ಭಾರತ್ ಜೋಡೋ ಯಾತ್ರೆಗಾಗಿ ಕೆಜಿಎಫ್ ಸಿನಿಮಾದ ಹಾಡಿನ ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹಿತ ಮೂವರ ವಿರುದ್ಧದ ಎಫ್ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಕೆಜಿಎಫ್ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆಗಾಗಿ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಸುಪ್ರಿಯಾ ಶ್ರೀನಾಥೆ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಭಾರತ್ ಜೋಡೋ ಯಾತ್ರೆಯ ಪ್ರಚಾರದ ವಿಡಿಯೋದಲ್ಲಿ ಕನ್ನಡ ಚಲನಚಿತ್ರ ‘ಕೆಜಿಎಫ್ ಅಧ್ಯಾಯ 2’ ಸಿನಿಮಾದ ‘ಸುಲ್ತಾನ್..’ ಹಾಡನ್ನು ಬಳಕೆ ಮಾಡಲಾಗಿದೆ. ಹೀಗೆ ಬಳಸುವುದರ ಮೂಲಕ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪದ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ಎಂಆರ್ಟಿ ಮ್ಯೂಸಿಕ್ ಸಂಸ್ಥೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿತ್ತು. ಹೀಗಾಗಿ ಎಫ್ಐಆರ್ ದಾಖಲಿಸಲಾಗಿತ್ತು. ಎಫ್ಐಆರ್ ರದ್ದು ಕೋರಿ ಕಾಂಗ್ರೆಸ್ ಮುಖಂಡರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟಿನ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಎಫ್ಐಆರ್ ರದ್ದುಪಡಿಸಲು ನಿರಾಕರಿಸಿದ್ದಾರೆ.