ಅಣ್ಣಾಮಲೈ ಮುಂದಿನ ಭವಿಷ್ಯವೇನು? ಇವೆ ಹಲವು ಊಹಾಪೋಹಗಳು!

Date:

ತಮಿಳುನಾಡಿನಲ್ಲಿ ಬಿಜೆಪಿ-ಎಐಡಿಎಂಕೆ ಮೈತ್ರಿಯ ಹಾದಿ ಮತ್ತು ಜಾತಿ ಸಮೀಕರಣವನ್ನು ‘ಸುಗಮಗೊಳಿಸಲು’ ಕೆ ಅಣ್ಣಾಮಲೈ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. ಆ ಹುದ್ದೆಗೆ ನೈನಾರ್ ನಾಗೇಂದ್ರನ್‌ ಅವರನ್ನು ನೇಮಿಸಲಾಗಿದೆ. ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿದಿರುವ ಅಣ್ಣಾಮಲೈ ಅವರ ಭವಿಷ್ಯದ ಬಗ್ಗೆ ಹಲವು ಚರ್ಚೆಗಳು ನಡೆಯುತ್ತಿವೆ. ಅವರಿಗೆ ಪಕ್ಷದಲ್ಲಿ ‘ರಾಷ್ಟ್ರೀಯ ಸ್ಥಾನ’ ನೀಡುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ.

- Advertisement -

ಇತ್ತೀಚೆಗೆ ತಮಿಳುನಾಡಿಗೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಿರ್ಗಮಿತ ಅಧ್ಯಕ್ಷ ಅಣ್ಣಾಮಲೈ ಅವರನ್ನು ಶ್ಲಾಘಿಸಿದರು. “ಪಕ್ಷದ ರಾಷ್ಟ್ರೀಯ ಕಾರ್ಯನಿರ್ವಹಣೆಯಲ್ಲಿ ಅಣ್ಣಾಮಲೈ ಅವರ ಶ್ರಮ-ಕೌಶಲ್ಯಗಳನ್ನು ಬಿಜೆಪಿ ಬಳಸಿಕೊಳ್ಳಲಿದೆ” ಎಂದು ಅಮಿತ್ ಶಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ತಮಿಳುನಾಡಿನಲ್ಲಿ ಅಂತಹ ಪ್ರಬಲ ನೆಲೆಯನ್ನು ಹೊಂದಿರದ ಬಿಜೆಪಿ, ಕೆಲವು ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳುವಲ್ಲಿ ಅಣ್ಣಾಮಲೈ ಅವರ ಪಾತ್ರವಿದೆ ಎಂದು ಬಿಜೆಪಿಗರು ಹೇಳುತ್ತಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿಯ ಮತ ಪಾಲು ಕೇವಲ 3% ಇತ್ತು.ಅಣ್ಣಾಮಲೈ ನೇತೃತ್ವದಲ್ಲಿ 2024ರ ಚುನಾವಣೆಯಲ್ಲಿ ಅದು 11%ಗೆ ಏರಿಕೆಯಾಗಿದೆ. ಬಿಜೆಪಿಯ ಮತ ಹಂಚಿಕೆ ಹೆಚ್ಚಿಸುವಲ್ಲಿ ಅಣ್ಣಾಮಲೈ ಪಾತ್ರ ಮುಖ್ಯವಾದದ್ದು ಎಂದು ಪಕ್ಷವು ಭಾವಿಸಿದೆ.

ಈ ವರದಿ ಓದಿದ್ದೀರಾ?: ಭ್ರಷ್ಟಾಚಾರ ನಿಗ್ರಹಕ್ಕೆ ಸಾಂಸ್ಥಿಕ ಬದಲಾವಣೆಯೊಂದೇ ದಾರಿಯೇ?

ಐಪಿಎಸ್ ಅಧಿಕಾರಿ ಹುದ್ದೆಯನ್ನು ತೊರೆದು, ಬಿಜೆಪಿ ಸೇರಿ ರಾಜಕಾರಣ ಆರಂಭಿಸಿದ ಅಣ್ಣಾಮಲೈ ಅವರನ್ನು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಅಥವಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಬಹುದು. ಮಾತ್ರವಲ್ಲದೆ, ಮುಂದಿನ ದಿನಗಳಲ್ಲಿ ಸರ್ಕಾರದ ಭಾಗವಾಗಿಯೂ ನೇಮಿಸಿಕೊಳ್ಳಬಹುದು ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಆದಾಗ್ಯೂ, ಕೇಂದ್ರ ಸಚಿವ ಸಂಪುಟ ಪುನರ್ರಚನೆ ಮಾಡುವ ಬಗ್ಗೆ ಬಿಜೆಪಿಯಲ್ಲಿ ಸದ್ಯಕ್ಕೆ ಯಾವುದೇ ಯೋಜನೆಗಳಿಲ್ಲ. ಸದ್ಯ, ತಮಿಳುನಾಡಿನಿಂದ ಒಬ್ಬ ಸಚಿವ ಎಲ್ ಮುರುಗನ್ ಇದ್ದಾರೆ. ಹೀಗಾಗಿ, ಅಣ್ಣಾಮಲೈ ಅವರು ಹೆಚ್ಚು ದಿನ ಕಾಯಬೇಕಾಗಬಹುದು” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...