ಮುಂಬರುವ ಪಂಚ ರಾಜ್ಯಗಳ ಚುನಾವಣೆಯ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ(ಅ.15) ಬಿಡುಗಡೆಗೊಳಿಸಿದೆ.
ಮಧ್ಯಪ್ರದೇಶ, ತೆಲಂಗಾಣ ಮತ್ತು ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ.
ಮಧ್ಯಪ್ರದೇಶದಲ್ಲಿ 144, ಛತ್ತೀಸ್‌ಗಢದಲ್ಲಿ 30 ಮತ್ತು ತೆಲಂಗಾಣದಲ್ಲಿ 55 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಿಸಿದೆ.
ಮಧ್ಯಪ್ರದೇಶ
ಮಧ್ಯಪ್ರದೇಶದಲ್ಲಿ ಘೋಷಿಸಿರುವ 144 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಪ್ರಸ್ತುತ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಕಾಂಗ್ರೆಸ್ ಮುಖಂಡ, ಜನಪ್ರಿಯ ನಟ ವಿಕ್ರಮ್ ಮಸ್ತಲ್ ಅವರನ್ನು ಬುಧ್ನಿ ವಿಧಾನಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸಿದೆ.
2008ರ ದೂರದರ್ಶನ ಕಾರ್ಯಕ್ರಮ ‘ರಾಮಾಯಣ’ದಲ್ಲಿ ಹನುಮಾನ್ ಪಾತ್ರಕ್ಕಾಗಿ ಮಸ್ತಲ್ ಹೆಚ್ಚು ಹೆಸರುವಾಸಿಯಾಗಿದ್ದಾರೆ.
मध्य प्रदेश में होने वाले विधानसभा चुनाव, 2023 के लिए भारतीय राष्ट्रीय कांग्रेस द्वारा जारी उम्मीदवारों की पहली सूची। pic.twitter.com/RWIXZUoVcv
— Congress (@INCIndia) October 15, 2023
ಉಳಿದಂತೆ ಪ್ರಮುಖರಲ್ಲಿ ಚಿಂದ್ವಾರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್, ರಘೀಗತ್ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರ ಪುತ್ರ ಜೈವರ್ಧನ್ ಸಿಂಗ್ ಅವರನ್ನು ಕಣಕ್ಕಿಳಿಸಿದೆ.
ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ 30 ಎಸ್‌ಟಿ ಸಮುದಾಯ ಕ್ಷೇತ್ರಗಳಲ್ಲಿ ಮತ್ತು 22 ಎಸ್‌ಸಿ ಸಮುದಾಯದ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಮಧ್ಯಪ್ರದೇಶಲ್ಲಿ ಒಟ್ಟು 230 ವಿಧಾನಸಭಾ ಕ್ಷೇತ್ರಗಳಿದ್ದು, ಮೊದಲ ಪಟ್ಟಿಯಲ್ಲಿ 144 ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ನ.17ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ತೆಲಂಗಾಣ
119 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ತೆಲಂಗಾಣದಲ್ಲಿ ಕಾಂಗ್ರೆಸ್ 55 ಅಭ್ಯರ್ಥಿಗಳ ಹೆಸರನ್ನು ಮೊದಲ ಪಟ್ಟಿಯಲ್ಲಿ ಪ್ರಕಟಿಸಿದೆ. ಅನುಮುಲ ರೇವಂತ್ ರೆಡ್ಡಿ ಕೊಡಂಗಲ್ ನಿಂದ ಕಣಕ್ಕಿಳಿದಿದ್ದರೆ, ಉತ್ತಮ್ ಕುಮಾರ್ ರೆಡ್ಡಿ ಹುಜೂರ್ ನಗರದಿಂದ ಸ್ಪರ್ಧಿಸುತ್ತಿದ್ದಾರೆ. ಮೈನಂಪಳ್ಳಿ ರೋಹಿತ್ ರಾವ್ ಮೇದಕ್‌ನಿಂದ ಮತ್ತು ಮೈನಂಪಲ್ಲಿ ಹನುಮಂತ್ ರಾವ್ ಮಲ್ಕಾಜ್‌ಗಿರಿಯಿಂದ ಸ್ಪರ್ಧಿಸಲಿದ್ದಾರೆ.
The Indian National Congress has released the first list of candidates for the Telangana Assembly elections, 2023. pic.twitter.com/KH2CzHK4iV
— Congress (@INCIndia) October 15, 2023
ತೆಲಂಗಾಣದಲ್ಲಿ ನವೆಂಬರ್ 30ರಂದು ಚುನಾವಣೆ ನಡೆಯಲಿದ್ದು, ಡಿ. 3ರಂದು ಫಲಿತಾಂಶ ಪ್ರಕಟವಾಗಲಿದೆ.
ಛತ್ತೀಸ್‌ಗಢ
ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ 30 ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ.
ಪಟಾನ್ ಕ್ಷೇತ್ರದಿಂದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಅಂಬಿಕಾಪುರದಿಂದ ಉಪಮುಖ್ಯಮಂತ್ರಿ ಟಿಎಸ್ ಸಿಂಗ್ ದೇವ್ ಅವರನ್ನು ಕಣಕ್ಕಿಳಿಸಿದೆ. ರಾಜನಂದಗಾಂವ್ ಕ್ಷೇತ್ರದಲ್ಲಿ ಬಿಜೆಪಿ ನಾಯಕ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರ ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್ ಗಿರೀಶ್ ದೇವಾಂಗನ್ ಅವರಿಗೆ ಟಿಕೆಟ್ ನೀಡಿದೆ.
छत्तीसगढ़ में होने वाले विधानसभा चुनाव, 2023 के लिए भारतीय राष्ट्रीय कांग्रेस द्वारा जारी उम्मीदवारों की पहली सूची। pic.twitter.com/0KTjSQ57iJ
— Congress (@INCIndia) October 15, 2023
ಛತ್ತೀಸ್‌ಗಢದಲ್ಲಿ ಘೋಷಿಸಲಾದ 30 ಅಭ್ಯರ್ಥಿಗಳ ಪೈಕಿ 14 ಮಂದಿ ಎಸ್‌ಟಿ ಸಮುದಾಯಕ್ಕೆ ಸೇರಿದವರು. ಅಲ್ಲದೆ ಮೊದಲ ಪಟ್ಟಿಯಂತೆ ಮೂವರು ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ.
ಬಿಜೆಪಿ ಈಗಾಗಲೇ ಎರಡು ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 85 ಜನರಿಗೆ ಟಿಕೆಟ್ ನೀಡಿದೆ.