ಗೃಹಜ್ಯೋತಿ | 200 ಯೂನಿಟ್​ಗಿಂತ ಹೆಚ್ಚು ಬಳಸಿದರೆ ಅರ್ಜಿ ತಿರಸ್ಕೃತ : ಸಚಿವ ಕೆ ಜೆ ಜಾರ್ಜ್

Date:

Advertisements
  • ಇಂಧನ ಇಲಾಖೆಯ ಮೇಲೆ ಯಾವುದೇ ಹೊರೆ ಇಲ್ಲ ಎಂದು ಸ್ಪಷ್ಟಪಡಿಸಿದ ಸಚಿವ ಜಾರ್ಜ್
  • ಆ.5ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಉದ್ಘಾಟನಾ ಸಮಾರಂಭ

ಗೃಹಜ್ಯೋತಿ ಯೋಜನೆಯಲ್ಲಿ ನಿಗದಿಪಡಿಸಲಾಗಿರುವ 200 ಯೂನಿಟ್​ಗಿಂತ ಹೆಚ್ಚು ವಿದ್ಯುತ್ ಬಳಸಿದರೂ ಅರ್ಜಿ ತಿರಸ್ಕೃತ ಆಗಲಿದೆ ಮತ್ತು ಸಂಪೂರ್ಣ ಬಿಲ್ಲನ್ನು ಗ್ರಾಹಕರು ನೀಡಬೇಕು ಎಂದು ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆಗೆ 1.42 ಲಕ್ಷ ಕೋಟಿ ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. ಆ.5ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ತಿಳಿಸಿದ್ದಾರೆ.

“ಸರಾಸರಿ ಬಳಸುವ ಯೂನಿಟ್‌ ವಿದ್ಯುತ್ 200 ಯೂನಿಟ್‌ಗಳಿಗಿಂತ ಕಡಿಮೆಯಿದ್ದರೆ, ಮನೆಯ ಗ್ರಾಹಕರು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಸರಾಸರಿಗಿಂತ ಹೆಚ್ಚಿನ ಯೂನಿಟ್ ಬಳಸಿದರೆ, ಹೆಚ್ಚುವರಿ ಯೂನಿಟ್‌ಗೆ ಮಾತ್ರ ಶುಲ್ಕ ಪಾವತಿಸಬೇಕಾಗುತ್ತದೆ. ಆದರೆ,200ಕ್ಕೂ ಹೆಚ್ಚು ಯೂನಿಟ್ ಬಳಸಿದರೆ ಪೂರ್ಣ ಶುಲ್ಕ ಪಾವತಿಸಬೇಕಾಗುತ್ತದೆ,” ಎಂದು ತಿಳಿಸಿದರು.

Advertisements

ಗೃಹ ಜ್ಯೋತಿ ಯೋಜನೆ ಇಂಧನ ಇಲಾಖೆಯ ಯೋಜನೆಯಲ್ಲ. ಇದು ಸರ್ಕಾರದ ಯೋಜನೆ. ಆದ್ದರಿಂದ ಇಂಧನ ಇಲಾಖೆಯ ಮೇಲೆ ಯಾವುದೇ ಹೊರೆ ಇಲ್ಲ ಎಂದು ಸ್ಪಷ್ಟಪಡಿಸಿದ ಸಚಿವ ಜಾರ್ಜ್, ನಾವು ಎಷ್ಟು ಬಿಲ್ ಕೊಡುತ್ತೇವೋ ಅಷ್ಟೂ ಬಿಲ್ಲನ್ನು ಸರ್ಕಾರವೇ ಸಬ್ಸಿಡಿ ರೂಪದಲ್ಲಿ ಕೊಡಲಿದೆ ಎಂದರು.

‘200 ಯೂನಿಟ್​ಯೊಳಗೆ ವಿದ್ಯುತ್​ ಬಳಸಿದರೆ ಬಿಲ್ ಪಾವತಿಸುವಂತಿಲ್ಲ. ಒಂದು ವರ್ಷದ ಸರಾಸರಿ ವಿದ್ಯುತ್ ಬಿಲ್ ಪರಿಗಣಿಸಿ ಉಚಿತ ವಿದ್ಯುತ್​ ನೀಡಲಾಗುತ್ತದೆ. 200 ಯೂನಿಟ್‌ಗಿಂತ ಹೆಚ್ಚು ವಿದ್ಯುತ್ ಬಳಸಿದರೆ ಅರ್ಜಿ ತಿರಸ್ಕೃತ ಆಗಲಿದೆ’ ಎಂದು ಕೆ.ಜೆ.ಜಾರ್ಜ್ ತಿಳಿಸಿದರು.

‘ಮಧ್ಯಮ ವರ್ಗದ ಜನರ ಜೀವನ ಸುಧಾರಣೆ ಮಾಡುವ ಮಹಾತ್ವಾಕಾಂಕ್ಷಿ ಯೋಜನೆ ಇದು. 200 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡುವ ಯೋಜನೆ ಕೇವಲ ವಿದ್ಯುತ್ ಶುಲ್ಕದ ಕಡಿಮೆ ಮಾಡುತ್ತಿಲ್ಲ, ಬದಲಾಗಿ ಕುಟುಂಬದ ಆರ್ಥಿಕ ಪ್ರಗತಿಯ ಮೂಲಕ ಸಾಮಾಜಿಕ ಭದ್ರತೆ ನೀಡಲಿದೆ’ ಎಂದು ಜಾರ್ಜ್‌ ವಿವರಿಸಿದರು.

‘ಗೃಹ ಜ್ಯೋತಿ’ ಯೋಜನೆಯ ಅನುಷ್ಠಾನದ ಮೊದಲ ತಿಂಗಳಿನಲ್ಲೇ ಸುಮಾರು 1.42 ಕೋಟಿ ಕುಟುಂಬಗಳು ಇದರ ಪ್ರಯೋಜನ ಪಡೆಯಲಿವೆ. ಜುಲೈ 27ರ ಮೊದಲು ಅರ್ಜಿ ಸಲ್ಲಿಸಿದವರು ಮಾತ್ರ ಜುಲೈ ತಿಂಗಳ ವಿದ್ಯುತ್ ಬಳಕೆಯ ಶುಲ್ಕದಲ್ಲಿ ಲಾಭ ಪಡೆಯಲು ಅರ್ಹರಾಗಿರುತ್ತಾರೆ. ಜುಲೈ 27ರ ನಂತರ ಅರ್ಜಿ ಸಲ್ಲಿಸಿದವರು ಆಗಸ್ಟ್‌ನಲ್ಲಿ ಅವರ ಬಳಕೆಯ ಆಧಾರದ ಮೇಲೆ ಸೆಪ್ಟೆಂಬರ್‌ನ ಬಿಲ್ಲಿಂಗ್‌ನಲ್ಲಿ ಪ್ರಯೋಜನ ಪಡೆಯುತ್ತಾರೆ,”ಎಂದರು.

‘ಗೃಹಜ್ಯೋತಿ’ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ. ಆ.5ರಂದು ಕಲಬುರಗಿಯ ಕಲಬುರಗಿಯ ಎನ್‌ವಿ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​, ಸಚಿವ ಪ್ರಿಯಾಂಕ್ ಖರ್ಗೆ ಸೇರಿ ಹಲವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವ ಜಾರ್ಜ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಇಂಧನ, ಮೂಲಸೌಕರ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಹಾಗೂ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಪಂಂಕಜ್ ಕುಮಾರ್ ಪಾಂಡೆ, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X