ದೇವನೂರು ಬಿಟ್ಟರೆ ಕಾಂಗ್ರೆಸ್ ಸರ್ಕಾರ ಟೀಕಿಸುವ ನೈತಿಕತೆ ಉಳಿದ ಸಾಹಿತಿಗಳಿಗಿಲ್ಲ: ರಮೇಶ್‌ ಬಾಬು

Date:

ದೇವನೂರು ಮಹದೇವರಂತಹ ಅಪರೂಪದ ವ್ಯಕ್ತಿಗಳು ಸರ್ಕಾರಗಳನ್ನು, ರಾಜಕಾರಣಿಗಳನ್ನು ಟೀಕಿಸುವ ನೈತಿಕತೆಯನ್ನು ಇಂದಿಗೂ ಉಳಿಸಿಕೊಂಡಿದ್ದಾರೆ. ಇವರನ್ನು ಬಿಟ್ಟು ಉಳಿದವರಿಗೆ ಕಾಂಗ್ರೆಸ್ ಸರ್ಕಾರವನ್ನಾಗಲಿ ಅಥವಾ ಕಾಂಗ್ರೆಸ್ ಪಕ್ಷವನ್ನಾಗಲಿ ಅಥವಾ ಡಿ ಕೆ ಶಿವಕುಮಾರ್ ಅವರನ್ನಾಗಲಿ ಟೀಕಿಸುವ ಯಾವುದೇ ನೈತಿಕತೆ ಇಲ್ಲ ಎಂದು ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಅಧ್ಯಕ್ಷ ಮತ್ತು ಮಾಜಿ ಎಂಎಲ್‌ಸಿ ರಮೇಶ್‌ ಬಾಬು ಹೇಳಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ರಾಜ್ಯದ ಅಕಾಡೆಮಿ ಮತ್ತು ಪ್ರಾಧಿಕಾರಿಗಳ ಅಧ್ಯಕ್ಷರ ಜೊತೆ ನಡೆಸಿದ ಸಭೆಯನ್ನು ಕೆಲವು ಸಾಹಿತಿಗಳು ಹಾಗೂ ಚಿಂತಕರು ಟೀಕಿಸುತ್ತಿರುವುದು ಅವರ ಅವಕಾಶವಾದದ ಪ್ರತೀಕ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

“ಸಾಹಿತಿಗಳು ತಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ವ್ಯಕ್ತ ಪಡಿಸಲು ಸ್ವತಂತ್ರರಾಗಿದ್ದಾರೆ. ಆದರೆ ಅಂತಹ ಅನಿಸಿಕೆ ಅಥವಾ ಟೀಕೆಗಳು ಆರೋಗ್ಯಕರ ಚೌಕಟ್ಟಿನಲ್ಲಿ ಇರಬೇಕಾಗುತ್ತದೆ. ಕೆಲವು ಹಿರಿಯ ಸಾಹಿತಿಗಳು ಸಿದ್ಧಾಂತ ಮತ್ತು ಅಧಿಕಾರದೊಂದಿಗೆ ರಾಜಿಯಾಗದೆ ಅಧಿಕಾರ ಬಯಸದೆ ರಾಜಕಾರಣದೊಂದಿಗೆ ಅಂತರ ಕಾಯ್ದುಕೊಂಡು ಬಂದಿರುತ್ತಾರೆ. ಆದರೆ ಕೆಲವರು ಅವಕಾಶವಿರುವ ಎಲ್ಲ ಲಾಬಿಗಳನ್ನು ಮಾಡಿ ಅಧಿಕಾರ ಸಿಗದಾಗ ರಾಜಕಾರಣವನ್ನು ಜರಿಯುವ ಕೆಲಸಕ್ಕೆ ಮುಂದಾಗಿದ್ದಾರೆ. ಇವರನ್ನು ನೋಡಿದರೆ ದ್ರಾಕ್ಷಿ ಸಿಗದ ನರಿಯು ದ್ರಾಕ್ಷಿಯನ್ನು ಹುಳಿ ಎಂದು ಜರಿಯುವ ಕಥೆ ನೆನಪಾಗುತ್ತದೆ” ಎಂದು ಕುಟುಕಿದ್ದಾರೆ.

