ಅಕ್ಕಿ ಕೊಡಲು ನಿರಾಕರಿಸಿದ ಕೇಂದ್ರ ಸರ್ಕಾರ: ಜಾರಿ ಖಚಿತ ಎಂದ ಸಚಿವ ಕೆ.ಎಚ್ ಮುನಿಯಪ್ಪ

Date:

  • ಅಕ್ಕಿ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಅಸಹಕಾರ
  • ಅಕ್ಕಿ ಹೊಂದಿಸಲು ಮತ್ತೆ ಕಸರತ್ತು ಆರಂಭಿಸಿದ ರಾಜ್ಯ ಸರ್ಕಾರ

ಅನ್ನಭಾಗ್ಯ ಯೋಜನೆ ಜಾರಿಗೆ ಅಗತ್ಯವಾಗಿರುವ ಅಕ್ಕಿ ನೀಡುವ ವಿಚಾರದಲ್ಲಿ ಮತ್ತೆ ಕೇಂದ್ರ ಸರ್ಕಾರ ತನ್ನ ಮೊಂಡುತನ ಮುಂದುವರೆಸಿ ಅಸಹಕಾರ ತೋರಿದೆ. ಪರಿಣಾಮ ರಾಜ್ಯ ಸರ್ಕಾರ ಯೋಜನೆ ಜಾರಿಗೆ ಅಗತ್ಯ ಅಕ್ಕಿ ಹೊಂದಾಣಿಕೆಗೆ ಪರ್ಯಾಯ ಮಾರ್ಗ ಕಂಡಕೊಳ್ಳಬೇಕಿದೆ.

- Advertisement -

ಅಕ್ಕಿ ವಿತರಣೆಗೆ ಅಸಹಕಾರ ತೋರುತ್ತಿದ್ದ ಕೇಂದ್ರ ಸರ್ಕಾರದ ಜೊತೆ ಮತ್ತೊಂದು ಸುತ್ತಿನ ಮಾತುಕತೆ ಸಲುವಾಗಿ ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಎಚ್ ಮುನಿಯಪ್ಪ, ಇಂದು ಕೇಂದ್ರ ಮಂತ್ರಿ ಪಿಯೂಷ್‌ ಗೋಯಲ್‌ ಭೇಟಿಯಾಗಿ ಮಾತುಕತೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ನವದೆಹಲಿಯಲ್ಲಿಂದು ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಭೇಟಿಯಾಗಿ ರಾಜ್ಯಕ್ಕೆ ನೀಡಲಾಗುತ್ತಿರುವ ಅಕ್ಕಿಯನ್ನು ಶೀಘ್ರವೇ ಒದಗಿಸುವಂತೆ ಮನವಿ ಸಲ್ಲಿಸಿದರು. ಆದರೆ ರಾಜ್ಯದ ಮನವಿಗೆ ಕೇಂದ್ರ ಸರ್ಕಾರದ ಸ್ಪಂದನೆ ಸಕಾರಾತ್ಮಕವಾಗಿರಲಿಲ್ಲ ಎಂದು ಸಚಿವ ಮುನಿಯಪ್ಪ ತಿಳಿಸಿದರು.

ಗೋಯಲ್‌ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಆಹಾರ ಸಚಿವರು ನಮ್ಮ ಬೇಡಿಕೆಗೆ ಹಾರಿಕೆ ಉತ್ತರ ನೀಡಿದ್ದಾರೆ ಎಂದು ಹೇಳಿದರು. ಕೇಂದ್ರ ಕೊಟ್ಟರೂ ಕೊಡದಿದ್ದರೂ ನಾವು ಯೋಜನೆ ಜಾರಿ ಮಾಡುವುದು ಖಚಿತ ಎಂದು ಮುನಿಯಪ್ಪ ಸ್ಪಷ್ಟಪಡಿಸಿದರು.

ಕೇಂದ್ರ-ರಾಜ್ಯದ ನಡುವೆ ಜಟಾಪಟಿ

ಅನ್ನ ಭಾಗ್ಯಕ್ಕಾಗಿನ ಅಕ್ಕಿ ವಿತರಣೆಯಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಸಚಿವ ಮುನಿಯಪ್ಪ ಆರೋಪಿಸಿದ್ದರು. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಭಾರತೀಯ ಆಹಾರ ನಿಗಮ (ಎಫ್ಸಿಐ) ರಾಜ್ಯಕ್ಕೆ ಅಗತ್ಯವಿರುವ ಅಕ್ಕಿ ಪೂರೈಕೆ ಮಾಡುತ್ತಿಲ್ಲ. ಹೀಗಾಗಿ ಅಕ್ಕಿಗಾಗಿ ಬೇರೆ ರಾಜ್ಯಗಳಿಗೆ ಮನವಿ ಮಾಡುವಂತಾಗಿದೆ.

ಈಗಾಗಲೇ ಛತ್ತೀಸ್‌ಘಢ ಮತ್ತು ಪಂಜಾಬ್ ಸರ್ಕಾರಗಳು ಅಕ್ಕಿ ಕೊಡಲು ಮುಂದೆ ಬಂದಿವೆ. ಆದರೆ ಛತ್ತೀಸ್‌ಘಢ ಸರ್ಕಾರ ಕೇವಲ ಒಂದು ತಿಂಗಳಿಗೆ ಆಗುವಷ್ಟು(1.5 ಮೆಟ್ರಿಕ್ ಟನ್) ಅಕ್ಕಿ ಕೊಡುವುದಾಗಿ ಹೇಳಿದೆ. ಈ ಹಿನ್ನೆಲೆಯಲ್ಲಿ ಬೇರೆ ರಾಜ್ಯಗಳ ಆಹಾರ ಸಚಿವರ ಜೊತೆಗೆ ಈ ಕುರಿತು ಸಭೆ ನಡೆಸಲಾಗುತ್ತಿದೆ ಎಂದರು.ಕೆ ಎಚ್_ ಮುನಿಯಪ್ಪ -ಗೋಯಲ್

ಅಕ್ಕಿಯನ್ನು ಕೇಂದ್ರದಿಂದ ಪುಕ್ಕಟೆ ಕೇಳುತ್ತಿಲ್ಲ. ಅದಕ್ಕೆ ಹಣವನ್ನು ಕೊಡುತ್ತೇವೆ ಎಂದು ಹೇಳಿದ್ದೇವೆ. ಆದರೆ, ಕೇಂದ್ರದಿಂದ ಸಹಕಾರ ಸಿಗುತ್ತಿಲ್ಲ. ಹೀಗಾಗಿ ನಮ್ಮದೇ ಆದಂತ ವ್ಯವಸ್ಥೆಯನ್ನು ಮಾಡಿಕೊಳ್ಳುತ್ತಿದ್ದೇವೆ. ಎನ್ಸಿಸಿಎಫ್, ನಾಫೆಡ್, ಕೇಂದ್ರೀಯ ಭಂಡಾರ ಮುಖಾಂತರ ಅಕ್ಕಿ ಖರೀದಿ ಮಾಡುತ್ತೇವೆ.

ಈ ಸುದ್ದಿ ಓದಿದ್ದೀರಾ?:ಅಕ್ಕಿ ಕೊಡದಿರುವ ನೀಚ ಬುದ್ಧಿ ನಮಗಿಲ್ಲ: ಡಿ ವಿ ಸದಾಂದಗೌಡ ತಿರುಗೇಟು

ಹೊರ ರಾಜ್ಯದಿಂದ ಪಡಿತರಕ್ಕೆ ಅಗತ್ಯ ಧಾನ್ಯಗಳ ಖರೀದಿ ಮಾಡಿದರೆ ಸಾರಿಗೆ ವೆಚ್ಚ ಹೆಚ್ಚುವರಿಯಾಗುತ್ತದೆ. ಇದಕ್ಕಾಗಿ ಕೇಂದ್ರ ಸಂಸ್ಥೆಗಳಿಂದ ಖರೀದಿ ಮಾಡಲು ಮುಂದಾಗಿದ್ದೇವೆ. ಕೇಂದ್ರದ ಸಂಸ್ಥೆಗಳಾದರೆ ಅವರೇ ತರಿಸಿಕೊಂಡು ನಮಗೆ ಕೊಡುತ್ತಾರೆ. ಹೀಗಾಗಿ ಇಲ್ಲಿಂದಲೇ ದಾನ್ಯಗಳ ಖರೀಗೆ ಮಾತುಕತೆ ನಡೆಸುತ್ತಿದ್ದೇವೆ ಎಂದವರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...