ಮಿಸ್ಟರ್ ಮೋದಿಯವರೇ ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು? ದೇಶಕ್ಕೆ ಉತ್ತರಿಸಿ: ಸಿದ್ದರಾಮಯ್ಯ

Date:

ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು ಮಿಸ್ಟರ್ ಮೋದಿಯವರೇ? ಕಾಂಗ್ರೆಸ್ ಮತ್ತು ಬೇರೆ ಪಕ್ಷದ ಶಾಸಕರುಗಳಿಗೆ ಕೋಟಿ ಕೋಟಿ ಕೊಡುವುದಕ್ಕೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು. ಅದು ಕಪ್ಪು ಹಣ ಅಲ್ಲವೇ? ದೇಶದ ಜನಕ್ಕೆ ಉತ್ತರಿಸಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.

- Advertisement -

ಚಿತ್ರದುರ್ಗ ಲೋಕಸಭಾ ಅಭ್ಯರ್ಥಿ ಚಂದ್ರಪ್ಪ ಅವರ ಪರವಾಗಿ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯನ ಕುಟುಂಬಕ್ಕೆ 15 ಲಕ್ಷ ರೂಪಾಯಿ ಕೊಡ್ತೀವಿ ಅಂದ್ರಲ್ಲಾ ಕೊಟ್ರಾ? ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂತ ಭಾಷಣ ಮಾಡಿದ್ರು. ಆದಾಯ ಒಂದು ರೂಪಾಯಿ ಕೂಡ ಹೆಚ್ಚಾಗಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರಲ್ಲಾ? ಮಾಡಿದ್ರಾ ಮೋದಿಯವರೇ” ಎಂದು ಪ್ರಶ್ನಿಸಿದರು.

“ಪೆಟ್ರೋಲ್, ಡೀಸೆಲ್, ಅಡುಗೆ ಗ್ಯಾಸ್, ರಸಗೊಬ್ಬರ, ಎಣ್ಣೆ, ಕಾಳು ಬೇಳೆ ಎಲ್ಲವೂ ಅತ್ಯಂತ ಕಡಿಮೆ ಬೆಲೆಗೆ ಸಿಗುವಂತೆ ಮಾಡ್ತೀನಿ ಅಂದಿದ್ರಲ್ಲಾ ಮಾಡಿದ್ರಾ ಮಿಸ್ಟರ್ ಮೋದಿ? ನಿಮ್ಮ ಕಾಲದಲ್ಲಿ ಆದ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಕುಟುಂಬಗಳಿಗೆ ಕೊಂಚ ನೆಮ್ಮದಿ ನೀಡಬೇಕು ಎನ್ನುವ ಕಾರಣದಿಂದ ಐದು ಗ್ಯಾರಂಟಿ ಜಾರಿ ಮಾಡಿದೆವು. ಪ್ರತೀ ಕುಟುಂಬಕ್ಕೆ 4 ರಿಂದ 6 ಸಾವಿರ ರೂಪಾಯಿ ಉಳಿತಾಯವಾಗಿ ನನ್ನ ಜನರ ಕೊಳ್ಳುವ ಶಕ್ತಿ ಹೆಚ್ಚಾಯಿತು. ಇದು ನಮ್ಮ ಸಾಧ್ಯವಾಗಿದ್ದು ಕಾಂಗ್ರೆಸ್ ಸರ್ಕಾರದಿಂದ ಮಿಸ್ಟರ್ ಮೋದಿಯವರೇ” ಎಂದು ಕುಟುಕಿದರು.

“ಈ ದೇಶದ ಶೇ 95ರಷ್ಟು ಬಹುಸಂಖ್ಯಾತ ಜನ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು ಒದಗಿಸುತ್ತಿರುವುದು ನಮ್ಮ ಸಂವಿಧಾನ. ಈ ಸಂವಿಧಾನವನ್ನು ಬದಲಾಯಿಸುತ್ತೀವಿ ಎನ್ನುವುದು ಬಿಜೆಪಿಯ ಅಜೆಂಡಾ. ಇದನ್ನು ಬಿಜೆಪಿ ಕೇಂದ್ರ ಸಚಿವರಾಗಿದ್ದವರೇ ಬಹಿರಂಗವಾಗಿ ಹೇಳಿದ್ದಾರೆ. ಆದ್ದರಿಂದ ದೇಶದ ಸಂವಿಧಾನವನ್ನು ಬದಲಾಯಿಸಿ ಮನುಸ್ಮೃತಿ ಜಾರಿಗೆ ತರಲು ಅವಕಾಶ ಕೊಡಬೇಡಿ” ಎಂದು ಕರೆ ನೀಡಿದರು.

“ಅಧಿಕಾರದಲ್ಲಿದ್ದಾಗ ಹಣ ಲೂಟಿ ಮಾಡೋದು, ಆಮೇಲೆ ಜನರನ್ನು ಭಾವನಾತ್ಮಕವಾಗಿ ಕೆರಳಿಸಿ ಬಕ್ರಾ ಮಾಡೋದು ಅವರ ಅವಕಾಶ. ಚಿತ್ರದುರ್ಗದ ಬಿಜೆಪಿ ಅಭ್ಯರ್ಥಿ ಕಾರಜೋಳ ಅವರು ಇಲ್ಲಿಯವರಲ್ಲ. ಕಾಂಗ್ರೆಸ್ ಚಂದ್ರಪ್ಪ ಅವರು ಸೋತಾಗಲೂ ಜನರ ನಡುವೆ ಇದ್ದು ತಪಸ್ಸಿನಂತೆ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಸಮಾಜ ಕಲ್ಯಾಣ ಸಚಿವರಾಗಿ ಕಾರಜೋಳ ಅವರು ಹಿಂದುಳಿದವರು, ದಲಿತರು, ಶ್ರಮಿಕರು, ದುಡಿಯುವ ವರ್ಗಗಳಿಗೆ ಏನೇನೂ ಮಾಡಿಲ್ಲ. ಕಾರಜೋಳ ಅವರ ಬಳಿ ಸಿಕ್ಕಾಪಟ್ಟೆ ಹಣ ಇರಬಹುದು. ಆದರೆ ಚಂದ್ರಪ್ಪ ಅವರಲ್ಲಿ ಜನಸೇವೆ ಮಾಡುವ ಸಜ್ಜನಿಕೆ, ಕಾಳಜಿ ಇದೆ. ಆದ್ದರಿಂದ ಚಿತ್ರದುರ್ಗದ ಜನತೆ ಮಿಸ್ಟರ್ ಕಾರಜೋಳ್ ಪ್ಲೀಸ್ ಗೋ ಬ್ಯಾಕ್ ಎಂದು ಒಕ್ಕೋರಲಿನಿಂದ ಹೇಳಬೇಕು” ಎಂದು ವಿನಂತಿಸಿದರು.

