೀಡಿದ್ದು, ತಾನು ತನ್ನ ಸ್ನೇಹಿತನ ಮೇಲೆ ದಾಳಿ ನಡೆದಿದೆ. ಹತ್ತಿರದ ಪೊದೆಗೆ ಎಳೆದೊಯ್ದು ಲೈಂಗಿಕ ದೌರ್ಜನ್ಯ ನೀಡಲಾಗಿದೆ ಎಂದು ಆರೋಪಿದ್ದಾರೆ.
ಇದನ್ನು ಓದಿದ್ದೀರಾ? ಡಿಎಂಕೆ ಸರ್ಕಾರವನ್ನು ಕಿತ್ತೊಗೆಯುವವರೆಗೆ ಪಾದರಕ್ಷೆ ಧರಿಸಲ್ಲ ಎಂದ ಅಣ್ಣಾಮಲೈ
ಆರೋಪಿಯನ್ನು ಬೀದಿ ಬದಿ ವ್ಯಾಪಾರಸ್ಥ ಜ್ಞಾನಶೇಖರನ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಜ್ಞಾನಶೇಖರನ್‌ಗೆ ಹಲವು ಕ್ರಿಮಿನಲ್ ಹಿನ್ನೆಲೆಗಳಿವೆ. ಈ ಪ್ರಕರಣದ ತನಿಖೆಗೆ ಆಗ್ರಹ ಕೇಳಿಬರುತ್ತಿದ್ದಂತೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶಿಸಿತ್ತು.
ಪ್ರಕರಣದಲ್ಲಿ ಬಿಜೆಪಿ ರಾಜಕೀಯ
ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಡೆದ ಅತ್ಯಾಚಾರ, ಮಹಿಳಾ ವಿರೋಧಿ ದೌರ್ಜನ್ಯ ಮೊದಲಾದವುಗಳ ಬಗ್ಗೆ ಮಾತನಾಡದ ತಮಿಳುನಾಡು ಬಿಜೆಪಿ ನಾಯಕ ಕೆ. ಅಣ್ಣಾಮಲೈ ಈಗ ಅಣ್ಣಾ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಲೈಂಗಿಕ ದೌರ್ಜನ್ಯದ ವಿರುದ್ಧವಾಗಿ ಬೃಹತ್ ಹೋರಾಟಕ್ಕೆ ಮುಂದಾಗಿರುವುದೇ ಪ್ರಕರಣ ರಾಜಕೀಯ ದಿಕ್ಕು ಪಡೆಯಲು ಕಾರಣವಾಗಿದೆ. ಚಾಟಿಯಿಂದ ತನಗೆ ತಾನು ಹೊಡೆದುಕೊಳ್ಳುವ ಪ್ರತಿಭಟನೆಯನ್ನೂ ನಡೆಸಿ ಅಣ್ಣಾಮಲೈ ಟ್ರೋಲ್ ಆಗಿದ್ದಾರೆ. ಇವೆಲ್ಲವುದರ ನಡುವೆ “ಅಣ್ಣಾ ವಿಶ್ವವಿದ್ಯಾಲಯದ ಲೈಂಗಿಕ ದೌರ್ಜನ್ಯ ಪ್ರಕರಣ ವನ್ನು ರಾಜಕೀಯಗೊಳಿಸಲಾಗುತ್ತಿದೆ” ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ.
