ಶೋಭಾ ಕರಂದ್ಲಾಜೆ ವಿರುದ್ಧ ತಿರುಗಿಬಿದ್ದ ಬಿಜೆಪಿ ಕಾರ್ಯಕರ್ತರು: ಟಿಕೆಟ್ ನೀಡದಂತೆ ಹೈಕಮಾಂಡ್‌ಗೆ ಪತ್ರ

Date:

ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್​ ನೀಡುವ ವಿಚಾರದ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಸ್ವಕ್ಷೇತ್ರದಲ್ಲೇ ಬಿಜೆಪಿ ಕಾರ್ಯಕರ್ತರಿಂದಲೇ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ಈ ಬಾರಿ ಚಿಕ್ಕಮಗಳೂರು-ಉಡುಪಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡದಂತೆ ಬಿಜೆಪಿ ಕಾರ್ಯಕರ್ತರು ಪತ್ರ ಅಭಿಯಾನ ಆರಂಭಿಸಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸೇರಿದಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಂಚೆಯ ಮೂಲಕ ಪತ್ರ ಕಳುಹಿಸಲು ಆರಂಭಿಸಿದ್ದಾರೆ.

ಕೆಲದಿನಗಳ ಹಿಂದೆಯಷ್ಟೇ ಉಡುಪಿಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿ ಶೋಭಾ ಕರಂದ್ಲಾಜೆಯವರನ್ನು ಮೀನುಗಾರ ಮುಖಂಡರಿಂದ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆಯ ಬೆನ್ನಲ್ಲೇ ಈ ಬೆಳವಣಿಗೆ ಆರಂಭಗೊಂಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೂ ಬಿಜೆಪಿ ಕಾರ್ಯಕರ್ತರು ಪತ್ರ ಬರೆದಿದ್ದಾರೆ. ಎರಡು ಬಾರಿ ಸಂಸದೆಯಾಗಿ ಕ್ಷೇತ್ರ ಅಭಿವೃದ್ಧಿ ಮಾಡಿಲ್ಲ ಅವರಿಗೆ ಈ ಬಾರಿ ಟಿಕೆಟ್ ಬೇಡ ಎಂದು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸುಮಾರು 5 ಸಾವಿರಕ್ಕೂ ಅಧಿಕ ಪತ್ರಗಳನ್ನು ಕಾರ್ಯಕರ್ತರು ಬರೆದು ಅಂಚೆ ಮೂಲಕ ಕಳುಹಿಸಿದ್ದಾರೆ. ಇದೇ ವೇಳೆ ಉತ್ತಮ ಅಭ್ಯರ್ಥಿ ಅಥವಾ ಹೊಸ ಮುಖಕ್ಕೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಪಟ್ಟುಹಿಡಿದಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಚಾರಕ್ಕೆ ಆಗಮಿಸಿಲ್ಲ ಎಂಬುವುದು ಕಾರ್ಯಕರ್ತರ ಅಸಮಾಧಾನಕ್ಕೆ ಪ್ರಮುಖ ಕಾರಣಗಳಲ್ಲಿ ಒಂದು ಎನ್ನಲಾಗಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಭದ್ರಕೋಟೆಗಳೆಲ್ಲ ಕಾಂಗ್ರೆಸ್ ಕೈ ವಶವಾಗಿತ್ತು. ಇದರಿಂದ ಕಾರ್ಯಕರ್ತರು ಶೋಭಾ ವಿರುದ್ಧ ಕಿಡಿಕಾರಿದ್ದರು.

ಈ ನಡುವೆ ಚಿಕ್ಕಮಗಳೂರು ಉಡುಪಿ ಲೋಕಸಭಾ ಟಿಕೆಟ್‌ಗಾಗಿ ಸಿ.ಟಿ ರವಿ ಹಾಗೂ ಶೋಭಾ ಬೆಂಬಲಿಗರ ನಡುವೆ ಬಣ ರಾಜಕೀಯ ಶುರುವಾಗಿದೆ. ಸಿ.ಟಿ ರವಿ ಅವರಿಗೆ ಟಿಕೆಟ್ ನೀಡುವಂತೆ ಮತ್ತೊಂದು ಅಭಿಯಾನವನ್ನು ಆರಂಭಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಕ್ಷೇತ್ರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ, ಬಿಜೆಪಿ ಕಾಯಕರ್ತರು ಸಿ ಟಿ ರವಿ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದರು.

