ದಿನಗೂಲಿ ಕಾರ್ಮಿಕರ ಮನೆ ನೆಲಸಮ ಆರೋಪ: ಶಾಸಕ ಮುನಿರತ್ನ ವಿರುದ್ದ ಮತ್ತೊಂದು ಎಫ್‌ಐಆರ್‌

Date:

ಈಗಾಗಲೇ ಅತ್ಯಾಚಾರ, ಹನಿಟ್ರ್ಯಾಪ್‌, ಭ್ರಷ್ಟಾಚಾರ ಸೇರಿ ಹಲವು ಪ್ರಕರಣಗಳಲ್ಲಿ ಕ್ರಿಮಿನಲ್‌ ಮೊಕದ್ದಮೆಗಳನ್ನು ಎದುರಿಸುತ್ತಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

- Advertisement -

ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ದಿನಗೂಲಿ ಕಾರ್ಮಿಕರ ಮನೆಗಳನ್ನು ನೆಲಸಮ ಮಾಡಿರುವ ಆರೋಪದ ಮೇಲೆ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಕೊಳೆಗೇರಿಯಲ್ಲಿ ಸುಮಾರು 50 ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಶಾಸಕ ಮುನಿರತ್ನ ಮತ್ತು ಸಹಚರರು ಜೆಸಿಬಿ ತಂದು ಏಕಾಏಕಿ ಎಲ್ಲರ ಮನೆಯನ್ನು ನೆಲಸಮ ಮಾಡಿದ್ದಾರೆ ಎಂಬ ಗಂಭೀರ ಆರೋಪದ ಮೇಲೆ ದೂರು ನೀಡಲಾಗಿದೆ.

ವಸಂತ್ ಕುಮಾರ್, ಚನ್ನಕೇಶವ, ನವೀನ್, ರಾಮ , ಕಿಟ್ಟಿ , ಗಂಗಾ ಎಂಬುವವರು ಬಂದು ಮನೆ ನೆಲಸಮ ಮಾಡಿಸಿದ್ದಾರೆ. ಒಂದೊಂದು ಮನೆಯಲ್ಲಿ ಕೂಡಿಟ್ಟಿದ್ದ 20-70 ಸಾವಿರ ರೂ. ಹಣ 30 ಗ್ರಾಂ ಚಿನ್ನಾಭರಣ ಕೂಡ ನಾಶವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಶಾಸಕ ಮುನಿರತ್ನ ತಮ್ಮ ರಾಜಕೀಯ ಪ್ರಭಾವ ಬಳಸಿ ಕೂಲಿ ಕಾರ್ಮಿಕರ ಮೇಲೆ ದರ್ಪ ತೋರಿದ್ದಾರೆ ಎಂದು ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ರೋಹಿತ್‌ ಕಾಯ್ದೆ’ ಜಾರಿಗಾಗಿ ಆಗಬೇಕಿದೆ ‘ಜನಾಂದೋಲನ’

ಮುನಿರತ್ನ ವಿರುದ್ಧ ಈಗಾಗಲೇ ಸರಣಿ ಆರೋಪಗಳು ಕೇಳಿ ಬಂದಿದ್ದು, ಜೈಲಿಗೂ ಕೂಡ ಹೋಗಿ ಬಂದಿದ್ದಾರೆ. ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆಯೊಬ್ಬರು ಶಾಸಕನ ವಿರುದ್ಧ ದೂರು ನೀಡಿದ್ದರು. 2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬೆದರಿಕೆ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದರು.

ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​ ದಾಖಲಿಸಿ, ಮುನಿರತ್ನ ಅವರನ್ನು ಬಂಧನಕ್ಕೊಳಪಡಿಸಿದ್ದರು.

ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆಯಲ್ಲಿ ಕಮಿಷನ್ ನೀಡುವಂತೆ ಗುತ್ತಿಗೆದಾರ ಚಲುವರಾಜ್​ ಅವರಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ವೈಯಾಲಿಕಾವಲ್‌ ಠಾಣೆಯಲ್ಲಿ ಮುನಿರತ್ನ ವಿರುದ್ಧ ಪ್ರತ್ಯೇಕ ಎಫ್‌ಐಆರ್‌ ದಾಖಲಾಗಿದ್ದವು.

ಈ ಕೃತ್ಯ ಬೆಳಕಿಗೆ ಬಂದ ನಂತರ ನಗರ ತೊರೆದು ಆಂಧ್ರ ಪ್ರದೇಶದತ್ತ ಹೊರಟಿದ್ದ ಮುನಿರತ್ನ ಅವರನ್ನು ಕೋಲಾರ ಜಿಲ್ಲೆ ಮುಳಬಾಗಿಲು ಸಮೀಪ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ಪೊಲೀಸರ ವಿಚಾರಣೆ ನಡುವಲ್ಲೇ ಶಾಸಕರ ವಿರುದ್ಧ ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಆರೋಪಗಳು ಕೇಳಿ ಬಂದವು. ಇದೀಗ ದಿನಗೂಲಿ ಕೆಲಸಗಾರರ ಮೇಲೂ ದೌರ್ಜನ್ಯ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...