ಹತ್ತು ವರ್ಷಗಳಲ್ಲಿ ಮಾಡಿರುವ ಕೆಲಸ ಮುಂದಿಟ್ಟು ಕೂಲಿ ಕೇಳುತ್ತಿದ್ದೇನೆ: ಸಂಸದ ಡಿ ಕೆ ಸುರೇಶ್

Date:

ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯದ ವಿರುದ್ಧ ನಾನು ಧ್ವನಿ ಎತ್ತಿದ್ದೇನೆ. ಬಿಜೆಪಿಯವರು ಅದನ್ನು ದೇಶ ವಿಭಜನೆ ಎಂದುಕೊಂಡರೆ ನಾನೇನು ಮಾಡಲು ಸಾಧ್ಯವಿಲ್ಲ ಎಂದು ಸಂಸದ ಡಿ ಕೆ ಸುರೇಶ್ ತಿಳಿಸಿದರು.

- Advertisement -

ರಾಮನಗರ ಜಿಲ್ಲೆ ಹಾರೋಹಳ್ಳಿಯಲ್ಲಿ ಮಂಗಳವಾರ ಅನ್ಯಪಕ್ಷಗಳ ನಾಯಕರ ಬೆಂಬಲ ಪಡೆದ ನಂತರ ಮಾಧ್ಯಮಗಳು, ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಅವರು ನಿಮ್ಮ ಹೇಳಿಕೆಯನ್ನು ದೇಶ ವಿಭಜನೆ ಕೂಗು ಎಂದು ಹೇಳಿರುವ ಬಗ್ಗೆ ಕೇಳಿದಾಗ ಅವರು ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಅವರು ಏನೇ ಹೇಳಿದರೂ ನಡೆಯುತ್ತದೆ ಎಂಬ ಧಾಟಿಯಲ್ಲಿ ಅವರು ಮಾತನಾಡುತ್ತಿದ್ದಾರೆ. ನೀವು ನನ್ನನ್ನು ಪ್ರಶ್ನೆ ಮಾಡಿದ ರೀತಿಯಲ್ಲಿ ಅವರನ್ನು ಪ್ರಶ್ನೆ ಮಾಡಿ. ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನಾನು ಯಾವ ಕಾರಣಕ್ಕೆ ಆ ಹೇಳಿಕೆ ನೀಡಿದೆ ಎಂದು ನೀವು ಪ್ರಧಾನಿಯವರನ್ನು ಕೇಳಿ” ಎಂದರು.

“ಮೋದಿ ಅವರು ಕಳೆದ 10 ವರ್ಷಗಳಲ್ಲಿ ಬೆಂಗಳೂರಿಗೆ ಹಾಗೂ ಕರ್ನಾಟಕಕ್ಕೆ ಕೊಟ್ಟಿರುವ ಕೊಡುಗೆಗಳ ಬಗ್ಗೆ ಚರ್ಚೆ ಮಾಡಿ. ನೀರಿನ ಅಭಾವ ಇರುವ ಸಂದರ್ಭದಲ್ಲಿ ಮೇಕೆದಾಟು ಯೋಜನೆಗೆ ಅನುಮತಿ ಯಾಕೆ ನೀಡುತ್ತಿಲ್ಲ? ಈ ಯೋಜನೆಗೆ ಅನುಮತಿ ನೀಡಲು ಯಾವ ಸಮಸ್ಯೆ ಇದೆ. ನಾನು ಕನ್ನಡಿಗರ ಪರವಾಗಿ ಧ್ವನಿ ಎತ್ತಿದ್ದೇನೆ” ಎಂದು ಹೇಳಿದರು.

