₹34,115 ಕೋಟಿ ಹೂಡಿಕೆಗೆ ಅನುಮೋದನೆ; 13,308 ಉದ್ಯೋಗ ಸೃಷ್ಟಿ ನಿರೀಕ್ಷೆ

Date:

  • ಉತ್ತರ ಕರ್ನಾಟಕದಲ್ಲಿ ರೂ 9,461 ಕೋಟಿ ಮೊತ್ತದ ಬಂಡವಾಳ ಹೂಡಿಕೆ
  • ಸಿಎಂ ಅಧ್ಯಕ್ಷತೆಯಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿ ಸಭೆ 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಒಟ್ಟು ₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು. ಇದರಿಂದ 13,308 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ.

- Advertisement -

ಹೆಚ್ಚುವರಿ ರೂ 13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್‌ಕಾನ್‌ನ ಪ್ರಸ್ತಾವನೆಯನ್ನು ಸಮಿತಿಯು ಅನುಮೋದಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಫಾಕ್ಸ್‌ಕಾನ್‌, ಈಗಾಗಲೇ ರಾಜ್ಯದಲ್ಲಿ ರೂ 8,000 ಕೋಟಿ ಬಂಡವಾಳ ಹೂಡಿಕೆ ಮಾಡಲು ಅನುಮೋದನೆ ಪಡೆದಿದೆ. ಜೆಎಸ್‌ಡಬ್ಲ್ಯು ರಿನ್ಯೂ ಎನರ್ಜಿ ಫೋರ್ ಲಿಮಿಟೆಡ್ (ರೂ 4,960 ಕೋಟಿ), ಜೆಎಸ್‌ಡಬ್ಲ್ಯು ಸ್ಟೀಲ್ ಲಿಮಿಟೆಡ್ (ರೂ 3,804 ಕೋಟಿ), ಟೊಯೊಟಾ ಕಿರ್ಲೋಸ್ಕರ್ ಮೋಟರ್ ಪ್ರೈವೇಟ್ ಲಿಮಿಟೆಡ್ (ರೂ 3237.30 ಕೋಟಿ), ಟಿಆರ್‌ಐಎಲ್‌ ಬೆಂಗಳೂರು ರಿಯಲ್ ಎಸ್ಟೇಟ್ ಸಿಕ್ಸ್ ಲಿಮಿಟೆಡ್ (ರೂ 3273 ಕೋಟಿ ಹೂಡಿಕೆ), ಜಾನಕಿ ಕಾರ್ಪ್‌ ಲಿಮಿಟೆಡ್‌ (ರೂ 607 ಕೋಟಿ ಮೊತ್ತದ ಹೆಚ್ಚುವರಿ ಹೂಡಿಕೆ) ಪ್ರಸ್ತಾವನೆಗಳು ’ಎಸ್‌ಎಚ್‌ಎಲ್‌ಸಿಸಿ’ ಅನುಮೋದನೆ ಪಡೆದಿರುವ ದೊಡ್ಡ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಲ್ಲಿ ಸೇರಿವೆ.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದ ಒಟ್ಟು ರೂ 9,461 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ. ಇವುಗಳಿಂದ ಈ ಪ್ರದೇಶದಲ್ಲಿ 3,538 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಸರ್ಕಾರದ ಕಡೆಯಿಂದ ನಡೆಯುತ್ತಿರುವ ಇಂತಹ ಸಂಘಟಿತ ಪ್ರಯತ್ನಗಳು ’ಬೆಂಗಳೂರಿನ ಆಚೆ’ ಉಪಕ್ರಮದ ಭಾಗವಾಗಿವೆ.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಚಲುವರಾಯಸ್ವಾಮಿ, ಪ್ರಿಯಾಂಕ್‌ ಖರ್ಗೆ, ನಾಗೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...