ಇಡಿ ಕಸ್ಟಡಿಯಲ್ಲಿ ಸಿಎಂ ಕೇಜ್ರಿವಾಲ್ ಆರೋಗ್ಯ ಹದಗೆಟ್ಟಿದೆ: ಎಎಪಿ

Date:

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಕಸ್ಟಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯ ಹದಗೆಟ್ಟಿದೆ ಎಂದು ಎಎಪಿ ಹೇಳಿರುವುದಾಗಿ ವರದಿಯಾಗಿದೆ.

ಅರವಿಂದ್ ಕೇಜ್ರಿವಾಲ್ ಅವರಲ್ಲಿ ಮಧುಮೇಹ ಪ್ರಮಾಣ ಏರುಪೇರಾಗುತ್ತಿದ್ದು, ಆರೋಗ್ಯವು ಹದಗೆಡುತ್ತಿದೆ. ಕೇಜ್ರಿವಾಲ್ ದೇಹದಲ್ಲಿ ಸಕ್ಕರೆ ಪ್ರಮಾಣ 46 ಎಂಜಿಗೆ ತಲುಪಿದೆ. ವೈದ್ಯರ ಪ್ರಕಾರ ಸಕ್ಕರೆ ಪ್ರಮಾಣದಲ್ಲಿ ಈ ಮಟ್ಟಿನ ಇಳಿಕೆ ‘ಅತ್ಯಂತ ಅಪಾಯಕಾರಿ’ ಎಂದು ಎಎಪಿ ಹೇಳಿದೆ.

ಇದಕ್ಕೂ ಮುನ್ನ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ್ದು, “ನಾನು ಇಡಿ ಕಸ್ಟಡಿಯಲ್ಲಿರುವ ನನ್ನ ಪತಿಯನ್ನು ಭೇಟಿಯಾದೆ. ಅವರ ಸಕ್ಕರೆ ಪ್ರಮಾಣ ಏರಿಳಿತವಾಗುತ್ತಿದೆ. ಅವರ ಆರೋಗ್ಯಕ್ಕಾಗಿ ಎಲ್ಲರೂ ಪ್ರಾರ್ಥಿಸಿ” ಎಂದು ಮನವಿ ಮಾಡಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ?  ಅರವಿಂದ್ ಕೇಜ್ರಿವಾಲ್ ಮನೆಯಲ್ಲಿ ಇಡಿಗೆ ಸಿಕ್ಕಿದು ಬರೀ 70,000 ರೂಪಾಯಿ: ಎಎಪಿ

“ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಯಲ್ಲಿ ಹಗರಣ ನಡೆದಿದೆ ಎಂದು ತನಿಖೆಯ ಸಲುವಾಗಿ ಜಾರಿ ನಿರ್ದೇಶನಾಲಯ ಮಾ.21ರಂದು ತಮ್ಮ ಕಸ್ಟಡಿಗೆ ತೆಗೆದುಕೊಂಡಿದೆ. ಇ.ಡಿ ದಾಳಿ ನಡೆಸಿದಾಗ ದೆಹಲಿ ಸಿವಿಲ್ ಲೈನ್ಸ್‌ ಪ್ರದೇಶದ ಮನೆಯಲ್ಲಿ ಜಾರಿ ನಿರ್ದೇಶನಾಲಯಕ್ಕೆ ಕೇವಲ 73 ಸಾವಿರ ರೂ. ಮಾತ್ರ ಹಣ ದೊರಕಿದೆ” ಎಂದು ತಿಳಿಸಿದರು.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮನಿಲಾಂಡರಿಂಗ್ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯವು ಬಂಧಿಸಿದೆ. ಮಾರ್ಚ್ 28ರವರೆಗೆ ಕೇಜ್ರಿವಾಲ್ ಇಡಿ ಕಸ್ಟಡಿಯಲ್ಲಿ ಇರಲಿದ್ದಾರೆ. ಇನ್ನು ಅರವಿಂದ್ ಕೇಜ್ರಿವಾಲ್ ತನ್ನ ಬಂಧನವನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್...

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...