ಅನ್ನಭಾಗ್ಯ | ಅಕ್ಕಿಗಾಗಿ ತೆಲಂಗಾಣ ಸಿಎಂಗೆ ಸಿದ್ದರಾಮಯ್ಯ ಕರೆ

Date:

ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. ಆದರೆ, ಯೋಜನೆಗೆ ರಾಜ್ಯ ಸರ್ಕಾರಕ್ಕೆ ನೆರವು ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಕೊರತೆಯ ನೆಪ ಹೇಳಿ, ಅಗತ್ಯ ಅಕ್ಕಿ ಪೂರೈಕೆ ಮಾಡಲು ಸಾಧ್ಯವಿಲ್ಲವೆಂದು ಹೇಳಿದೆ. ಹೀಗಾಗಿ, ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಿಂದ ಅಕ್ಕಿ ಖರೀದಿಸಲು ಸರ್ಕಾರ ಮುಂದಾಗಿದೆ.

- Advertisement -

ಅನ್ನಭಾಗ್ಯ ಯೋಜನೆಯಲ್ಲಿ ಪಡಿತರದಾರರಿಗೆ ತಲಾ 10 ಕೆ.ಜೆ ಅಕ್ಕಿ ನೀಡುವುದಾಗಿ ಕಾಂಗ್ರೆಸ್‌ ಘೋಷಿಸಿದೆ. ಅದಕ್ಕಾಗಿ, ಸರ್ಕಾರಕ್ಕೆ ಪ್ರತಿ ತಿಂಗಳು 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬೇಕಾಗಿದೆ. ಕೇಂದ್ರದ ಅಸಹಕಾರದ ಹಿನ್ನೆಲೆ, ಅನ್ಯ ರಾಜ್ಯಗಳಿಂದ ಅಕ್ಕಿ ಖರೀದಿಗೆ ಸರ್ಕಾರ ಮುಂದಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ ಕರೆ ಮಾಡಿ, ಅಕ್ಕಿ ಖರೀದಿ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ಬಗ್ಗೆ ಸ್ವತಃ ಚಂದ್ರಶೇಖರ್‌ ರಾವ್‌ ಅವರೇ ಹೇಳಿಕೊಂಡಿದ್ದಾರೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ, “ಕರ್ನಾಟಕದ ನೂತನ ಮುಖ್ಯಮಂತ್ರಿಗಳ ಫೋನ್‌ ಬಂದಿತ್ತು. ‘ಅನ್ನಭಾಗ್ಯ ಯೋಜನೆ ಖಾತ್ರಿ ಪಡಿಸಲು ಅಕ್ಕಿ ಬೇಕಾಗಿದೆ. ದರ ನಿಗದಿ ಮಾಡಿದರೆ ಖರೀದಿ ಮಾಡುತ್ತೇವೆ’ ಎಂದು ಕೇಳಿದ್ದಾರೆ. ದರ ನಿಗದಿ ಬಗ್ಗೆ ಮಾತುಕತೆ ನಡೆಯುತ್ತಿದೆ. ಅಕ್ಕಿ ದಾಸ್ತಾನು ಮಾರಾಟ-ಖರೀದಿಗೆ ವಿಧಾನಗಳನ್ನು ರೂಪಿಸಲಾಗುತ್ತದೆ” ಎಂದು ಹೇಳಿದ್ದಾರೆ.

“ತೆಲಂಗಾಣ ತನ್ನ ಪಡಿತರ ಅಗತ್ಯಗಳನ್ನು ಪೂರೈಸಲು ಹೇರಳವಾಗಿ ಅಕ್ಕಿ ದಾಸ್ತಾನುಗಳನ್ನು ಹೊಂದಿದೆ. ಕೇಂದ್ರದ ನಿರ್ಧಾರದಿಂದ ತೆಲಂಗಾಣಕ್ಕೆ ಯಾವುದೇ ತೊಂದರೆಯಾಗುವುದಿಲ್ಲ” ಎಂದು ತೆಲಂಗಾಣ ನಾಗರಿಕ ಸರಬರಾಜು ಅಧಿಕಾರಿಗಳು ತಿಳಿಸಿದ್ದಾರೆ.

“ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (ಒಎಂಎಸ್‌ಎಸ್) ಅಡಿಯಲ್ಲಿ ರಾಜ್ಯಗಳಿಗೆ ಗೋಧಿ ಮತ್ತು ಅಕ್ಕಿ ಮಾರಾಟವನ್ನು ಕೇಂದ್ರ ಸರ್ಕಾರ ನಿಲ್ಲಿಸಿದೆ. ‘ಅನ್ನಭಾಗ್ಯ’ ಜಾರಿ ಮಾಡದಂತೆ ತಡೆಯುವ ಷಡ್ಯಂತ್ರ ಇದಾಗಿದೆ” ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...