ಬಹುಪತ್ನಿತ್ವ ನಿಷೇಧಕ್ಕೆ ತಜ್ಞರ ಸಮಿತಿ ರಚಿಸಲು ಮುಂದಾದ ಅಸ್ಸಾಂ ಸರ್ಕಾರ

Date:

  • ಮುಸ್ಲಿಂ ವೈಯಕ್ತಿಕ ಕಾನೂನು (ಶರಿಯತ್) ಕಾಯಿದೆ ಪರಿಶೀಲಿಸುವುದಾಗಿ ಹೇಳಿರುವ ಸಿಎಂ
  • ಐವರು ನ್ಯಾಯಾಧೀಶರ ಸಂವಿಧಾನ ಪೀಠ ಸ್ಥಾಪಿಸುವುದಾಗಿ ಹೇಳಿದ್ದ ಸುಪ್ರೀಂ ಕೋರ್ಟ್

ಬಹುಪತ್ನಿತ್ವ ನಿಷೇಧಕ್ಕೆ ಮುಂದಾಗಿರುವ ಅಸ್ಸಾಂನ ಬಿಜೆಪಿ ಸರ್ಕಾರ, ಕಾಯಿದೆ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆಯೇ ಎಂದು ಪರೀಶಿಲಿಸಲು ತಜ್ಞರ ಸಮಿತಿ ರಚಿಸಲು ಮುಂದಾಗಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, “ರಾಜ್ಯವು ಬಹುಪತ್ನಿತ್ವದ ಮೇಲೆ ನಿಷೇಧ ಹೇರಲು ಸಾಧ್ಯವಾದರೆ ತಮ್ಮ ಸರ್ಕಾರವು ಅಧ್ಯಯನ ನಡೆಸಲಿದೆ. ಇದಕ್ಕಾಗಿ ಕಾನೂನಿನ ಅಂಶಗಳನ್ನು ಅನ್ವೇಷಿಸಲು ತಜ್ಞರ ಸಮಿತಿ ರಚಿಸಲು ಸರ್ಕಾರ ನಿರ್ಧರಿಸಿದೆ” ಎಂದು ತಿಳಿಸಿದರು.

“ರಾಜ್ಯದಲ್ಲಿ ಬಹುಪತ್ನಿತ್ವವನ್ನು ನಿಷೇಧಿಸಲು ರಾಜ್ಯ ಶಾಸಕಾಂಗಕ್ಕೆ ಅಧಿಕಾರವಿದೆಯೇ ಎಂಬುದನ್ನು ಪರಿಶೀಲಿಸಲು ಅಸ್ಸಾಂ ಸರ್ಕಾರವು ತಜ್ಞರ ಸಮಿತಿಯನ್ನು ರಚಿಸಲು ನಿರ್ಧರಿಸಿದೆ. ಸಮಿತಿಯು ಸಂವಿಧಾನದ 25ನೇ ವಿಧಿಯೊಂದಿಗೆ ಮುಸ್ಲಿಂ ವೈಯಕ್ತಿಕ ಕಾನೂನು (ಶರಿಯತ್) ಕಾಯಿದೆ, 1937ರ ನಿಬಂಧನೆಗಳನ್ನು ಪರಿಶೀಲಿಸುತ್ತದೆ” ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಾನೂನು ತಜ್ಞರು ಸೇರಿದಂತೆ ಎಲ್ಲಾ ಮಧ್ಯಸ್ಥಗಾರರೊಂದಿಗೆ ಸಮಿತಿಯು ವಿಸ್ತೃತ ಚರ್ಚೆಯಲ್ಲಿ ತೊಡಗಿದ್ದು, ಉತ್ತಮ ಯೋಜನೆಯೊಂದಿಗೆ ನಿರ್ಧಾರಕ್ಕೆ ಬರಲಿದೆ” ಎಂದು ಮುಖ್ಯಮಂತ್ರಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಲೆಕ್ಕ ಪರಿಶೋಧಕರು ಮತ್ತು ಕಂಪನಿ ಕಾರ್ಯದರ್ಶಿಗಳಿಗೂ ಕಾಡಲಿದೆ ಪಿಎಂಎಲ್‌ಎ ಗುಮ್ಮ

ಮುಸ್ಲಿಮರಲ್ಲಿ ಬಹುಪತ್ನಿತ್ವ ಮತ್ತು ‘ನಿಕಾಹ್ ಹಲಾಲಾ’ ಪದ್ಧತಿಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಅರ್ಜಿಗಳ ವಿಚಾರಣೆಗೆ ಐವರು ನ್ಯಾಯಾಧೀಶರ ಸಂವಿಧಾನ ಪೀಠ ಸ್ಥಾಪಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದ ಕೆಲವು ತಿಂಗಳುಗಳ ನಂತರ ಅಸ್ಸಾಂ ಸರ್ಕಾರ ಈ ನಿರ್ಧಾರಕ್ಕೆ  ಬಂದಿದೆ.

