ದಿಟ್ಟ ಪ್ರಶ್ನೆ ಎದುರಾದಾಗ ಅಹಂಕಾರ ತೋರುವುದು ಸಿಎಂ ಸಿದ್ದರಾಮಯ್ಯ ಗುಣ: ಆರ್‌ ಅಶೋಕ್

Date:

ಅಸಮರ್ಥ ಸಿಎಂ ಸಿದ್ದರಾಮಯ್ಯ ನವರೇ, ಕಳೆದ ವರ್ಷ ಆಗಸ್ಟ್ ನಿಂದ ಮಾರ್ಚ್ 2024ರವರೆಗೆ ಬಾಕಿ ಉಳಿಸಿಕೊಂಡಿರುವ ₹1,087 ಕೋಟಿ ಪರಿಹಾರ ಧನವನ್ನು ರೈತರಿಗೆ ಯಾವಾಗ ಬಿಡುಗಡೆ ಮಾಡುತ್ತೀರಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಪ್ರಶ್ನಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಇದನ್ನಾದರೂ ನಿಮ್ಮ ರಾಜ್ಯ ಸರ್ಕಾರವೇ ಕೊಡಬೇಕು ಅಂತ ಒಪ್ಪಿಕೊಳ್ಳುತ್ತೀರೋ ಅಥವಾ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ತಮ್ಮ ಪೆದ್ದುತನ ಪ್ರದರ್ಶನ ಮಾಡುತ್ತೀರೋ?” ಎಂದು ವ್ಯಂಗ್ಯವಾಡಿದ್ದಾರೆ.

“ದಿಟ್ಟ ಪ್ರಶ್ನೆಗಳು ಎದುರಾದಾಗ ಅಹಂಕಾರದ ಮಾತುಗಳನ್ನಾಡಿ ವೈಯಕ್ತಿಕ ನಿಂದನೆ ಮಾಡುವುದು. ಜ್ವಲಂತ ಸಮಸ್ಯೆಗಳನ್ನು ಪರಿಹರಿಸದೆ ಜನರ ಗಮನ ಬೇರೆಡೆ ಸೆಳೆದು ದಿಕ್ಕು ತಪ್ಪಿಸುವುದು. ಮತ್ತೊಬ್ಬರ ಸಾಧನೆಯನ್ನು ತನ್ನದೆಂದು ಹೇಳಿಕೊಂಡು ತಿರುಗಾಡುವುದು. ಪುಕ್ಕಟೆ ಪ್ರಚಾರ ಪಡೆಯುವುದು. ನಾನೊಬ್ಬನೇ ಮಹಾ ಬುದ್ಧಿವಂತ ಎಂದು ಗರ್ವ ಪಡುವುದು. ಇವೆಲ್ಲವೂ ಸಿದ್ದರಾಮಯ್ಯರವರ ಐದು ಗ್ಯಾರಂಟಿ ಗುಣಗಳು” ಎಂದು ಟೀಕಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮತ್ತೊಮ್ಮೆ ಎಚ್ಚರಿಕೆ ನೀಡುತ್ತಿದ್ದೇನೆ. ನಾಲ್ಕು ಅಹಂಕಾರದ ಮಾತುಗಳನ್ನಾಡಿದ ಮಾತ್ರಕ್ಕೆ ವಿಪಕ್ಷಗಳ ಬಾಯಿ ಮುಚ್ಚಿಸಬಹುದು ಎಂಬ ಭ್ರಮೆಯಿಂದ ಹೊರಗೆ ಬನ್ನಿ. ನಿಮ್ಮ ಅಹಂಕಾರದ, ದರ್ಪದ ಮಾತುಗಳು ನಿಮ್ಮ ಚಾರಿತ್ರ್ಯವನ್ನ ಪ್ರದರ್ಶನ ಮಾಡುತ್ತವೆಯೇ ಹೊರತು ಅದರಿಂದ ನನಗೆ ಯಾವುದೇ ನಷ್ಟವಿಲ್ಲ. ನಿಮ್ಮ ಅಹಂಕಾರದಿಂದ ನನ್ನ ದನಿ ಅಡಗಿಸಲೂ ಸಾಧ್ಯವಿಲ್ಲ.

