ಅನ್ನಭಾಗ್ಯ | ಫಲಾನುಭವಿಗಳ ಖಾತೆಗೆ ಒಂದು ವರ್ಷದಲ್ಲಿ ₹8,433 ಕೋಟಿ ಜಮೆ: ಸಚಿವ ಕೆ ಎಚ್‌ ಮುನಿಯಪ್ಪ

Date:

ಜುಲೈ ತಿಂಗಳಲ್ಲಿ 1,15,61,765 ಪಡಿತರ ಚೀಟಿಯ 4,08,46,548 ಫಲಾನುಭವಿಗಳಿಗೆ 670.45 ಕೋಟಿ ರೂ. ನೇರ ನಗದು ಜಮೆ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ನೇರ ನಗದು ಜಮೆ ಪ್ರಾರಂಭವಾದ ಜುಲೈ-2023 ರಿಂದ ಜುಲೈ-2024ರವರೆಗೆ 8,433.11 ಕೋಟಿ ರೂ. ಮೊತ್ತವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ ಎಚ್‌ ಮುನಿಯಪ್ಪ ತಿಳಿಸಿದರು.

- Advertisement -

ಆಹಾರ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಆಹಾರ ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ, ಕರ್ನಾಟಕ ಆಹಾರ ನಿಗಮದ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ಕರೆದು ಸಚಿವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಈವರೆಗೂ ಪ್ರತಿ ತಿಂಗಳು ಒಂದು ಕೆ.ಜಿ. ಅಕ್ಕಿಗೆ 34 ರೂ. ನಂತೆ 5 ಕೆ.ಜಿ. ಅಕ್ಕಿಗೆ ಪ್ರತಿ ಸದಸ್ಯರಿಗೆ 170 ರೂ. ಮೊತ್ತವನ್ನು ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ. ಈಗ ಚಾಲ್ತಿಯಲ್ಲಿರುವಂತೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ನೀಡಬೇಕಾಗಿರುವ ಅಕ್ಕಿ ಬದಲಾಗಿ ನೇರ ಹಣ ಜಮೆಯನ್ನು ಮುಂದುವರಿಸಲಾಗುವುದು” ಎಂದು ಹೇಳಿದರು.

“ಭಾರತ ಸರ್ಕಾರ 2013ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ನು ಮೊಟ್ಟಮೊದಲು ಜಾರಿಗೆ ತಂದ ರಾಜ್ಯ ಕರ್ನಾಟಕ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮೊದಲ ಅವಧಿ ಮತ್ತು ಎರಡನೇ ಅವಧಿಯಲ್ಲಿ ಅನ್ನಭಾಗ್ಯ ಯೋಜನೆಗೆ ಅತ್ಯಂತ ಪ್ರಾಮುಖ್ಯತೆ ಕೊಡುವ ಮೂಲಕ ಕರ್ನಾಟಕ ರಾಜ್ಯವನ್ನು ಹಸಿವು ಮುಕ್ತ ಕರ್ನಾಟಕವಾಗಿಸಿದ್ದಾರೆ. ಇದು ನಮ್ಮ ಸರ್ಕಾರದ ಹೆಮ್ಮೆಯ ವಿಷಯವಾಗಿದೆ” ಎಂದು ತಿಳಿಸಿದರು.

ಅನ್ನ ಸುವಿಧಾ

“2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅನ್ನ ಸುವಿಧಾ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. 80 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಪಡಿತರ ವಿತರಣೆಯನ್ನು ಮನೆಯ ಬಾಗಿಲಿಗೆ ತಲುಪಿಸಲಾಗುತ್ತಿದೆ” ಎಂದರು.

“ಬಹಳ ವರ್ಷಗಳಿಂದ ಇದ್ದ ಸರ್ವರ್ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಇಲಾಖೆಯ ಬಹುದಿನದ ಬೇಡಿಕೆ ಆಹಾರ ಇಲಾಖೆಯ ಕಚೇರಿಗಳ ಸಂಕೀರ್ಣ ಆಹಾರ ಸೌಧವನ್ನು 50.00 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಆಲಿ ಆಸ್ಕರ್ ರಸ್ತೆಯಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ” ಎಂದು ಹೇಳಿದರು.

“ಆಹಾರ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ಕಾಯ್ದೆಗಳಾದ ಅಗತ್ಯ ವಸ್ತುಗಳು ಕಾಯ್ದೆ-1955, ಕಾಳಸಂತೆ ನಿಯಂತ್ರಣ ಕಾಯ್ದೆ-1980, ಆಹಾರ ಭದ್ರತಾ ಕಾಯ್ದೆ-2013 ಹಾಗೂ ಗ್ರಾಹಕರ ಹಕ್ಕುಗಳ ರಕ್ಷಣಾ ಕಾಯ್ದೆ-2019ನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಇಲಾಖಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ” ಎಂದು ತಿಳಿಸಿದರು.

ಕೇಂದ್ರದಿಂದ ಅಕ್ಕಿ ಖರೀದಿ

“ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಪ್ರತಿ ಕೆ.ಜಿ.ಗೆ 28 ರೂ. ದರದಲ್ಲಿ ಅಕ್ಕಿ ನೀಡಲು ತೀರ್ಮಾನಿಸಿದೆ. ಕೇಂದ್ರ ಸರ್ಕಾರ OMSS(D) ಯೋಜನೆಯಡಿ ರಾಜ್ಯ ಸರ್ಕಾರದ ಹೆಚ್ಚುವರಿ ಕಾರ್ಡ್‌ಗಳಿಗೆ ಬೇಕಾಗುವ 20,000 ಮೆ.ಟ. ಅಕ್ಕಿಯನ್ನು 28 ರೂ. ದರದಲ್ಲಿ ಎಫ್‌ಸಿಐ ಮೂಲಕ ಖರೀದಿಸಲು ತೀರ್ಮಾನಿಸಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...