ಇಂದು ತಿಹಾರ್ ಜೈಲಿಗೆ ದೆಹಲಿ ಸಿಎಂ ಶರಣು: ಬೆಂಬಲಿಗರಿಗೆ ಕೇಜ್ರಿವಾಲ್ ಸಂದೇಶ

Date:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ 21 ದಿನಗಳ ಮಧ್ಯಂತರ ಜಾಮೀನು ಅಂತ್ಯಗೊಂಡ ಕಾರಣ ಜೂನ್ 2ರಂದು ಭಾನುವಾರ ತಿಹಾರ್ ಜೈಲಿಗೆ ಶರಣಾಗಲಿದ್ದಾರೆ ಎಂದು ತಿಳಿಸಿದ್ದಾರೆ.

- Advertisement -

ಕೇಂದ್ರ ಕಾರಾಗೃಹದಲ್ಲಿ ಶರಣಾಗುವ ಮುನ್ನ ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಅವರ ಸ್ಮಾರಕ ಮತ್ತು ಕನ್ನಾಟ್ ಪ್ಲೇಸ್‌ನಲ್ಲಿರುವ ಪ್ರಾಚೀನ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಬಗ್ಗೆ ಎಕ್ಸ್‌ ಪೋಸ್ಟ್‌ನಲ್ಲಿ ಬರೆದಿರುವ ಅರವಿಂದ್ ಕೇಜ್ರಿವಾಲ್ ಅವರು, “ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ನಾನು 21 ದಿನಗಳ ಕಾಲ ಚುನಾವಣಾ ಪ್ರಚಾರಕ್ಕೆ ಬಂದಿದ್ದೇನೆ. ಸುಪ್ರೀಂ ಕೋರ್ಟ್‌ಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಇಂದು ನಾನು ಮತ್ತೆ ಶರಣಾಗುತ್ತೇನೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ‘ವೈದ್ಯರು ನನಗೆ ಗಂಭೀರ ಕಾಯಿಲೆಯ ಲಕ್ಷಣಗಳಿವೆ ಎಂದಿದ್ದಾರೆ’: ಅರವಿಂದ್ ಕೇಜ್ರಿವಾಲ್

“ತಿಹಾರ್‌ಗೆ ಹೋಗುವಾಗ ನಾನು ಮೊದಲು ರಾಜ್‌ಘಾಟ್‌ಗೆ ಹೋಗುತ್ತೇನೆ ಮತ್ತು ಅಲ್ಲಿಂದ ಹನುಮಾನ್ ದೇವರ ಆಶೀರ್ವಾದವನ್ನು ಪಡೆಯಲು ಹೋಗುತ್ತೇನೆ. ಪಕ್ಷದ ಕಚೇರಿಯಲ್ಲಿ ಮತ್ತು ಪಕ್ಷದ ನಾಯಕರನ್ನು ಭೇಟಿ ಮಾಡಿ, ನಾನು ಮತ್ತೆ ತಿಹಾರ್‌ಗೆ ಹೋಗುತ್ತೇನೆ. ನಿಮ್ಮ ಬಗ್ಗೆ ನೀವು ಕಾಳಜಿ ವಹಿಸಿಕೊಳ್ಳಿ. ಜೈಲಿನಲ್ಲಿರುವಾಗ ನಿಮ್ಮೆಲ್ಲರ ಬಗ್ಗೆ ನನಗೆ ಚಿಂತೆಯಾಗುತ್ತದೆ. ನೀವು ಸಂತೋಷವಾಗಿದ್ದರೆ ನಿಮ್ಮ ಕೇಜ್ರಿವಾಲ್ ಜೈಲಿನಲ್ಲಿಯೂ ಸಂತೋಷವಾಗಿರುತ್ತಾನೆ” ಎಂದು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ನೀಡಿದ ಮಧ್ಯಂತರ ಜಾಮೀನಿನ ಮೇಲೆ ಕೇಜ್ರಿವಾಲ್ ಮೇ 10ರಂದು ಜೈಲಿನಿಂದ ಬಿಡುಗಡೆಯಾಗಿದ್ದರು. ನ್ಯಾಯಾಲಯ ಅವರಿಗೆ 21 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಜೂನ್ 2ರಂದು ತಿಹಾರ್ ಜೈಲು ಅಧೀಕ್ಷಕರ ಮುಂದೆ ಶರಣಾಗುವಂತೆ ಸೂಚಿಸಿದೆ.

ಇದನ್ನು ಓದಿದ್ದೀರಾ?  ದೇಶ ಉಳಿಸಲು 100 ಬಾರಿ ಜೈಲಿಗೆ ಹೋಗಲು ಸಿದ್ಧ: ಅರವಿಂದ್ ಕೇಜ್ರಿವಾಲ್

ತಮ್ಮ ಆರೋಗ್ಯ ಸ್ಥಿತಿ ಹದಗೆಟ್ಟಿರುವ ಕಾರಣದಿಂದ ಮಧ್ಯಂತರ ಜಾಮೀನಿನ ಅವಧಿಯನ್ನು ಏಳು ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಕೇಜ್ರಿವಾಲ್ ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿರುವ ಮನವಿಯಲ್ಲಿ, ತಮ್ಮ ತೂಕ ಕಡಿಮೆಯಾಗುತ್ತಿದ್ದು ಕೆಲವು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಿದೆ ಎಂದು ಮನವಿ ಮಾಡಿದ್ದಾರೆ.

ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ನಂತರ ಅವರು ವೈದ್ಯಕೀಯ ಕಾರಣಗಳಿಗಾಗಿ ಜಾಮೀನು ಕೋರಿ ವಿಶೇಷ ಸಿಬಿಐ-ಇಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ತಮ್ಮ ಅರ್ಜಿಯ ಆದೇಶವನ್ನು ಜೂನ್ 5ಕ್ಕೆ ಕಾಯ್ದಿರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...