44 ನಿಗಮ/ಮಂಡಳಿಗಳ ಅಧ್ಯಕ್ಷರಾಗಿ ಕಾಂಗ್ರೆಸ್‌ ಕಾರ್ಯಕರ್ತರ ನೇಮಕ

Date:

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ನಡುವೆ, 44 ನಿಗಮ/ಮಂಡಳಿಗಳಿಗೆ ಕಾಂಗ್ರೆಸ್‌ನ 44 ಮುಖಂಡರು ಹಾಗೂ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶಿದಿದೆ. ನಿಗಮ/ಮಂಡಳಿ ಅಧ್ಯಕ್ಷ ಸ್ಥಾನಗಳಿಗೆ ಅಧ್ಯಕ್ಷರ ಪಟ್ಟಿಯನ್ನು ಅಂತಿಮಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿ ಹಾಕಿದ್ದಾರೆ.

- Advertisement -

ನಿಗಮ/ಮಂಡಳಿಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಲಾದ ಆದೇಶ ಪಟ್ಟಿಯನ್ನು ಆಯಾ ಇಲಾಖೆಗಳಿಗೆ ಮುಖ್ಯಮಂತ್ರಿಗಳ ಸಚಿವಾಲಯ ರವಾನಿಸಿದೆ. ಜನವರಿ 26ರಂದೇ 34 ಮಂದಿ ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ರಾಜ್ಯ ಸರ್ಕಾರ ಆದೇಶ ಮಾಡಿತ್ತು. ಆದರೆ, ನೇಮಕ ಮಾಡುವ ಪ್ರಕ್ರಿಯೆ ಆರಂಭವಾಗಿರಲಿಲ್ಲ. ಇದೀಗ, ಹೆಚ್ಚುವರಿಯಾಗಿ 10 ಮಂದಿ ಸೇರಿದಂತೆ 44 ಮಂದಿಯ ಪಟ್ಟಿಯನ್ನು ಸರ್ಕಾರ ಅಂತಿಮಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಈ ಹಿಂದೆ, ನಿಗಮ/ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಕೇವಲ ಶಾಸಕರ ಹೆಸರುಗಳನ್ನು ಮಾತ್ರವೇ ಸೂಚಿಸಲಾಗಿತ್ತು. ಆ ಪಟ್ಟಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಕಾಂಗ್ರೆಸ್‌ ಹೈಕಮಾಂಡ್, ಕಾರ್ಯಕರ್ತರಿಗೂ ಅವಕಾಶ ನೀಡಬೇಕೆಂದು ತಾಕೀತು ಮಾಡಿತ್ತು. ಅಲ್ಲದೆ, ಪಟ್ಟಿ ಸಿದ್ಧಪಡಿಸುವ ಸಮಯದಲ್ಲಿ ತಮ್ಮ ಅಭಿಪ್ರಾಯ ಕೇಳಿಲ್ಲವೆಂದು ಗೃಹ ಸಚಿವ ಜಿ.ಪರಮೇಶ್ವರ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಸೇರಿದಂತೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದರು.

ಇದೆಲ್ಲದರ ನಡುವೆ ಇದೀಗ, ಕಾರ್ಯಕರ್ತರನ್ನು ಒಳಗೊಂಡ ಹೊಸ ಪಟ್ಟಿ ಸಿದ್ದಗೊಳಿಸಲಾಗಿತ್ತು. ಆ ಪಟ್ಟಿಯನ್ನು ಅಂತಿಮಗೊಳಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಸಿದ್ದರಾಮಯ್ಯ ಅವರ ಆಪ್ತ ಕೆ. ಮರಿಗೌಡ ಸೇರಿದಂತೆ 44 ಮಂದಿಗೆ ಅಧ್ಯಕ್ಷ ಸ್ಥಾನ ಲಭಿಸಿದೆ. ಅಲ್ಲದೆ, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಎಚ್.ಎಂ ರೇವಣ್ಣ ಅವರನ್ನು ನೇಮಕ ಮಾಡಲಾಗಿದೆ. ಅಲ್ಲದೆ, ಸಮಿತಿಗೆ ಉಪಾಧ್ಯಕ್ಷರಾಗಿ ಮೆಹರೂಜ್‌ ಖಾನ್‌, ಪುಷ್ಪಾ ಅಮರನಾಥ್‌, ಎಸ್.ಆರ್ ಪಾಟೀಲ ಮತ್ತು ಸೂರಜ್ ಹೆಗ್ಡೆ ಅವರನ್ನು ನೇಮಿಸಲಾಗಿದೆ.

ನಿಗಮ/ಮಂಡಳಿಗಳ ಅಧ್ಯಕ್ಷರ ಪಟ್ಟಿ ಇಂತಿದೆ:

Image

Image

Image

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಪಶು ವೈದ್ಯಕೀಯ ವಿವಿ ಪ್ರಭಾರ ಕುಲಪತಿಯಾಗಿ ಎ.ಟಿ.ರಾಮಚಂದ್ರ ನಾಯ್ಕ ಅಧಿಕಾರ ಸ್ವೀಕಾರ

ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ...

ಡಿಕೆಶಿ ಭರವಸೆಯಷ್ಟೇ ಸಾಲದು ಎಂದ ಕಬ್ಬು ಬೆಳೆಗಾರರು; ಪ್ರತಿಭಟನೆ ತೀವ್ರ!

ಕಬ್ಬಿಗೆ ನ್ಯಾಯಯುತ, ವೈಜ್ಞಾನಿಕ ಬೆಲೆ ನಿಗದಿಗೆ ಆಗ್ರಹಿಸಿ ಬೆಳಗಾವಿ ಸೇರಿದಂತೆ ನಾನಾ...