ಕಳೆದ ವರ್ಷ ಆಗಸ್ಟ್‌ 30ರಂದು ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಹೇಮಂತ ಗುಪ್ತಾ, ಸೂರ್ಯಕಾಂತ್‌, ಎಂ ಎಂ ಸುಂದ್ರೇಶ್‌ ಮತ್ತು ಸುಧಾಂಶು ಧುಲಿಯಾ ಅವರನ್ನು ಒಳಗೊಂಡ ಪಂಚ ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಮಹಿಳಾ ಹಕ್ಕುಗಳ ಆಯೋಗ, ಅಲ್ಪಸಂಖ್ಯಾತರ ಹಕ್ಕುಗಳ ಆಯೋಗವನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಿ ದಾವೆ ಹೂಡಿದವರಿಂದ ಪ್ರತಿಕ್ರಿಯೆ ಕೇಳಿತ್ತು.

ಕೊನೆಗೆ, ನ್ಯಾಯಮೂರ್ತಿ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಗುಪ್ತಾ ಅವರು ಅನುಕ್ರಮವಾಗಿ ಕಳೆದ ವರ್ಷ ಸೆಪ್ಟೆಂಬರ್‌ 23 ಮತ್ತು ಅಕ್ಟೋಬರ್‌ 16ರಂದು ನಿವೃತ್ತರಾದರು. ಪಂಚ ಸದಸ್ಯಪೀಠದಲ್ಲಿ ಇಬ್ಬರು ಕಡಿಮೆ ಆದ ಕಾರಣ ಈಗ ಹೊಸ ಪಂಚ ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ರಚಿಸುವ ಸನ್ನಿವೇಶ ಉಂಟಾಯಿತು. ಹಿಂದಿನ ಪಂಚ ಸದಸ್ಯ ಪೀಠವು ಬಹುಪತ್ನಿತ್ವ ಮತ್ತು ನಿಕಾಹ್‌ ಹಲಾಲಾ ಕುರಿತ 8 ಅರ್ಜಿಗಳನ್ನು ವಿಚಾರಣೆಗೆ ಎತ್ತಿಕೊಂಡಿತ್ತು.

ಸುಪ್ರೀಂ ಕೋರ್ಟ್‌ 2018ರ ಜುಲೈ ತಿಂಗಳಲ್ಲಿ ಈ ಅರ್ಜಿ ವಿಚಾರಣೆಗೆ ಪರಿಗಣಿಸಿದ್ದು, ಅಂಥದ್ದೇ ದಾವೆಗಳ ವಿಚಾರಣೆ ನಡೆಸುತ್ತಿದ್ದ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಟ್ಸಾಪ್‌ನಲ್ಲಿ ಇಂಟರ್‌ನೆಟ್ ಇಲ್ಲದೆ ಫೈಲ್‌ಗಳು, ಇಮೇಜ್‌ಗಳ ಶೇರಿಂಗ್ ಆಯ್ಕೆ

ಸರಿಸುಮಾರು ಮುನ್ನೂರು ಕೋಟಿಗೂ ಸಕ್ರಿಯ ಬಳಕೆದಾರರನ್ನು ಹೊಂದಿರುವ ಪ್ರಬಲ ಸಾಮಾಜಿಕ ಮಾಧ್ಯಮ...

ಕಾಂಗ್ರೆಸ್ ಪಕ್ಷ ಬೆಂಬಲಿಸಲು ಪಿಟಿಸಿಎಲ್ ಹೋರಾಟ ಸಮಿತಿ ನಿರ್ಧಾರ

ಬೆಂಗಳೂರು: ದಲಿತರು, ಸಂವಿಧಾನ ವಿರೋಧಿ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ...

ʼಈ ದಿನʼ ಸಮೀಕ್ಷೆ | ಬಿಗಡಾಯಿಸಿದ ನಿರುದ್ಯೋಗ ; ಮೋದಿ ಆಡಳಿತಕ್ಕೆ ಬೇಸರಗೊಂಡ ಮತದಾರ

“ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು” ಎಂಬ ಘೋಷಣೆಯನ್ನು ನರೇಂದ್ರ ಮೋದಿಯವರು...

ನೇಹಾ ಕನ್ನಡ ನಾಡಿನ ಮಗಳು, ಸಾವಿನ ಮನೆಯಲ್ಲಿ ಬಿಜೆಪಿ ರಾಜಕಾರಣ ಬೇಡ: ಸುರ್ಜೇವಾಲ್

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ಅವರು ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ನೇಹಾ...