2033ರವರೆಗೂ 150 ಕಿ.ಮೀ. ಅಂತರದಲ್ಲಿ ಇನ್ನೊಂದು ಏರ್‌ಪೋರ್ಟ್ ಮಾಡುವಂತಿಲ್ಲ: ಸಚಿವ ಎಂ ಬಿ ಪಾಟೀಲ್

Date:

ರಾಜಧಾನಿಯ ಸಮೀಪ ನಿರ್ಮಿಸಲು ಉದ್ದೇಶಿಸಿರುವ ಎರಡನೇ ವಿಮಾನ ನಿಲ್ದಾಣ ಸಂಬಂಧ ಮೂರೂ ಸ್ಥಳಗಳ ಪರಿಶೀಲನೆ ನಡೆಸಿರುವ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡವು ಇನ್ನು ಒಂದು ತಿಂಗಳಲ್ಲಿ ತನ್ನ ಅಭಿಪ್ರಾಯ ತಿಳಿಸುವ ಸಾಧ್ಯತೆ ಇದೆ ಎಂದು ಸಚಿವ ಎಂ ಬಿ ಪಾಟೀಲ್‌ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಗುರುವಾರ ಈ ಕುರಿತು ಸುದ್ದಿಗಾರರ ಜೊತೆ ಮಾಹಿತಿ ಹಂಚಿಕೊಂಡ ಅವರು, “ಅಭಿಪ್ರಾಯದ ಬಳಿಕ ಇದನ್ನು ವಿಸ್ತೃತ ಅಧ್ಯಯನಕ್ಕೆ ವಿಮಾನ‌ ನಿಲ್ದಾಣಗಳ ಅಭಿವೃದ್ಧಿಪಡಿಸುವಂತಹ ಪರಿಣತ ಕಂಪನಿಗಳ ಮುಂದೆ ಕೊಂಡೊಯ್ಯಲಾಗುವುದು. ಬಳಿಕ ಸರಕಾರವು ವಿಮಾನ‌ ನಿಲ್ದಾಣಕ್ಕೆ ಸ್ಥಳವನ್ನು ಅಂತಿಮಗೊಳಿಸಲಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಎಎಐ ತಂಡ ಬಂದು ಹೋಗಿರುವುದು ನಿಜ. ವಿಮಾನ‌ ನಿಲ್ದಾಣವನ್ನು ಎಲ್ಲಿ ಮಾಡಿದರೆ ಸೂಕ್ತವೆನ್ನುವುದು ಪ್ರಯಾಣಿಕರ ದಟ್ಟಣೆ, ಕಾರ್ಗೋ ದಟ್ಟಣೆ ಮತ್ತು ಕೈಗಾರಿಕಾ ಅಗತ್ಯ ಮುಂತಾದ ಅಂಶಗಳನ್ನು ಅವಲಂಬಿಸಿದೆ. ಈಗ ದೇವನಹಳ್ಳಿ ಬಳಿ ವಿಮಾನ‌ ನಿಲ್ದಾಣವಿದೆ. 2033ರವರೆಗೂ ಇಲ್ಲಿಂದ 150 ಕಿ.ಮೀ. ಅಂತರದಲ್ಲಿ ಇನ್ನೊಂದು ಏರ್ಪೋರ್ಟ್ ಮಾಡಬಾರದು ಎನ್ನುವ ಷರತ್ತಿದೆ. ನಾವು ಈಗಿನಿಂದಲೇ ಪ್ರಾರಂಭಿಸಿದರೆ, 2030ರ ವೇಳೆಗೆ ಎರಡನೇ ಏರ್ಪೋರ್ಟ್ ಅಭಿವೃದ್ಧಿ ಪ್ರಾರಂಭಿಸಬಹುದು. ಇಲ್ಲದೆ ಹೋದರೆ 2040ನೇ ಇಸವಿ ಬಂದರೂ ವಿಮಾನ‌ ನಿಲ್ದಾಣ ಆಗುವುದಿಲ್ಲ” ಎಂದು ವಿವರಿಸಿದ್ದಾರೆ.

