ಅಣ್ಣಾಮಲೈ ಚಾಟಿ ಏಟು ಪ್ರಕರಣ | ಸ್ತ್ರೀ ಕುಲದ ರಕ್ಷಣೆಗಾಗಿ ವಿನೂತನ ಪ್ರತಿಭಟನೆ: ಬಿ ವೈ ವಿಜಯೇಂದ್ರ

Date:

ತಮಿಳುನಾಡು ಅಣ್ಣಾ ವಿಶ್ವವಿದ್ಯಾಲಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ವತಃ ಚಾಟಿ ಬೀಸಿಕೊಂಡು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕೆಲವರು ಅಣ್ಣಾಮಲೈ ನಡೆಯನ್ನು ಬೆಂಬಲಿಸಿದರೆ ಮತ್ತೆ ಕೆಲವರು ಇದೊಂದು ಅತಿರೇಕದ ನಡೆ ಎಂದು ಟೀಕಿಸಿದ್ದಾರೆ.

- Advertisement -

ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಅಣ್ಣಾಮಲೈ ಬೆಂಬಲಕ್ಕೆ ಧಾವಿಸಿದ್ದು, “ಇದು ದೈವಶ್ರದ್ಧೆ, ಆಚಾರ ವಿಚಾರಗಳು ನಂಬಿಕೆಯನ್ನು ಆಧರಿಸಿದೆ.”ಸಂತ್ರಸ್ತ ವಿದ್ಯಾರ್ಥಿನಿಯ ಪರವಾಗಿ ಧ್ವನಿ ಎತ್ತಿರುವ ಅಣ್ಣಾಮಲೈ ಅವರ ಬೆಂಬಲಕ್ಕೆ ನಾವೆಲ್ಲಾ ಗಟ್ಟಿಯಾಗಿ ನಿಂತಿದ್ದೇವೆ” ಎಂದು ಟ್ವೀಟ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ದೈವಶ್ರದ್ಧೆ, ಆಚಾರ ವಿಚಾರಗಳು ನಂಬಿಕೆಯನ್ನು ಆಧರಿಸಿದ್ದು, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಅಣ್ಣಾಮಲೈ ಅವರು ತಮ್ಮ ನಂಬಿಕೆಯನ್ನು ಆಧರಿಸಿ ದೈವ ಶ್ರದ್ಧೆಯನ್ನು ಪ್ರದರ್ಶಿಸುವ ಮೂಲಕ ತಮಿಳುನಾಡಿನ ಅಣ್ಣಾ ಯೂನಿವರ್ಸಿಟಿಯಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ ಘಟನೆಯ ವಿರುದ್ಧ ಹೋರಾಟಕ್ಕಿಳಿದು ‘ದಾಷ್ಟ್ಯತನದಿಂದ ವರ್ತಿಸುತ್ತಿರುವ’ ಡಿಎಂಕೆ ಸರ್ಕಾರವು ಆರೋಪಿತ ದುಷ್ಕರ್ಮಿಗಳ ವಿರುದ್ಧ ಕಾನೂನಿನ ಚಾಟಿ ಬೀಸದ ಧೋರಣೆಯನ್ನು ಪ್ರತಿಭಟನಾ ಸೂಚಕವಾಗಿ ದೈವಶ್ರದ್ಧೆಯ ಚಾಟಿ ಏಟು ಬಾರಿಸಿಕೊಂಡು ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಳೆದುಹೋದ ವರ್ಚಸ್ಸು ಮತ್ತು ಗೇಲಿಯ ಸರಕಾದ ‘ಹೈಡ್ರಾಮಾ’

“ಈ ಪ್ರತಿಭಟನೆಯನ್ನು ಕೆಲವು ವಿಕೃತಿಗಳು ವಿಡಂಬನೆ ಮಾಡುತ್ತಿವೆ, ಸ್ತ್ರೀ ಕುಲದ ರಕ್ಷಣೆಗಾಗಿ, ಸಂತ್ರಸ್ತ ವಿದ್ಯಾರ್ಥಿನಿಗೆ ನ್ಯಾಯ ದೊರಕಿಸಿಕೊಡಲು ವಿನೂತನ ರೀತಿಯಲ್ಲಿ ಪ್ರತಿಭಟಿಸಿದ ಕ್ರಮವನ್ನು ನಾವೆಲ್ಲರೂ ಬೆಂಬಲಿಸಬೇಕಿದೆ. ಈ ಸಂಬಂಧ ವಿಕೃತಿ ಮೆರೆಯುವವರ ಹೇಳಿಕೆ ಹಾಗೂ ವರ್ತನೆಯನ್ನು ಖಂಡಿಸಬೇಕಿದೆ” ಎಂದು ಹೇಳಿದ್ದಾರೆ.

“ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೆ ಪಾದರಕ್ಷೆಗಳನ್ನು ತೊಡುವುದಿಲ್ಲ ಎಂದು ಭೀಷ್ಮ ಪ್ರತಿಜ್ಞೆ ತೊಟ್ಟಿರುವ ಕೆ.ಅಣ್ಣಾಮಲೈ ಅವರ ಶಪಥದ ಹೋರಾಟ ಗೆಲುವಿನ ಗುರಿ ಮುಟ್ಟಲಿ ಎಂದು ಹಾರೈಸೋಣ. ತಮಿಳುನಾಡಿನ ಮಹಿಳಾ ಪೀಡಕ ಡಿಎಂಕೆ ಸರ್ಕಾರದ ವಿರುದ್ಧ ಆರಂಭವಾಗಿರುವ ದಿಟ್ಟ ಹೋರಾಟ ಬಿಜೆಪಿಯ ಬದ್ಧತೆ ಏನೆಂಬುದನ್ನು ಸಾಕ್ಷೀಕರಿಸಿದೆ.” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...