ಮಧ್ಯಪ್ರದೇಶ, ತೆಲಂಗಾಣ ಮತ್ತು ಛತ್ತೀಸ್‌ಗಢ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

Date:

Advertisements

ಮುಂಬರುವ ಪಂಚ ರಾಜ್ಯಗಳ ಚುನಾವಣೆಯ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ(ಅ.15) ಬಿಡುಗಡೆಗೊಳಿಸಿದೆ.

ಮಧ್ಯಪ್ರದೇಶ, ತೆಲಂಗಾಣ ಮತ್ತು ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ.

ಮಧ್ಯಪ್ರದೇಶದಲ್ಲಿ 144, ಛತ್ತೀಸ್‌ಗಢದಲ್ಲಿ 30 ಮತ್ತು ತೆಲಂಗಾಣದಲ್ಲಿ 55 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಿಸಿದೆ.

Advertisements

ಮಧ್ಯಪ್ರದೇಶ
ಮಧ್ಯಪ್ರದೇಶದಲ್ಲಿ ಘೋಷಿಸಿರುವ 144 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಪ್ರಸ್ತುತ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಕಾಂಗ್ರೆಸ್‌ ಮುಖಂಡ, ಜನಪ್ರಿಯ ನಟ ವಿಕ್ರಮ್ ಮಸ್ತಲ್ ಅವರನ್ನು ಬುಧ್ನಿ ವಿಧಾನಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸಿದೆ.

MP Candidates

2008ರ ದೂರದರ್ಶನ ಕಾರ್ಯಕ್ರಮ ‘ರಾಮಾಯಣ’ದಲ್ಲಿ ಹನುಮಾನ್ ಪಾತ್ರಕ್ಕಾಗಿ ಮಸ್ತಲ್ ಹೆಚ್ಚು ಹೆಸರುವಾಸಿಯಾಗಿದ್ದಾರೆ.

ಉಳಿದಂತೆ ಪ್ರಮುಖರಲ್ಲಿ ಚಿಂದ್ವಾರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್, ರಘೀಗತ್ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರ ಪುತ್ರ ಜೈವರ್ಧನ್ ಸಿಂಗ್ ಅವರನ್ನು ಕಣಕ್ಕಿಳಿಸಿದೆ.

ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ 30 ಎಸ್‌ಟಿ ಸಮುದಾಯ ಕ್ಷೇತ್ರಗಳಲ್ಲಿ ಮತ್ತು 22 ಎಸ್‌ಸಿ ಸಮುದಾಯದ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಮಧ್ಯಪ್ರದೇಶಲ್ಲಿ ಒಟ್ಟು 230 ವಿಧಾನಸಭಾ ಕ್ಷೇತ್ರಗಳಿದ್ದು, ಮೊದಲ ಪಟ್ಟಿಯಲ್ಲಿ 144 ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ನ.17ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.

ತೆಲಂಗಾಣ
119 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ತೆಲಂಗಾಣದಲ್ಲಿ ಕಾಂಗ್ರೆಸ್ 55 ಅಭ್ಯರ್ಥಿಗಳ ಹೆಸರನ್ನು ಮೊದಲ ಪಟ್ಟಿಯಲ್ಲಿ ಪ್ರಕಟಿಸಿದೆ. ಅನುಮುಲ ರೇವಂತ್ ರೆಡ್ಡಿ ಕೊಡಂಗಲ್ ನಿಂದ ಕಣಕ್ಕಿಳಿದಿದ್ದರೆ, ಉತ್ತಮ್ ಕುಮಾರ್ ರೆಡ್ಡಿ ಹುಜೂರ್‌ ನಗರದಿಂದ ಸ್ಪರ್ಧಿಸುತ್ತಿದ್ದಾರೆ. ಮೈನಂಪಳ್ಳಿ ರೋಹಿತ್ ರಾವ್ ಮೇದಕ್‌ನಿಂದ ಮತ್ತು ಮೈನಂಪಲ್ಲಿ ಹನುಮಂತ್ ರಾವ್ ಮಲ್ಕಾಜ್‌ಗಿರಿಯಿಂದ ಸ್ಪರ್ಧಿಸಲಿದ್ದಾರೆ.

ತೆಲಂಗಾಣದಲ್ಲಿ ನವೆಂಬರ್ 30ರಂದು ಚುನಾವಣೆ ನಡೆಯಲಿದ್ದು, ಡಿ. 3ರಂದು ಫಲಿತಾಂಶ ಪ್ರಕಟವಾಗಲಿದೆ.

ಛತ್ತೀಸ್‌ಗಢ

ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್​ ತನ್ನ ಮೊದಲ ಪಟ್ಟಿಯಲ್ಲಿ 30 ಅಭ್ಯರ್ಥಿಗಳಿಗೆ ಟಿಕೆಟ್​ ನೀಡಿದೆ.

ಪಟಾನ್‌ ಕ್ಷೇತ್ರದಿಂದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಅಂಬಿಕಾಪುರದಿಂದ ಉಪಮುಖ್ಯಮಂತ್ರಿ ಟಿಎಸ್ ಸಿಂಗ್ ದೇವ್ ಅವರನ್ನು ಕಣಕ್ಕಿಳಿಸಿದೆ. ರಾಜನಂದಗಾಂವ್‌ ಕ್ಷೇತ್ರದಲ್ಲಿ ಬಿಜೆಪಿ ನಾಯಕ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರ ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್​ ಗಿರೀಶ್ ದೇವಾಂಗನ್ ಅವರಿಗೆ ಟಿಕೆಟ್​​ ನೀಡಿದೆ.

ಛತ್ತೀಸ್‌ಗಢದಲ್ಲಿ ಘೋಷಿಸಲಾದ 30 ಅಭ್ಯರ್ಥಿಗಳ ಪೈಕಿ 14 ಮಂದಿ ಎಸ್‌ಟಿ ಸಮುದಾಯಕ್ಕೆ ಸೇರಿದವರು. ಅಲ್ಲದೆ ಮೊದಲ ಪಟ್ಟಿಯಂತೆ ಮೂವರು ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ.

ಬಿಜೆಪಿ ಈಗಾಗಲೇ ಎರಡು ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 85 ಜನರಿಗೆ ಟಿಕೆಟ್​ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X