ಬಜೆಟ್‌ 23-24 | ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ʻವಿದ್ಯಾರ್ಥಿಗಳಿಗಾಗಿ ತೋಟಗಾರಿಕೆʼ ಯೋಜನೆ ಘೋಷಣೆ

Date:

Advertisements

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಕ್ಷೇತ್ರದ ಪ್ರಾಯೋಗಿಕ ಅರಿವು ಮೂಡಿಸಲು ʻವಿದ್ಯಾರ್ಥಿಗಳಿಗಾಗಿ ತೋಟಗಾರಿಕೆʼ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ಬಜೆಟ್‌ ಭಾಷಣದಲ್ಲಿ ತೋಟಗಾರಿಕೆ ಇಲಾಖೆ ಕುರಿತು ವಿಷಯ ಪ್ರಸ್ತಾಪಿಸಿದ ಅವರು, “ರೈತರ ಆದಾಯವನ್ನು ಹೆಚ್ಚಿಸುವುದರಲ್ಲಿ ತೋಟಗಾರಿಕಾ ಬೆಳೆಗಳು ಪ್ರಮುಖ ಪಾತ್ರ ವಹಿಸುತ್ತವೆ. ತೋಟಗಾರಿಕಾ ವಲಯದಲ್ಲಿನ ರಾಜ್ಯದ ಸಾಮರ್ಥ್ಯವನ್ನು ಹೆಚ್ಚಿಸಲು ತೆಂಗು, ಅಡಿಕೆ, ದ್ರಾಕ್ಷಿ, ದಾಳಿಂಬೆ, ಮಾವು ಮತ್ತಿತರ ಹಣ್ಣು, ತರಕಾರಿ, ಹೂವುಗಳು ಸೇರಿದಂತೆ ತೋಟಗಾರಿಕಾ ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್ ಮತ್ತು ರಫ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು” ಎಂದರು.

“2023-24ನೇ ಸಾಲಿನಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ರೋಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು. ತೋಟಗಾರಿಕಾ ಉತ್ಪನ್ನಗಳ ಸಂಸ್ಕರಣೆಗಾಗಿ ಎಂಟು ಶೀತಲ ಘಟಕಗಳನ್ನು ನಿರ್ಮಾಣ ಮಾಡಲಾಗುವುದು. ಅನನ್ಯವಾದ ರುಚಿ ಮತ್ತು ಕಂಪನ್ನು ಹೊಂದಿರುವ ಚಿಕ್ಕಮಗಳೂರು, ಕೊಡಗು ಮತ್ತು ಬಾಬಾ ಬುಡನಗಿರಿಯ ಅರೇಬಿಕಾ ಕಾಫಿ ವೈವಿಧ್ಯಗಳು GI Tag ಹೊಂದಿವೆ. ರಾಜ್ಯದ ಕಾಫಿಯನ್ನು ಇನ್ನಷ್ಟು ಪ್ರಚುರಪಡಿಸಿ ಜನಪ್ರಿಯಗೊಳಿಸಲು ಮತ್ತು ಕಾಫಿ ಎಕೋ ಟೂರಿಸಂ ಅನ್ನು ಉತ್ತೇಜಿಸಲು ಕರ್ನಾಟಕದ ಕಾಫಿಗೆ ಬ್ರಾಂಡಿಂಗ್‌ ಮಾಡಲು ಕ್ರಮ ವಹಿಸಲಾಗುವುದು” ಎಂದು ಹೇಳಿದರು.

Advertisements

“ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳು GI Tag ಗಳನ್ನು ಪಡೆದಿವೆ. ಇವುಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್‌ ಉತ್ತೇಜಿಸಲು ನೂತನ ಕಾರ್ಯಕ್ರಮವನ್ನು ರೂಪಿಸಲಾಗುವುದು” ಎಂದರು.

“ವಾಣಿಜ್ಯ ಹೂವಿನ ರಫ್ತಿನಲ್ಲಿ ಕರ್ನಾಟಕ ಅಗ್ರಸ್ಥಾನ ಹೊಂದುವ ಸಾಮರ್ಥ್ಯ ಹೊಂದಿದ್ದು, ಇವುಗಳ ತಳಿಗಳ ಕೊರತೆ ನಿವಾರಿಸಲು ಅಂತಹ ತಳಿಗಳನ್ನು ಆಮದು ಮಾಡಿಕೊಂಡು ರೈತರಿಗೆ ಕೈಗೆಟಕುವ ದರದಲ್ಲಿ ಒದಗಿಸಲು ಕ್ರಮವಹಿಸಲಾಗುವುದು” ಎಂದು ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X