ಬಿಜೆಪಿ ಸರ್ಕಾರದ ಶಾಡೋ ಸಿಎಂಗಳನ್ನೂ ಜನ ನೋಡಿದ್ದಾರೆ

ಅನೇಕ ಸೂಪರ್ ಸಿಎಂಗಳಿದ್ದಾರೆ ಎಂಬ ಪ್ರಧಾನಿ ಟೀಕೆ ಬಗ್ಗೆ ಕೇಳಿದಾಗ, “ಅವರು ಈ ರೀತಿ ಹೇಳುವುದು ಹೊಸತೇನಲ್ಲ. ಅವರ ಸರ್ಕಾರ ಇದ್ದಾಗ ಯಾರೆಲ್ಲಾ ಶಾಡೋ ಸಿಎಂ ಆಗಿ ಕೆಲಸ ಮಾಡಿದ್ದಾರೆ ಎಂದು ಜನ ನೋಡಿದ್ದಾರೆ. ಅವರು ಹೇಳಿಕೆ ಕೇವಲ ಚುನಾವಣಾ ಗಿಮಿಕ್. ಎಲ್ಲರ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದವರು, ನಂತರ ಅದು ಸುಳ್ಳು ಎಂದರು” ಎಂದು ತಿಳಿಸಿದರು.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಬಿಜೆಪಿ-ಜೆಡಿಎಸ್ ನಡುವಿನ ಬಿರುಕಲ್ಲ, ಬಿಕ್ಕಟ್ಟಲ್ಲ, ಆಟ

ಕುಮಾರಸ್ವಾಮಿ ಆರೋಗ್ಯ ಬೇಗ ಸುಧಾರಿಸಲಿ

ಡಿ ಕೆ ಸುರೇಶ್ ನನ್ನ ಬದುಕಿಗೆ ವಿಷ ಹಾಕಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಯಾರ ಬದುಕಿಗೂ ವಿಷ ಹಾಕುವವನಲ್ಲ. ಎಲ್ಲರಿಗೂ ಒಳ್ಳೆಯದನ್ನೇ ಬಯಸುತ್ತೇನೆ. ಅವರು ಆರೋಗ್ಯ ತಪಾಸಣೆಗಾಗಿ ವಿದೇಶಕ್ಕೆ ತೆರಳುತ್ತಿದ್ದಾರೆ. ಅವರು ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದರು.

ಪಾರದರ್ಶಕ ಚುನಾವಣೆಗೆ ಪ್ಯಾರಾ ಮಿಲಿಟರಿ ಕರೆಸಬೇಕು ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಪ್ಯಾರಾ ಮಿಲಿಟರಿ ಆದರೂ ಕರೆಸಿಕೊಳ್ಳಲಿ, ಪ್ರಧಾನಮಂತ್ರಿ ಅವರನ್ನಾದರೂ ಕರೆಸಿಕೊಳ್ಳಲಿ. ನಮ್ಮ ತಕರಾರು ಏನೂ ಇಲ್ಲ. ನಾನು ಈವರೆಗೂ ಮಾಡಿರುವ ಕೆಲಸಗಳಿಗೆ ಮತದಾರರಿಂದ ಕೂಲಿ ಕೇಳುತ್ತಿದ್ದೇನೆ. ಕಳೆದ ಹತ್ತು ವರ್ಷಗಳಲ್ಲಿ ಮಾಡಿರುವ ಕೆಲಸ ಮುಂದಿಟ್ಟು ಕೂಲಿ ಕೇಳುತ್ತಿದ್ದೇನೆ” ಎಂದು ಹೇಳಿದರು.

ಬಲವಂತವಾಗಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಕಾಂಗ್ರೆಸ್ ಶಾಲು ಹಾಕುತ್ತಿದ್ದಾರೆ ಎಂಬ ಸಿ. ಪಿ ಯೋಗೇಶ್ವರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನನಗೆ ಬಲವಂತ ಮಾಡುವ ಅಭ್ಯಾಸವಿಲ್ಲ. ಅವರು ತಮ್ಮ ನಾಯಕರನ್ನು ಮೆಚ್ಚಿಸಿಕೊಳ್ಳಲು ಮಾಧ್ಯಮಗಳ ಮುಂದೆ ಬಂದು ಮಾತನಾಡುತ್ತಾರೆ. ಕೆಲಸಗಳ ಮೂಲಕ ನಾನು ಜನರನ್ನು ತಲುಪಿದ್ದೇನೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...