ಬಿಜೆಪಿ ಕಾರ್ಯಕರ್ತರು ಹೈಕಮಾಂಡ್‌ಗೆ ಬರೆದಿರುವ ಪತ್ರ

ಇನ್ನು, ಕೇಂದ್ರ ಸಚಿವೆ ಶೋಭಾ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಸಿ ಟಿ ರವಿ, “1995ರ ನಂತರ ಪಕ್ಷದಲ್ಲಿ ನಾನು ಯಾವುದನ್ನೂ ಕೇಳಿ ಪಡೆದಿಲ್ಲ. ಪತ್ರ ಚಳುವಳಿಯ ಮಾಹಿತಿ ನನಗಿಲ್ಲ. ನಮ್ಮ ಪಕ್ಷದ ಟಿಕೆಟ್ ಕೊಡುವ ಮಾನದಂಡ ಬೇರೆಯೇ ಇದೆ. ಈಗಾಗಲೇ ಬಿಜೆಪಿ ವತಿಯಿಂದ ಇಂಟರ್‌ನಲ್ ಮತ್ತು ಎಕ್ಸ್ಟರ್ನಲ್ ಸರ್ವೆ ನಡೆಯುತ್ತಿದೆ. ಹಲವಾರು ಏಜೆನ್ಸಿ ಮೂಲಕ ಸರ್ವೆ ನಡೆಯುತ್ತಿದೆ. ಸರ್ವೆ ವರದಿಯ ಆಧಾರದ ಮೇಲೆ ಟಿಕೆಟ್ ಫೈನಲ್ ಮಾಡಲಾಗುತ್ತದೆ. ಸರ್ವೆ ಬಳಿಕ ಯಾರಿಗೆ ಟಿಕೆಟ್ ಕೊಡಬೇಕೆಂದು ತೀರ್ಮಾನಿಸಲಾಗುತ್ತದೆ. ಆದರೆ ನಾನಂತೂ ಟಿಕೆಟ್ ಆಕಾಂಕ್ಷಿಯಲ್ಲ” ಎಂದು ಹೇಳುವ ಮೂಲಕ ತಮಗೂ ಪತ್ರ ಚಳವಳಿಗೂ ಸಂಬಂಧವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

“ನಮ್ಮ ಗುರಿ ಒಂದೇ. ಮತ್ತೆ ಮೋದಿಯವರು ಈ ದೇಶದ ಪ್ರಧಾನಿಯಾಗಬೇಕು. ಮೂರನೇ ಬಾರಿಗೆ ಮೋದಿ ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಗುರಿ, ಯಾರೇ ಅಭ್ಯರ್ಥಿಯಾದರೂ ಪಕ್ಷದ ಪರವಾಗಿ ಕೆಲಸ ಮಾಡುತ್ತೇವೆ” ಎಂದು ಸಿ ಟಿ ರವಿ ತಿಳಿಸಿದ್ದಾರೆ. ತಮ್ಮ ವಿರುದ್ಧದ ಪತ್ರ ಚಳವಳಿಯ ಬಗ್ಗೆ ಶೋಭಾ ಕರಂದ್ಲಾಜೆ ಈವರೆಗೆ ಯಾವುದೇ ಹೇಳಿಕೆ ನೀಡಿಲ್ಲ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಭಾಸ್‌ ಅಭಿನಯದ ‘ಕಲ್ಕಿ 2898 ಎಡಿ’ ಏಕಕಾಲದಲ್ಲೇ ಮೂರು ‘ಒಟಿಟಿ’ಗಳಿಗೆ ಮಾರಾಟ

ತೆಲುಗು ನಟ ಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ’ ಭಾರತದ ಅತ್ಯಂತ...

ಮೋದಿ ಸುಳ್ಳುಗಳು | ಶೋಷಣೆಯಿಂದ ಮುಕ್ತಿ ನೀಡದ ಮೋದಿ, ಬುಡಕಟ್ಟುಗಳ ಅಭಿವೃದ್ಧಿಗೆ ನಿಲ್ಲುತ್ತಾರೆಯೇ?  

ಜಾರ್ಖಂಡ್‌ನ ದುಮ್ಕಾದಲ್ಲಿ ಇಂದು ನಡೆದ ಸಾರ್ವಜನಿಕ  ಸಮಾವೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ...

ರೇವ್ ಪಾರ್ಟಿ | ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ ತೆಲುಗು ನಟಿ ಹೇಮಾ

ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಜಿ.ಆರ್‌.ಫಾರ್ಮ್‌ಹೌಸ್‌ನಲ್ಲಿ ನಡೆದಿದ್ದ ‘ರೇವ್‌ ಪಾರ್ಟಿ’ ಪ್ರಕರಣಕ್ಕೆ...

ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ | ಸಚಿವ ಬಿ.ನಾಗೇಂದ್ರ ವಜಾಗೊಳಿಸಿ: ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ...