ಮೋದಿ ವಿರೋಧಿ ಅಲೆ ಇದೆ ಎನ್ನುವುದು ಸ್ವತಃ ಬಿಜೆಪಿಯವರಿಗೆ ಗೊತ್ತಾಗಿದೆ : ಸಿಎಂ ಸಿದ್ದರಾಮಯ್ಯ

Date:

Advertisements

“ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮೋದಿ ವಿರೋಧಿ ಅಲೆ ಜೋರಾಗಿದೆ ಎನ್ನುವುದನ್ನು ಸ್ವತಃ ಬಿಜೆಪಿಯವರೇ ಗುರುತಿಸಿದ್ದಾರೆ. ಆದ್ದರಿಂದ ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ ಹಾಗೂ ಬಿಜೆಪಿಗೆ ಸೋಲು ಖಂಡಿತ” ಎಂದು ಸಿಎಂ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.

ಇಂದು ದಾವಣಗೆರೆ ಲೋಕಸಭಾ ಚುನಾವಣೆಯ ಪ್ರಜಾಧ್ವನಿ-02 ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಪರವಾಗಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡಿದರು.

“ಬಿಜೆಪಿಯ 25 ಸಂಸದರು ರಾಜ್ಯಕ್ಕಾಗಿರುವ ಅನ್ಯಾಯವನ್ನು ಎಂದೂ ಪ್ರಶ್ನಿಸಲಿಲ್ಲ. ಅವರಲ್ಲಿ ಹಲವರನ್ನು ಈ ಬಾರಿ ಬಿಜೆಪಿಯವರೇ ಕೈಬಿಟ್ಟಿದ್ದಾರೆ. ಈ ಹಿಂದೆ ಇದ್ದ ಬಿಜೆಪಿ ಸಂಸದರು ಗೆಲ್ಲಲು ಸಾಧ್ಯವಿಲ್ಲ ಎಂದು ತಿಳಿದೇ , ಬಿಜೆಪಿಯವರೇ ಈ ಬಾರಿ ಹಲವರನ್ನು ಕೈಬಿಟ್ಟಿದ್ದಾರೆ” ಎಂದರು.

Advertisements

“ಹರಿಹರ ಪ್ರದೇಶದಲ್ಲಿ ಕುಡಿಯುವ ನೀರಿನ ಯೋಜನೆ ಹಾಗೂ ಸುಮಾರು 5 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರನ್ನು ಒದಗಿಸುವ ಏತ ನೀರಾವರಿ ಯೋಜನೆಗೆ ಚುನಾವಣೆ ನಂತರ ಚಾಲನೆ ನೀಡಲಾಗುವುದು. ನಾನು ನುಡಿದ ಮಾತಿನಂತೆ ನಡೆಯುವವನು. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆಂದು ತಿಳಿಸಿದಂತೆ 8 ತಿಂಗಳ ಒಳಗೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ,ಯುವನಿಧಿ ಹಾಗೂ ಶಕ್ತಿ ಯೋಜನೆಗಳು ಜನರ ಪ್ರಶಂಸೆಯನ್ನು ಗಳಿಸಿದೆ. ಅನ್ನಭಾಗ್ಯ, ಕ್ಷೀರಭಾಗ್ಯ, ರೈತ ಸಾಲ ಮನ್ನಾ, ಇಂದಿರಾ ಕ್ಯಾಂಟೀನ್, ಶೂ ಭಾಗ್ಯ, ಶಾದಿ ಭಾಗ್ಯಗಳಂತಹ ಜನಪರ ಯೋಜನೆಗಳನ್ನು ಕಾಂಗ್ರೆಸ್ ನೀಡಿದೆ” ಎಂದರು.

“ಬಿಜೆಪಿ ಜಾತಿಧರ್ಮಗಳನ್ನು ಪರಸ್ಪರ ಎತ್ತಿಕಟ್ಟುವ ಕೆಲಸಗಳನ್ನು ಮಾಡುತ್ತಾ ಬಂದಿದೆ. ದ್ವೇಷದ ರಾಜಕಾರಣವನ್ನು ಮಾಡುತ್ತಾ ಜನರ ಒಳಿತನ್ನು ಕಡೆಗಣಿಸಿದ್ದಾರೆ. ಮೋದಿಯವರು , ದಲಿತರ, ಹಿಂದುಳಿದವರ ಮೀಸಲಾತಿಯನ್ನು ಮುಸಲ್ಮಾನರಿಗೆ ಕಾಂಗ್ರೆಸ್ ನೀಡುತ್ತದೆ ಎಂದು ದೊಡ್ಡ ಸುಳ್ಳನ್ನು ಹೇಳಿದ್ದಾರೆ. ಈ ಪ್ರಮಾಣದಲ್ಲಿ ಸುಳ್ಳು ಹೇಳುವ ಪ್ರಧಾನಿಯನ್ನು ನಾನು ಹಿಂದೆಂದೂ ನೋಡಿಲ್ಲ” ಎಂದು ಸಿಎಂ ವಾಗ್ದಾಳಿ ನಡೆಸಿದರು.

“ಮುಸಲ್ಮಾನರ ವಿರುದ್ಧ ದಲಿತರನ್ನು, ಹಿಂದುಳಿದವರ ವಿರುದ್ಧ ದಲಿತರು, ಅಲ್ಪಸಂಖ್ಯಾತರನ್ನು ಎತ್ತಿಕಟ್ಟುವ ಕೆಲಸವನ್ನು ಮೋದಿಯವರು ಮಾಡುತ್ತಿದ್ದಾರೆ. ಸಂವಿಧಾನದ ಮೀಸಲಾತಿ ಪ್ರಮಾಣದಲ್ಲಿ ಶೇ. 10 ರಷ್ಟನ್ನು ಆರ್ಥಿಕವಾಗಿ ಹಿಂದುಳಿದವರಿಗೆ ಸೃಷ್ಟಿಸಿದರು. ಆದರೆ ಸಂವಿಧಾನದಲ್ಲಿ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮಾತ್ರ ಮೀಸಲಾತಿಯನ್ನು ಕೊಡಬಹುದಾಗಿದೆ. ಮೋದಿಯವರು ಸಂವಿಧಾನವನ್ನು ಪೂರ್ಣ ತಿಳಿದಿದ್ದಾರೋ ಇಲ್ಲವೋ ಗೊತ್ತಿಲ್ಲ. ನಾವು ಅಧಿಕಾರಕ್ಕೆ ಬಂದರೆ ಒಟ್ಟಾರೆ ಮೀಸಲಾತಿ ಪ್ರಮಾಣವನ್ನು ಹೆಚ್ಚು ಮಾಡುತ್ತೇವೆ ಎಂದು ಹೇಳಿದ್ದೇವೆಯೇ ಹೊರತು. ಒಬ್ಬರ ಮೀಸಲಾತಿಯನ್ನು ಕಿತ್ತು ಮತ್ತೊಬ್ಬರಿಗೆ ಕೊಡುತ್ತೇವೆ ಎಂದು ಎಲ್ಲಿಯೂ ಹೇಳಿಯೇ ಇಲ್ಲ” ಎಂದರು.

“ಮೋದಿಯವರು ಹತ್ತು ವರ್ಷಗಳ ಕಾಲ ಜನರಿಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ. ರೈತರ ಸಾಲ ಮನ್ನಾ ಮಾಡದೇ ಅದಾನಿ ಹಾಗೂ ಅಂಬಾನಿ ಕೈಗಾರಿಕೋದ್ಯಮಿಗಳಿಗೆ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಮೋದಿಯವರು ಶ್ರೀಮಂತರ ಪರವಾಗಿರುವವರು. ಆದರೆ, ಇವರು ಬಡವರ ಪರವಾಗಿ ಇರುವವರು ಎಂದು ಮೋಸ ಹೋಗಿದ್ದಾಯ್ತು. ನಂಬಿಕೆ ದ್ರೋಹ ಎಸಗಿದ ಮೋದಿಯವರಿಗೆ ಮತ ಹಾಕಬೇಕೆ? ಎಂದು ಪ್ರಶ್ನಿಸಿದರು.

“ನಾನೇ ಚುನಾವಣೆಗೆ ನಿಂತಿದ್ದೇನೆ ಎಂದು ತಿಳಿಯಬೇಕು. ಕಾಂಗ್ರೆಸ್ ಅಭ್ಯರ್ಥಿಗೆ ಕೊಡುವ ಮತ ಸಿದ್ದರಾಮಯ್ಯಗೆ ಕೊಡುವ ಮತ. ನನಗೆ ಶಕ್ತಿ ನೀಡಿ. ನಮ್ಮ ಅಭ್ಯರ್ಥಿ ವಿದ್ಯಾವಂತೆ. ಸಂಸತ್ತಿನಲ್ಲಿ ನಿಮ್ಮ ಪರವಾಗಿ ಮಾತನಾಡುವ ಶಕ್ತಿ ಇದೆ. ಅದಕ್ಕಾಗಿ ನಮ್ಮ ಅಭ್ಯರ್ಥಿಗೆ ಆಶೀರ್ವಾದ ಮಾಡಿ. ಅವರು ಗೆದ್ದರೆ, ನಾನೇ ಗೆದ್ದಂತೆ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X