ಬಿಜೆಪಿ ರಾಜ್ಯಕ್ಕೆ ಮಾಡಿದ ದ್ರೋಹ ಒಂದೆರಡಲ್ಲ

“ಬಿಜೆಪಿ ರಾಜ್ಯಕ್ಕೆ ಮಾಡಿದ ದ್ರೋಹ ಒಂದೆರಡಲ್ಲ. ರಾಜ್ಯಕ್ಕೆ ಪ್ರವಾಹ ಬಂದಾಗ, ಬರಗಾಲ ಬಂದಾಗ ರಾಜ್ಯದ ಜನರ ಕಡೆ ತಿರುಗಿ ಕೂಡ ನೋಡಲಿಲ್ಲ. ರಾಜ್ಯದ ಪಾಲಿನ ಬರಗಾಲದ ಅನುದಾನವನ್ನು ಒಂದು ರೂಪಾಯಿ ಕೂಡ ಕೊಡಲಿಲ್ಲ. ರಾಜ್ಯಕ್ಕೆ ಆದ ಅನ್ಯಾಯವನ್ನು ಬಿಜೆಪಿ ಸಂಸದರು ನೆಪಕ್ಕೂ ಪ್ರಶ್ನಿಸಲಿಲ್ಲ. ರಾಜ್ಯದ ನೀರಾವರಿಗೆ ಹಣ ಕೊಡ್ತೀವಿ ಅಂತ ಕೇಂದ್ರ ಬಜೆಟ್ ನಲ್ಲೂ ಘೋಷಿಸಿದರು. ಅದರಲ್ಲಿ ಒಂದು ರೂಪಾಯಿಯನ್ನೂ ನಮ್ಮ ರಾಜ್ಯಕ್ಕೆ ಕೊಡಲಿಲ್ಲ. ಮೇಲಿಂದ ಮೇಲೆ ರಾಜ್ಯಕ್ಕೆ ದ್ರೋಹ ಮಾಡುತ್ತಿರುವ ತಕ್ಕ ಪಾಠ ಕಲಿಸಿ” ಎಂದರು.

ಹಸಿ ಸುಳ್ಳುಗಾರ ಅಮಿತ್ ಶಾ

ಆರ್‌ಎಸ್‌ಎಸ್‌ನಲ್ಲಿ ಈ ಬಿಜೆಪಿಯವರಿಗೆ ಸುಳ್ಳು ಹೇಳುವ ತರಬೇತಿ ಕೊಡ್ತಾರೆ. ಸುಳ್ಳಿನ ಮೇಲೆ ಸುಳ್ಳು ಹೇಳಿಕೊಂಡು ತಿರುಗ್ತಾ ಇದಾರೆ. ರಾಜ್ಯದ ಜನರ ಪಾಲಿನ ಬರಗಾಲದ ಹಣ ಏಕೆ ವಾಪಾಸ್ ಕೊಡಲಿಲ್ಲ ಎಂದು ನಾಡಿನ ಜನತೆ ಪ್ರಶ್ನೆ ಕೇಳಿದ್ರು. ಆದರೆ ರಾಜ್ಯ ಸರ್ಕಾರ ಮೂರು ತಿಂಗಳು ಲೇಟಾಗಿ ಮನವಿ ಮಾಡಿದ್ದಾಗಿ ಅಮಿತ್ ಶಾ ಭಯಾನಕ ಹಸಿ ಸುಳ್ಳು ಹೇಳಿದರು” ಎಂದು ವಾಗ್ದಾಳಿ ನಡೆಸಿದರು.

ಸಚಿವರಾದ ಸತೀಶ್ ಜಾರಕಿಹೊಳಿ, ಡಿ.ಸುಧಾಕರ್, ಲೋಕಸಭಾ ಅಭ್ಯರ್ಥಿ ಚಂದ್ರಪ್ಪ, ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ರಘುಮೂರ್ತಿ, ವೀರೇಂದ್ರ ಪಪ್ಪಿ, ಪಾವಗಡ ವೆಂಕಟೇಶ್, ಗೋವಿಂದಪ್ಪ, ಬಸಂತಪ್ಪ ಸೇರಿ ಚಿತ್ರದುರ್ಗ ದಾವಣಗೆರೆ ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಹಾಗೂ ಜಿಲ್ಲೆ ಮತ್ತು ತಾಲ್ಲೂಕು, ಬ್ಲಾಕ್ ಮುಖಂಡರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೀವರಕ್ಷಕ ಔಷಧಗಳ ಬೆಲೆ ನಿಯಂತ್ರಣ: ತ್ವರಿತ ಕ್ರಮ ಜಾರಿಗೊಳಿಸಲು ಕೇಂದ್ರಕ್ಕೆ ರಾಜ್ಯದ ಒತ್ತಾಯ

ಕ್ಯಾನ್ಸರ್ ಔಷಧಿಗಳು ಸೇರಿದಂತೆ ಅತ್ಯಗತ್ಯ ಔಷಧಗಳ ಮೇಲೆ ವಿಧಿಸಲಾಗುತ್ತಿರುವ ಹೆಚ್ಚಿನ ದರದ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...