“ಕಾಂಗ್ರೆಸ್ ಸಿದ್ಧಾಂತ ಯಾವಾತ್ತೂ ಸಾಂಸ್ಕೃತಿಕ ಸ್ವಾಯತ್ತತೆಯನ್ನು ಸಮರ್ಥಿಸಿಕೊಂಡು ಬಂದಿರುತ್ತದೆ. ಅದೇ ಕಾರಣಕ್ಕಾಗಿ ರಾಜ್ಯದಲ್ಲಿ ಮತ್ತು ದೇಶದಲ್ಲಿ ಸ್ವಾಯತ್ತ ಸಂಸ್ಥೆಗಳ ರಚನೆಗೆ ಒತ್ತು ನೀಡಿರುತ್ತದೆ. ರಚನಾತ್ಮಕ ಭಿನ್ನಾಭಿಪ್ರಾಯಗಳ ನಡುವೆಯೂ ಹಸ್ತಕ್ಷೇಪವಿಲ್ಲದ ಸಾಂಸ್ಕೃತಿಕ ಚಟುವಟಿಕೆಗಳಿಗೆ ಮೊದಲಿನಿಂದಲೂ ಆದ್ಯತೆ ನೀಡಿದೆ. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಸಾಹಿತಿಗಳು ಮತ್ತು ಚಿಂತಕರು ತಮ್ಮ ಸಿದ್ದಾಂತಗಳಿಗೆ ಅನುಗುಣವಾಗಿ ರಾಜಕೀಯ ಪಕ್ಷಗಳೊಂದಿಗೆ ಗುರುತಿಸಿಕೊಳ್ಳುವ ಅನಿವಾರ್ಯತೆ ಉಂಟಾಗಿದೆ” ಎಂದಿದ್ದಾರೆ.

“ಸಾಹಿತಿಗಳು ಮತ್ತು ಚಿಂತಕರು ರಾಜಕೀಯ ಪಕ್ಷದ ಅಧ್ಯಕ್ಷರೊಂದಿಗೆ ಒಂದು ಪಕ್ಷದ ಕಚೇರಿಯಲ್ಲಿ ಸಭೆ ನಡೆಸಿದ ಕಾರಣಕ್ಕಾಗಿ ತಮ್ಮ ವ್ಯಕ್ತಿತ್ವವನ್ನಾಗಲಿ ಅಥವಾ ಸಿದ್ಧಾಂತವನ್ನಾಗಲಿ ಕಳೆದುಕೊಳ್ಳಲು ಸಾಧ್ಯವಿಲ್ಲ. ಡಿ ಕೆ ಶಿವಕುಮಾರ್ ರವರು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆಸಿದ ಅಕಾಡೆಮಿ ಮತ್ತು ಪ್ರಾಧಿಕಾರಿಗಳ ಅಧ್ಯಕ್ಷರ ಸಭೆಯನ್ನು ಖಂಡಿಸಿ ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಬಹುತೇಕ ಸಾಹಿತಿಗಳು ಮತ್ತು ಲೇಖಕರು ವಿವಿಧ ಹುದ್ದೆಗಳನ್ನು ಬಯಸಿ ಮುಖ್ಯಮಂತ್ರಿಗಳನ್ನು ಮತ್ತು ಉಪ ಮುಖ್ಯಮಂತ್ರಿಗಳನ್ನು ಎಡತಾಕಿರುತ್ತಾರೆ” ಎಂದು ಹೇಳಿದ್ದಾರೆ.

“ಡಿ ಕೆ ಶಿವಕುಮಾರ್ ರವರು ಸಾಂಸ್ಕೃತಿಕ ಸ್ವಾಯತ್ತತೆಯನ್ನು ಸಂರಕ್ಷಣೆ ಮಾಡುವ ಜವಾಬ್ದಾರಿಯನ್ನು ಹೊಂದಿದ್ದು, ಅವರು ನಡೆಸಿದ ಸಭೆಯು ರಾಜ್ಯದ ಸಾಂಸ್ಕೃತಿಕ ವಲಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ ಕೂಡಿದ್ದು, ಲೇಖಕರು ಮತ್ತು ಸಾಹಿತಿಗಳು ಇದನ್ನು ಟೀಕಿಸುವುದರ ಮೂಲಕ ಅವರ ನೈತಿಕ ಮೌಲ್ಯಗಳನ್ನು ಗಾಳಿಗೆ ತೂರಿರುತ್ತಾರೆ. ಸಾಹಿತಿಗಳು ಹಿತ್ತಲ ಬಾಗಿಲಿನ ಸಂಸ್ಕೃತಿಯನ್ನು ಕೈಬಿಟ್ಟು ಮನೆಯ ಮುಂಬಾಗಿಲಿನ ಮುಖಾಂತರ ಪ್ರವೇಶ ಮಾಡುವ ಸಂಸ್ಕೃತಿಯನ್ನು ಪಾಲಿಸಲಿ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...