“ಹಿರಿಯ ನಾಯಕ ಟಿ ಬಿ ಜಯಚಂದ್ರ ಅವರು ತಮ್ಮ ಕ್ಷೇತ್ರವಾದ ಶಿರಾ ಸಮೀಪ ಏರ್ಪೋರ್ಟ್ ಬರಲೆಂದು ಪ್ರಯತ್ನ ಶುರು ಮಾಡಿದ್ದಾರೆ. ಅಲ್ಲಿ ಜಿಲ್ಲಾ ಮಟ್ಟದ ಏರ್ಪೋರ್ಟ್ ಮಾಡಬಹುದೇ ವಿನಾ ಅದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗುವುದಿಲ್ಲ. ಬಿಜೆಪಿಯ ಅರವಿಂದ ಬೆಲ್ಲದ್ ಕೂಡ ಉತ್ತರ ಕರ್ನಾಟಕಕ್ಕೆ ಅನುಕೂಲವಾಗುವ ಜಾಗದಲ್ಲಿ ಹೊಸ ಏರ್ಪೋರ್ಟ್ ಬರಲಿ ಎನ್ನುತ್ತಿದ್ದಾರೆ. ಕೇವಲ ಜಾಗವನ್ನು ಕೊಟ್ಟ ಮಾತ್ರಕ್ಕೆ ಎಲ್ಲವೂ ಆಗುವುದಿಲ್ಲ” ಎಂದು ಹೇಳಿದ್ದಾರೆ.

“ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿದೆ. ಸುಪ್ರೀಂಕೋರ್ಟಿನಲ್ಲಿ ಪರಿಸರ ಇಲಾಖೆಯ ಅನುಮತಿ ಸಂಬಂಧ ಒಂದು ಪ್ರಕರಣವಿದೆ. ಅದು ಸದ್ಯದಲ್ಲೇ ಇತ್ಯರ್ಥಗೊಳ್ಳುವ ಲಕ್ಷಣಗಳಿವೆ. ಇದಾದರೆ, ಇನ್ನು 6 ತಿಂಗಳಲ್ಲಿ ಉದ್ಘಾಟನೆ ಆಗಲಿದೆ” ಎಂದು ತಿಳಿಸಿದ್ದಾರೆ.

ರಾಯರಡ್ಡಿ ಮಾತನ್ನು ಪಕ್ಷ ಗಮನಿಸಲಿದೆ

“ಕಾಂಗ್ರೆಸ್ಸಿನ ಹಿರಿಯ ನಾಯಕ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಕರ್ನಾಟಕವು ಭ್ರಷ್ಟಾಚಾರದಲ್ಲಿ ನಂಬರ್ ಒನ್ ಆಗಿದೆ ಎಂದು ಹೇಳಿದ್ದಾರೆ. ಭ್ರಷ್ಟಾಚಾರದಲ್ಲಿ ಯಾರಾರು ಭಾಗಿಯಾಗಿದ್ದಾರೆ ಎನ್ನುವುದನ್ನೂ ಅವರು ಹೇಳಬೇಕಿತ್ತು. ಅವರ ಮಾತುಗಳನ್ನು ಪಕ್ಷವು ಗಮನಿಸಿದೆ. ಯಾರೂ ಪಕ್ಷಕ್ಕಿಂತ ದೊಡ್ಡವರಿಲ್ಲ” ಎಂದು ಹೇಳಿದ್ದಾರೆ.

“ಅಹಮದಾಬಾದ್ ಎಐಸಿಸಿ ಅಧಿವೇಶನದಲ್ಲಿ ಪಕ್ಷವು ಬಡವರು, ದಲಿತರು, ಮಹಿಳೆಯರು ಮತ್ತು ಅಲ್ಪಸಂಖ್ಯಾತರನ್ನು ಗಮನದಲ್ಲಿಟ್ಟುಕೊಂಡು ನಿರ್ಣಯಗಳನ್ನು ತೆಗೆದುಕೊಂಡಿದೆ. ಒಬ್ಬರಿಗೆ ಒಂದೇ ಹುದ್ದೆ ಎನ್ನುವ ನಿಯಮಕ್ಕೆ ಪಕ್ಷದಲ್ಲಿ ಕೆಲವು ಅಪವಾದಗಳೂ ಇವೆ. ಅನುಭವ ಮತ್ತು ಹಿರಿತನಗಳ ಮೇಲೆ ಇಂತಹ ವಿನಾಯಿತಿ ಕೊಡಬೇಕಾಗುತ್ತದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...