ನನಗಿರುವ ಮಾಹಿತಿ ಪ್ರಕಾರ ಸಿ ಪಿ ಯೋಗೇಶ್ವರ್‌ ಪಕ್ಷೇತರ ಅಭ್ಯರ್ಥಿಯಾಗಲಿದ್ದಾರೆ: ಡಿ ಕೆ ಸುರೇಶ್‌

Date:

ನನಗಿರುವ ಮಾಹಿತಿ ಪ್ರಕಾರ ಸಿ ಪಿ ಯೋಗೇಶ್ವರ್‌ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಚನ್ನಪಟ್ಟಣದ ಕಾರ್ಯಕರ್ತರು ನನಗೆ ಕರೆ ಮಾಡಿ ಯೋಗೇಶ್ವರ್ ಅವರು ಪಕ್ಷೇತರವಾಗಿ ಸ್ಪರ್ಧೆ ಮಾಡಲು ಸಭೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಈ ಸಭೆಯ ವಾಸ್ತವಾಂಶ ಏನು ಎಂದು ಸಂಜೆಯ ಒಳಗಾಗಿ ತಿಳಿಯಲಿದೆ ಎಂದು ಮಾಜಿ ಸಂಸದ ಡಿ ಕೆ ಸುರೇಶ್‌ ಹೇಳಿದರು.

- Advertisement -

ಸದಾಶಿವನಗರ ನಿವಾಸದ ಬಳಿ ಮಂಗಳವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, “ಯೋಗೇ‌ಶ್ವರ್‌ ಅವರು ಕಾಂಗ್ರೆಸ್ ಸೇರುವ ಬಗ್ಗೆ ಯಾವುದೇ ಮಾಹಿತಿ ನನಗಿಲ್ಲ. ಚನ್ನಪಟ್ಟಣದಲ್ಲಿ ಕಳೆದ ಮೂರು ತಿಂಗಳಿನಿಂದ ಜೆಡಿಎಸ್ ಹಾಗೂ ಬಿಜೆಪಿಯಿಂದ ಬರುವ ಎಲ್ಲಾ ಮುಖಂಡರನ್ನು ನಾವು ಸ್ವಾಗತಿಸಿದ್ದೇವೆ. ಪಕ್ಷದ ತತ್ವ ಸಿದ್ಧಾಂತ, ನಾಯಕತ್ವ ಒಪ್ಪಿ ಬರುವವರಿಗೆ ಸ್ವಾಗತವಿದೆ. ಯೋಗೇಶ್ವರ್ ಅಥವಾ ಮತ್ತೊಬ್ಬರು ಎಂದು ಪ್ರತ್ಯೇಕಿಸಿ ಹೇಳುವುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಕಾರ್ಯಕರ್ತರು ನಿಮ್ಮ ಸ್ಪರ್ಧೆಗೆ ಹೆಚ್ಚಿನ ಒತ್ತಡ ಹಾಕುತ್ತಿದ್ದಾರೆ, ಚನ್ನಪಟ್ಟಣದಲ್ಲಿ ಗೆಲ್ಲುವ ವಿಶ್ವಾಸವಿದೆಯೇ ಎಂದು ಕೇಳಿದ ಪ್ರಶ್ನೆಗೆ, “ನನ್ನ ಮುಕ್ತವಾದ ಅಭಿಪ್ರಾಯಗಳನ್ನು ಪಕ್ಷದ ವರಿಷ್ಠರಿಗೆ ತಿಳಿಸುತ್ತೇನೆ. ಅವರು ತೀರ್ಮಾನ ಮಾಡಿದ ನಂತರ ನಾನು ತೀರ್ಮಾನ ಮಾಡುತ್ತೇನೆ. ಪಕ್ಷದ ಆದೇಶವನ್ನು ನಾನೂ ಪಾಲಿಸಬೇಕು, ನಮ್ಮ ಮುಖಂಡರೂ ಪಾಲಿಸಬೇಕು” ಎಂದು ಹೇಳಿದರು.

ಸೋಮವಾರ ರಾತ್ರಿ ರಾಮನಗರ ಜಿಲ್ಲಾ ಮುಖಂಡರ ಸಭೆಯಲ್ಲಿ ಏನೆಲ್ಲಾ ಚರ್ಚೆಯಾಗಿದೆ ಎಂದು ಕೇಳಿದಾಗ, “ನಮ್ಮ ಪಕ್ಷದ ಮುಂದಿನ ನಡೆ ಹೇಗಿರಬೇಕು ಎಂದು ಜಿಲ್ಲೆ ಶಾಸಕರು ಹಾಗೂ ಮುಖಂಡರ ಜತೆ ನಾವು ಚರ್ಚೆ ಮಾಡಿದ್ದು, ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷ ಗಟ್ಟಿಯಾಗಿದ್ದು, ಪಕ್ಷದಿಂದಲೇ ಹೋರಾಟ ಮಾಡಬೇಕು ಎಂದು ಸಲಹೆ ನೀಡಿದ್ದಾರೆ” ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...