ಕುಣಿಯಲಾರದವನಿಗೆ ನೆಲ ಡೊಂಕು ಎಂಬಂತೆ ತಮ್ಮ ವೈಫಲ್ಯ, ದಡ್ಡತನವನ್ನ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಬಗ್ಗೆ ಯಾಕೆ ಟೀಕೆ ಮಾಡುತ್ತೀರಿ? ಏಪ್ರಿಲ್ 2004 ರಿಂದ ಏಪ್ರಿಲ್ 2014 ರವರೆಗೆ ಅಂದರೆ ಯುಪಿಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಸರ್ಕಾರ ರಾಜ್ಯಗಳಿಗೆ 32% ತೆರಿಗೆ ಹಂಚಿಕೆ ಮಾಡುತ್ತಿತ್ತು. ಆದರೆ ಕಳೆದ ಹತ್ತು ವರ್ಷಗಳ ಎನ್ ಡಿಎ ಸರ್ಕಾರದಲ್ಲಿ, ಏಪ್ರಿಲ್ 2014 ರಿಂದ ಏಪ್ರಿಲ್ 2024, ರಾಜ್ಯಗಳಿಗೆ 42% ತೆರಿಗೆ ಹಂಚಿಕೆಯಾಗಿದೆ. ಅಂದರೆ ಯುಪಿಎ ಸರ್ಕಾರ 68% ತೆರಿಗೆ ಹಣವನ್ನ ಕೇಂದ್ರದ ಬಳಿಯೇ ಉಳಿಸಿಕೊಳ್ಳುತ್ತಿತ್ತು, ಮೋದಿ ಅವರ ಸರ್ಕಾರ ಕೇವಲ 58% ತೆರಿಗೆಯನ್ನ ಕೇಂದ್ರದ ಬಳಿ ಉಳಿಸಿಕೊಳ್ಳುತ್ತಿದೆ” ಎಂದಿದ್ದಾರೆ.

“ಕಳೆದ ಮೂರು ವರ್ಷಗಳ ಜಾಗತಿಕ ಇಂಧನ ಪ್ರಕ್ಷುಬ್ಧತೆಯ ಸಮಯದಲ್ಲಿ, ಪ್ರಧಾನಿ ಮೋದಿ ಅವರ ನೇತೃತ್ವದ NDA ಸರ್ಕಾರವು ಭಾರತದ ಕಚ್ಚಾ ತೈಲ ಖರೀದಿ ಮೂಲಗಳನ್ನು ಬೇರೆ ಬೇರೆ ದೇಶಗಳಿಗೆ ವಿಸ್ತರಿಸಿದ ಸಮಯೋಚಿತ ನಿರ್ಧಾರದ ಪರಿಣಾಮವಾಗಿ ಪೆಟ್ರೋಲ್ ಬೆಲೆಗಳು ಸುಮಾರು 14% ರಷ್ಟು ಕಡಿಮೆಯಾಗಿದೆ ಮತ್ತು ಡೀಸೆಲ್ ಬೆಲೆಗಳು ನವೆಂಬರ್ 2021-ಮೇ 2024 ರ ಅವಧಿಯಲ್ಲಿ ಸುಮಾರು 11% ರಷ್ಟು ಕಡಿಮೆಯಾಗಿದೆ. ಅದೇ ಅವಧಿಯಲ್ಲಿ, ಅಮೆರಿಕದಲ್ಲಿ ಪೆಟ್ರೋಲ್ ಬೆಲೆಗಳು 29% ರಷ್ಟು ಏರಿಕೆಯಾಗಿದೆ, ನೆರೆಯ ಪಾಕಿಸ್ತಾನ ಮತ್ತು ಶ್ರೀಲಂಕಾ ಜಾಗತಿಕ ಕಚ್ಚಾ ಬೆಲೆಗಳ ಏರಿಕೆಯಿಂದಾಗಿ ತೀವ್ರ ಆರ್ಥಿಕ ಒತ್ತಡವನ್ನು ಎದುರಿಸಿದವು. ಸದಾ ಚಿಲ್ಲರೆ ರಾಜಕಾರಣದಲ್ಲಿ ಕಾಲ ಕಳೆಯುವ ತಮಗೆ ಜಾಗತಿಕ ರಾಜಕೀಯ, ಜಾಗತಿಕ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅರಿವೂ ಇಲ್ಲ, ಅದನ್ನ ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವೂ ತಮಗಿಲ್ಲ. ತಮಗೆ ಅರ್ಥವಾಗದಿದ್ದರೆ ಸುಮ್ಮನಿದ್ದು ಬಿಡಿ. ತಮ್ಮ ಪೆದ್ದತನ ಪ್ರದರ್ಶನ ಮಾಡಿ ಇನ್ನಷ್ಟು ಸಣ್ಣವರಾಗಬೇಡಿ” ಎಂದು ಹೇಳಿದ್ದಾರೆ.

“ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರವು ನವೆಂಬರ್ 2021 ಮತ್ತು ಮೇ 2022ರಲ್ಲಿ ಎರಡು ಬಾರಿ ಅಬಕಾರಿ ಸುಂಕದಲ್ಲಿ ಗಣನೀಯ ಕಡಿತ ಮಾಡಿತ್ತು. ನವೆಂಬರ್ 2021ರಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಲೀಟರ್‌ಗೆ ₹5 ಮತ್ತು ₹10 ಕಡಿಮೆ ಮಾಡಿತ್ತು. ನಂತರ ಮೇ 2022 ರಲ್ಲಿ ಮತ್ತೊಮ್ಮೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕ್ರಮವಾಗಿ ಲೀಟರ್‌ಗೆ ₹8 ಮತ್ತು ₹6 ರಷ್ಟು ಕಡಿತಗೊಳಿಸಲಾಯಿತು. ಇತ್ತೀಚೆಗೆ ಈ ವರ್ಷ ಮಾರ್ಚ್ 14 ರಂದು ತೈಲ ಕಂಪನಿಗಳು ಲೀಟರ್‌ಗೆ 2 ರೂಪಾಯಿ ಕಡಿಮೆ ಮಾಡಿವೆ” ಎಂದು ತಿಳಿಸಿದ್ದಾರೆ.

“15 ಬಜೆಟ್ ಮಂಡಿಸಿರುವ ಸ್ವಯಂ ಘೋಷಿತ ಆರ್ಥಿಕ ತಜ್ಞರಲ್ಲವೇ ತಾವು? ತಮ್ಮ ಪ್ರಕಾರ ತಾವು ಮಹಾ ಬುದ್ಧಿವಂತರಲ್ಲವೇ? ಹಾಗಾದರೆ ತಾವು ಮಾಡಿರುವ ಯಾವುದಾದರೂ ಒಂದೇ ಒಂದು ಸುಧಾರಣೆ ತೋರಿಸಿ. ರಾಜ್ಯದ ಜನ ತಮ್ಮನ್ನ, ತಮ್ಮ ಆಡಳಿತವನ್ನು ನೆನಪಿನಲ್ಲಿ ಇಟ್ಟುಕೊಳ್ಳಬಹುದಾದ ಯಾವುದಾದರೂ ಒಂದು ಗಣನೀಯ ಮೂಲಸೌಕರ್ಯ ಯೋಜನೆ, ಕೈಗಾರಿಕಾ ನೀತಿ ಸುಧಾರಣೆ, ಮಾನವ ಅಭಿವೃದ್ಧಿ ಸೂಚ್ಯಂಕ ಸುಧಾರಣೆ, ಯಾವುದಾದರೂ ಸಾಧನೆ ಇದೆಯೇ? ನಿಮ್ಮ ಯೋಗ್ಯತೆಗೆ ಯಾವುದೂ ಇಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಕರ್ನಾಟಕ ಕಂಡ ಅತ್ಯಂತ ಅಸಮರ್ಥ, ಪೆದ್ದ ಮುಖ್ಯಮಂತ್ರಿ ಅಂದರೆ ಅದು ತಾವೇ ಮಿಸ್ಟರ್ ಸಿದ್ದರಾಮಯ್ಯನವರೇ. ಇತಿಹಾಸ ನಿಮ್ಮನ್ನ ಕರೆಯುವುದು ಹೀಗೆ. ನೆನಪಿಡಿ” ಎಂದು ಕುಟುಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರ ಬಜೆಟ್‌-2024 | ಮಹಿಳೆಯರಿಗೆ ನೆರವಾಗುವ ನಾರಿಶಕ್ತಿ ಬಜೆಟ್ ಇದಾಗಿದೆ: ಎಚ್‌ ಡಿ ಕುಮಾರಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ 'ವಿಕಸಿತ ಭಾರತ' ನಿರ್ಮಾಣಕ್ಕೆ ಶಕ್ತಿ...

ಕೇಂದ್ರ ಬಜೆಟ್‌ | ಕರ್ನಾಟಕಕ್ಕಿಲ್ಲ ವಿಶೇಷ ಯೋಜನೆ; ಆಯವ್ಯಯದ ಮುಖ್ಯಾಂಶಗಳು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ (ಜುಲೈ 23)ರಂದು...

ಸಿಎಂ ಸಿದ್ದರಾಮಯ್ಯ ಮನೆಗೆ ಹೋಗುವ ಕಾಲ ಬಂದಿದೆ: ಛಲವಾದಿ ನಾರಾಯಣಸ್ವಾಮಿ

ಸಿಎಂ ಸಿದ್ದರಾಮಯ್ಯ ಅವರನ್ನು ರಕ್ಷಿಸಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ನಾಯಕರೂ ಏನೂ...

ಕೇಂದ್ರ ಬಜೆಟ್ | ಬಿಹಾರ ರಸ್ತೆಗಳಿಗೆ ₹26,000 ಕೋಟಿ; ಶಿಕ್ಷಣ, ಉದ್ಯೋಗ, ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ

ಮೂರನೇ ಅವಧಿಗೆ ಸರ್ಕಾರ ರಚಿಸಿರುವ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ...