ಉಪಕುಲಪತಿಗಳ ನೇಮಕಾತಿ | ಕೇಂದ್ರದ ಕ್ರಮ ಖಂಡನೀಯ, ಚರ್ಚಿಸಿ ತೀರ್ಮಾನ: ಸಿದ್ದರಾಮಯ್ಯ

Date:

Advertisements

ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ, ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಸರ್ವಾಧಿಕಾರ ನೀಡಿ ರಾಜ್ಯ ಸರ್ಕಾರಗಳ ಅಧಿಕಾರವನ್ನು ಕಿತ್ತುಕೊಳ‍್ಳಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರಗಳ ಅಧಿಕಾರವನ್ನು ಮೊಟಕುಗೊಳಿಸುವ ಸಣ್ಣ ಅವಕಾಶವನ್ನೂ ಬಿಟ್ಟುಕೊಡದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಕಣ್ಣು ಈಗ ರಾಜ್ಯದ ವಿಶ್ವವಿದ್ಯಾಲಯಗಳ ಮೇಲೆ ಬಿದ್ದಿದೆ. ಯುಜಿಸಿ ನೇಮಕಾತಿಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾದ ಕರಡು ನಿಯಮಾಳಿಗಳನ್ನು ನಮ್ಮ ಸರ್ಕಾರ ಪರಿಶೀಲಿಸಿ, ಇದರ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಯೋಚನೆ ಮಾಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈಗಿರುವ ನಿಯಮಾವಳಿಗಳ ಪ್ರಕಾರ ಉಪಕುಲಪತಿಗಳ ನೇಮಕಾತಿಗೆ ರಾಜ್ಯ ಸರ್ಕಾರ ಶೋಧನಾ ಸಮಿತಿಯನ್ನು ರಚಿಸುತ್ತಿತ್ತು. ಅದರಲ್ಲಿ ಕುಲಪತಿಗಳಾಗಿರುವ ರಾಜ್ಯಪಾಲರು ಶಿಫಾರಸು ಮಾಡುವ ವ್ಯಕ್ತಿಗಳು ಕೂಡಾ ಸದಸ್ಯರಾಗಿರುತ್ತಿದ್ದರು. ಹೊಸ ನಿಯಮಗಳ ಪ್ರಕಾರ ರಾಜ್ಯಪಾಲರು ಸೂಚಿಸುವ ವ್ಯಕ್ತಿಯೇ ಶೋಧನಾ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಇದು ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರದ ಮೇಲಿನ ನೇರ ಸವಾರಿಯಾಗಿದೆ ಎಂದಿದ್ದಾರೆ.

Advertisements

ರಾಜ್ಯದ ವಿಶ‍್ವವಿದ್ಯಾಲಯಗಳ ಕುಲಪತಿಗಳ ನೇಮಕಾತಿಗಾಗಿ ರಾಷ್ಟ್ರಮಟ್ಟದ ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಅರ್ಜಿಗಳನ್ನು ಆಹ್ವಾನಿಸಬೇಕೆಂದು ಯುಜಿಸಿ ಹೊಸ ನಿಯಮಾವಳಿಗಳು ಹೇಳುತ್ತಿದೆ. ಇಲ್ಲಿಯ ವರೆಗೆ ಆಯಾ ರಾಜ್ಯಗಳ ವಿದ್ವಾಂಸರಿಗಷ್ಟೇ ಸೀಮಿತವಾಗಿದ್ದ ರಾಜ್ಯಪಾಲರ ಹುದ್ದೆ ಹೊಸ ನಿಯಮಗಳು ಜಾರಿಗೆ ಬಂದರೆ ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಸ್ಥಾನದಲ್ಲಿ ಅನ್ಯಭಾಷಿಕರು ಬಂದು ಕೂರುವ ಅಪಾಯ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ರಿಕೆಟ್ ಕೇಸರಿಕರಣ, ಪರಿಶುದ್ಧ ಆಟ ಅಂತರ್ಧಾನ

ಉಪಕುಲಪತಿಗಳ ನೇಮಕಾತಿಯ ಅರ್ಹತೆಗೆ ಸಂಬಂಧಿಸಿದಂತೆಯೂ ಕೆಲವು ಪ್ರಮುಖ ಬದಲಾವಣಿಗಳನ್ನು ಮಾಡಲಾಗಿದೆ. ಹೊಸ ನಿಯಮಗಳ ಪ್ರಕಾರ ಉಪಕುಲಪತಿಗಳನ್ನು ಕೇವಲ ಅಕಾಡೆಮಿಕ್ ವಲಯದಿಂದ ಮಾತ್ರ ನೇಮಿಸಿಕೊಳ್ಳದೆ, ಸಾರ್ವಜನಿಕ ಮತ್ತು ಖಾಸಗಿ ಕ್ಷೇತ್ರದ ಉದ್ಯಮಿಗಳು, ಸಾರ್ವಜನಿಕ ಆಡಳಿತದ ನೀತಿ ನಿರೂಪಕರು ಸೇರಿದಂತೆ ಬೇರೆ ಕ್ಷೇತ್ರದಲ್ಲಿರುವ ತಜ್ಞರನ್ನು ನೇಮಕಮಾಡಿಕೊಳ್ಳಬಹುದಾಗಿದೆ. ಇದು ಕನ್ನಡಿಗರಿಗೆ ಬಗೆಯುವ ದ್ರೋಹವಾಗಿದೆ ಎಂದು ಸಿಎಂ ಟೀಕಿಸಿದ್ದಾರೆ.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ನೇಮಕಾತಿಯಲ್ಲಿ ರಾಜ್ಯಪಾಲರು ಅನಗತ್ಯವಾಗಿ ಮೂಗುತೂರಿಸುತ್ತಾ ಬಂದಿ‍ದ್ದಾರೆ. ಎಷ್ಟೋ ಸಂದರ್ಭಗಳಲ್ಲಿ ರಾಜ್ಯ ಸರ್ಕಾರದ ಶಿಫಾರಸನ್ನು ನಿರ್ಲಕ್ಷಿಸಿ ತಮ್ಮ ಆಯ್ಕೆಯನ್ನು ನಮ್ಮ ಮೇಲೆ ಹೇರುತ್ತಿದ್ದಾರೆ. ಶಿಕ್ಷಣ ಕ್ಷೇತ್ರದ ನಿರ್ವಹಣೆ ರಾಜ್ಯ ಸರ್ಕಾರದ ಪರಮಾಧಿಕಾರವಾಗಿದ್ದು ಇದರಲ್ಲಿ ಅನಗತ್ಯವಾದ ಮಧ್ಯಪ್ರವೇಶದಿಂದಾಗಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಘರ್ಷಣೆ ಏರ್ಪಡುವ ಸಾಧ್ಯತೆ ಇದೆ. ಒಕ್ಕೂಟ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂತಹ ಇಂತಹ ನಡವಳಿಕೆಗಳನ್ನು ರಾಜ್ಯ ಸರ್ಕಾರ ಸಹಿಸುವುದಿಲ್ಲ. ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳ ಜೊತೆಯಲ್ಲಿ ಈ ಬಗ್ಗೆ ಚರ್ಚಿಸಿ ಮುಂದಿನ ಹೆಜ್ಜೆಯ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X