ಕರ್ನಾಟಕ ವಿಧಾನಪರಿಷತ್‌ನಲ್ಲಿ ಖಾಲಿ ಇರುವ ಆರು ಸ್ಥಾನಗಳಿಗೆ ಚುನಾವಣಾ ದಿನಾಂಕವು ಇಂದು ಘೋಷಣೆಯಾಗಿದ್ದು, ಜೂನ್ 3ರಂದು ಮತದಾನ ಪ್ರಕ್ರಿಯೆ ನಡೆಯಲಿದೆ.
ಆರು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಇನ್ನು ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ.
ಇದನ್ನು ಓದಿದ್ದೀರಾ? ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಮಾಯ; ‘ಕೋವಿಶೀಲ್ಡ್ ಎಫೆಕ್ಟ್’ ಎಂದ ನೆಟ್ಟಿಗರು!
ಈಶಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ , ಆಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಮೇ 16 ಕೊನೆಯ ದಿನವಾಗಿದೆ. ಇನ್ನು ನಾಮಪತ್ರ ಹಿಂಪಡೆಯಲು ಮೇ 20 ಕೊನೆಯ ದಿನವಾಗಿದೆ.
