ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ವಿಚಾರ : ಉಲ್ಟಾ ಹೊಡೆದ ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ!

Date:

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ವಿರುದ್ದ ಬಂಡಾಯ ಎದ್ದು ಸುದ್ದಿಗೀಡಾಗಿದ್ದ ಸಂಘಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು ಎಂದು ಸುದ್ದಿ ಹರಡಿತ್ತು.

- Advertisement -

ಈ ಬಗ್ಗೆ ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗ, ‘ಪುತ್ತಿಲ ಬಿಜೆಪಿ ಸೇರ್ಪಡೆ ವಿಚಾರ ಬಗ್ಗೆ ಪಕ್ಷದಲ್ಲಿ ಯಾವುದೇ ತೀರ್ಮಾನ ಆಗಿಲ್ಲ. ಇದೆಲ್ಲವೂ ಮಾಧ್ಯಮಗಳ ಸೃಷ್ಟಿ” ಎಂದಿದ್ದರು. ಆದರೆ, ಈ ವಿಚಾರದಲ್ಲಿ ಈಗ ಉಲ್ಟಾ ಹೊಡೆದಿದ್ದು, ‘ರಾಜ್ಯಾಧ್ಯಕ್ಷರ ತೀರ್ಮಾನವೇ ನಮಗೆ ಅಂತಿಮ’ ಎಂದು ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಈ ಬಗ್ಗೆ ಮತ್ತೆ ಮಾತನಾಡಿರುವ ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, “ಪುತ್ತಿಲ ಅವರು ಬೆಂಗಳೂರಿನಲ್ಲೇ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರ ಜೊತೆ ಮಾತುಕತೆ ನಡೆದು ಸೇರ್ಪಡೆ ಮಾಡಲಾಗಿದೆ. ಇನ್ನು ಮತ್ತೆ ಮಂಗಳೂರಿನಲ್ಲಿ ಸೇರ್ಪಡೆಯಂಥ ಪ್ರಕ್ರಿಯೆಗಳು ಇಲ್ಲ” ಎಂದಿದ್ದಾರೆ.

putila

“ಕೆಲ ಕಾರ್ಯಕರ್ತರು ಹಾಗೂ ಕೆಲವರಲ್ಲಿ ಇಂಥಹ ಗೊಂದಲ ಇರುವುದು ಸಹಜ. ಆದರೆ ರಾಜ್ಯಾಧ್ಯಕ್ಷರೇ ನಮಗೆ ಸುಪ್ರೀಂ. ಅವರ ಸೂಚನೆಯಂತೆ ಪುತ್ತಿಲ ಇರುತ್ತಾರೆ. ಅರುಣ್ ಕುಮಾರ್ ಪುತ್ತಿಲ ಲೋಕಸಭೆಯ ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡುತ್ತಾರೆ. ಈ ವಿಚಾರದಲ್ಲಿ ಯಾವುದೇ ಗೊಂದಲ ಬೇಡ, ಪುತ್ತಿಲ ಕೂಡ ಒಪ್ಪಿದ್ದಾರೆ” ಎಂದು ಸತೀಶ್ ಕುಂಪಲ ತಿಳಿಸಿದ್ದಾರೆ.

“ಪುತ್ತಿಲ ಪರಿವಾರ ವಿಸರ್ಜನೆ ಮಾಡಿಕೊಂಡೇ ಬಿಜೆಪಿಯಲ್ಲೇ ಕೆಲಸ ಮಾಡುತ್ತಾರೆ. ಪುತ್ತೂರು ಬಿಜೆಪಿಯಲ್ಲಿ ಯಾವುದೇ ಅಸಮಾಧಾನ ಇಲ್ಲ. ಪುತ್ತಿಲ ಪಕ್ಷೇತರ ಸ್ಪರ್ಧೆ ವೇಳೆ ಹಲವು ಸಂಘರ್ಷ ಆಗಿದೆ. ಈ ವಿಚಾರದಲ್ಲಿ ಸರಿ ಪಡಿಸುವ ಕೆಲಸ ಆಗುತ್ತಿದೆ. ಬಹುತೇಕ ಸರಿಯಾಗಿದ್ದು, ಸಣ್ಣ ಸಣ್ಣ ಗೊಂದಲಗಳು‌ ಇರುವುದು ಸಹಜ. ಅದೆಲ್ಲವನ್ನೂ ಸರಿಪಡಿಸುತ್ತೇವೆ. ಆದರೆ ಪುತ್ತಿಲ ಬಿಜೆಪಿಗೆ‌ ಬರಬಾರದು ಅಂತ ಯಾರೂ ಹೇಳಿರಲಿಲ್ಲ” ಎಂದು ಕುಂಪಲ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಏಳನೇ ವೇತನ ಆಯೋಗ ವರದಿ ಸಲ್ಲಿಕೆ, ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು

“ಪಕ್ಷ ಸೇರುವ ಬಗ್ಗೆ ರಾಜ್ಯಾಧ್ಯಕ್ಷರ ಜೊತೆಗೆ ಮಾತನಾಡಿ ಸಹಮತ ವ್ಯಕ್ತಪಡಿಸಿ ಪುತ್ತಿಲ ಬಿಜೆಪಿಗೆ ಬಂದಿದ್ದಾರೆ. ಹೀಗಿರುವಾಗ ಮತ್ತೆ ಧ್ವಜ ಕೊಟ್ಟು ಸ್ವಾಗತ ಮಾಡಬೇಕು ಅಂತೇನಿಲ್ಲ. ರಾಜ್ಯಾಧ್ಯಕ್ಷರಿಗಿಂತ ನಾವು ದೊಡ್ಡವರಲ್ಲ, ಅವರು ಹೇಳಿದ ಮೇಲೆ ಮುಗೀತು. ಅರುಣ್ ಪುತ್ತಿಲ ಬಿಜೆಪಿ ಜೊತೆ ಕೆಲಸ ಮಾಡಲಿದ್ದಾರೆ” ಎಂದು ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.

“ಇದೆಲ್ಲವೂ ಮಾಧ್ಯಮಗಳ ಸೃಷ್ಟಿ” ಎಂದಿದ್ದ ಬಿಜೆಪಿ ಜಿಲ್ಲಾಧ್ಯಕ್ಷ

ಲೋಕಸಭಾ ಚುನಾವಣೆ ಕಾರ್ಯತಂತ್ರ ಬಗ್ಗೆ ಪುತ್ತೂರಿನಲ್ಲಿ ಕಾರ್ಯಕರ್ತರು ಮತ್ತು ಮುಖಂಡರುಗಳೊಂದಿಗೆ ಸಭೆ ನಡೆಸಿದ ಅವರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗ ಅರುಣ್ ಕುಮಾರ್ ಪುತ್ತಿಲ ಪಕ್ಷ ಸೇರ್ಪಡೆ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದ್ದರು.

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, “ಪುತ್ತಿಲ ಪರಿವಾರ ಮಂಗಳೂರಿನಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ವಿಚಾರ ಬಗ್ಗೆ ಪಕ್ಷದಲ್ಲಿ ಯಾವುದೇ ತೀರ್ಮಾನ ಆಗಿಲ್ಲ. ಇದೆಲ್ಲವೂ ಮಾಧ್ಯಮಗಳ ಸೃಷ್ಟಿ” ಎಂದು ಹೇಳಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಗನ್, ಡ್ರ್ಯಾಗರ್ ಹಿಡಿದು ರೀಲ್ಸ್‌! ಯುವಕನ ವಿರುದ್ಧ ಸುವೋ ಮೊಟೋ ಕೇಸ್‌

ಯುವಕನೊಬ್ಬ ಗನ್ ಮತ್ತು ಡ್ರ್ಯಾಗರ್ ಹಿಡಿದುಕೊಂಡು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಪೋಸ್ಟ್ ಮಾಡಿ...

ಶಿವಮೊಗ್ಗ | ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆ ಆತ್ಮಹತ್ಯೆಗೆ ಶರಣು

ಧೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಶಿವಮೊಗ್ಗ...

ಜಮಖಂಡಿಯಲ್ಲಿ ಅ.4ರಂದು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ನಾಡು–ನುಡಿ, ಸಾಹಿತ್ಯ ಹಾಗೂ ಸಂಸ್ಕೃತಿಯ ಸೊಗಡನ್ನು ಪಸರಿಸುವ ಉದ್ದೇಶದಿಂದ ಜಮಖಂಡಿ...

ಯುಪಿ ಚುನಾವಣೆ | ಕಾಂಗ್ರೆಸ್‌ಗೆ ಫಲ ನೀಡುವುದೇ ಬ್ರಾಹ್ಮಣ-ಮುಸ್ಲಿಂ ಸಮೀಕರಣ

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ಫೆಬ್ರವರಿ-ಮಾರ್ಚ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ...