ಜಾತಿ ನಿಂದನೆ, ಹನಿಟ್ರಾಪ್, ಎಚ್‌ಐವಿ ಸೋಂಕಿ ರಕ್ತ ಚುಚ್ಚಲು ಸಂಚು ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಬಂದಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಇದೀಗ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಕೊಲೆಗೆ ಸುಪಾರಿ ನೀಡಿದ ಆರೋಪದ ಮೇಲೆ ನಂದಿನಿ ಲೇಔಟ್ ಪೊಲೀಸ್ ಠಾಣೆಯ ಪೊಲೀರು ಎಫ್‌ಐಆರ್ ದಾಖಲಿಸಿದ್ದಾರೆ.
ಬಿಬಿಎಂಪಿಯ ಮಾಜಿ ಕಾರ್ಪೊರೇಟರ್ ಮಂಜುಳಾ ಅವರ ಪತಿ ನಾರಾಯಣಸ್ವಾಮಿ ನೀಡಿದ ದೂರಿನ ಆಧಾರದ ಮೇಲೆ ಪ್ರರಕಣ ದಾಖಲಾಗಿದೆ.
“ಬಿಜೆಪಿ ಶಾಸಕ ಮುನಿರತ್ನ ನಮ್ಮ ಮೇಲೆ ದೌರ್ಜನ್ಯ ಎಸಗಿದ್ದಾರೆ. ನಮ್ಮನ್ನು ಲೈಂಗಿಕ ಹಗರಣದಲ್ಲಿ ಸಿಲುಕಿಸಲು ಸಂಚು ಹೂಡಿದ್ದರು. “ನನ್ನ ಮೇಲೆ ಮತ್ತು ನನ್ನ ಪತ್ನಿ ಮಂಜುಳಾ ಮೇಲೆ ಮುನಿರತ್ನ ದಾಳಿ ಮಾಡಿದ್ದರು. ಎಸ್‌ಐಟಿಗೆ ದೂರು ಕೊಡಲು ಹೋಗಿದ್ದೆ, ಅವರು ಸ್ಥಳೀಯ ಠಾಣೆಯಲ್ಲಿ ದೂರು ಕೊಡಲು ಹೇಳಿದ್ದರಿಂದ ನಂದಿನಿ ಲೇಔಟ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ” ಎಂದು ನಾರಾಯಣಸ್ವಾಮಿ ಹೇಳಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇನ್ನು, ಜಾತಿ ನಿಂದನೆ ಪ್ರಕರಣದಲ್ಲಿ ಬಿಬಿಎಂಪಿ ಗುತ್ತಿಗೆದಾರ ವೇಲು ನಾಯ್ಕರ್ ಬಿಡುಗಡೆ ಮಾಡಿದ್ದ ಆಡಿಯೋದ ಎಫ್‌ಎಸ್‌ಎಲ್ ವರದಿ ಬಂದಿದ್ದು, ಆಡಿಯೋದಲ್ಲಿರುವ ಧ್ವನಿ ಮುನಿರತ್ನ ಅವರದ್ದೇ ಎಂಬುದು ದೃಢಪಟ್ಟಿದೆ.