ಎಲ್ಲರ ಅಭಿಪ್ರಾಯ ಪಡೆದು, ಚರ್ಚೆಯ ಬಳಿಕವೇ ನಿಗಮ, ಮಂಡಳಿಗಳಿಗೆ ನೇಮಕ: ಡಿ ಕೆ ಶಿವಕುಮಾರ್

Date:

“ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿ, ಸುದೀರ್ಘ ಚರ್ಚೆ ಬಳಿಕವೇ ನಿಗಮ, ಮಂಡಳಿಗಳಿಗೆ ನೇಮಕ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

- Advertisement -

ಕುಮಾರಪಾರ್ಕ್ ಸರ್ಕಾರಿ ನಿವಾಸದ ಬಳಿ ಮಾಧ್ಯಮಗಳ ಪ್ರತಿನಿಧಿಗಳು, ನಿಗಮ, ಮಂಡಳಿಗಳಿಗೆ ನೇಮಕ‌ ಪಟ್ಟಿಯಲ್ಲಿ ಕೆಲವರ ಹೆಸರು ಕೈಬಿಟ್ಟಿರುವುದಕ್ಕೆ ಅಸಮಾಧಾನ ಇದೆ. ಸಚಿವರುಗಳು ತಮ್ಮ ಅಭಿಪ್ರಾಯ ಕೇಳಿಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದಾಗ ಅವರು ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಈ ನೇಮಕದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು, ನಾನು ಹಾಗೂ ಪ್ರಧಾನ ಕಾರ್ಯದರ್ಶಿಗಳು ಕೂತು ಚರ್ಚೆ ಮಾಡಿದ್ದೇವೆ. ಎಲ್ಲರ ಅಭಿಪ್ರಾಯವನ್ನು ಪಡೆದಿದ್ದೇವೆ. ಕೆಲವರು ಇಂತಹವರಿಗೆ ಸ್ಥಾನ ನೀಡಬೇಕು ಎಂಬ ಪಟ್ಟಿ ಕೊಟ್ಟಿದ್ದಾರೆ. ಆ ಪತ್ರವನ್ನು ನಿಮ್ಮ ಮುಂದೆ ಬಹಿರಂಗಪಡಿಸಲು ಸಾಧ್ಯವಿಲ್ಲ” ಎಂದು ತಿಳಿಸಿದರು.

“ಮಂತ್ರಿ ಆಗಬೇಕು, ದೊಡ್ಡ ಮಂಡಳಿಗಳು ಸಿಗಬೇಕೆಂಬ ಆಸೆ ಎಲ್ಲರಿಗೂ ಇರುತ್ತದೆ. ಎರಡು ವರ್ಷಗಳ ನಂತರ ಮತ್ತೆ ಬದಲಾವಣೆ ಆಗುತ್ತದೆ. ಅವಧಿ ಮುಗಿದ ನಂತರ ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಎಂದು ಸೂಚನೆ ನೀಡಿದ್ದೇವೆ. ಪಕ್ಷ ಯಾವುದೇ ಹುದ್ದೆ ಕೊಟ್ಟರು ಸೇವೆ ಮಾಡಬೇಕು. ಯಾರೂ ಗಾಬರಿಯಾಗುವ ಅವಶ್ಯಕತೆಯಿಲ್ಲ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಬ್ಲಾಕ್‌ ನಲ್ಲಿ ದುಡಿದಂತ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸುತ್ತೇವೆ” ಎಂದು ತಿಳಿಸಿದರು.

“ಚುನಾವಣಾ ಸಮಯದಲ್ಲಿ ಕೆಲವರಿಗೆ ಮಾತು ಕೊಟ್ಟಂತೆ ಒಂದಷ್ಟು ಜನರಿಗೆ ಹುದ್ದೆ ನೀಡಲಾಗಿದೆ. ಎಲ್ಲರನ್ನೂ ತೃಪ್ತಿ ಪಡಿಸಿದ್ದೇವೆ ಎಂದು ಹೇಳುವುದಿಲ್ಲ. ಪ್ರತಿ ಕ್ಷೇತ್ರದಲ್ಲಿ ಇಬ್ಬರು, ಮೂವರು ಆಕಾಂಕ್ಷಿಗಳಿದ್ದರು. ಪ್ರಸ್ತುತ ಕೆಲವರಿಗೆ ಅವಕಾಶ ನೀಡಲಾಗಿದೆ. ಮುಂದೆ ಉಳಿದವರಿಗೆ ಅವಕಾಶ ಕಲ್ಪಿಸಲಾಗುವುದು. ನಾವು ಎಲ್ಲರನ್ನೂ ಗೌರವಿಸಿ ಕೆಲಸ ಮಾಡಿದ್ದೇವೆ, ಮಾಡುತ್ತೇವೆ” ಎಂದು ತಿಳಿಸಿದರು.

ಈ ಬಾರಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆಲ್ಲಲಿದೆ

ಶಿವಮೊಗ್ಗದಲ್ಲಿ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಮರು ಆಯ್ಕೆ ಮಾಡಿ ಎಂದು ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪನವರ ಹೇಳಿಕೆ ಬಗ್ಗೆ ಕೇಳಿದಾಗ “ಆ ವಿಚಾರ ನನಗೆ ಗೊತ್ತಿಲ್ಲ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹೆಚ್ಚಿನ ಕ್ಷೇತ್ರದಲ್ಲಿ ಗೆಲ್ಲುತ್ತದೆ. ಶಿವಮೊಗ್ಗದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯೇ ಗೆಲ್ಲಲಿದ್ದಾರೆ” ಎಂದರು.

ಜಗದೀಶ್‌ ಶೆಟ್ಟರ್‌ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿ, ಕಾಂಗ್ರೆಸ್‌ ನಿರ್ನಾಮ ಮಾಡಿ ಎಂದು ಕರೆಕೊಟ್ಟಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ ಕೆ ಶಿವಕುಮಾರ್, “ಈ ಹಿಂದೆ ಕಾಂಗ್ರೆಸ್‌ ಗೆಲ್ಲಿಸಿ, ಬಿಜೆಪಿ ನಿರ್ನಾಮ ಮಾಡಿ ಎಂದು ಹೇಳಿದ್ದರು” ಎಂದು ವ್ಯಂಗ್ಯವಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...