ರೌಡಿ ಶೀಟರ್‌ ಫಯಾಜ್‌ ಜೊತೆ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಗುಪ್ತ ಸಭೆ

Date:

  • ಫಯಾಜ್‌ ಚೌಟಿ ವಿರುದ್ಧ 17 ಪ್ರಕರಣಗಳು
  • ಚೌಟಿಯ 50 ಮಂದಿ ಬೆಂಬಲಿಗರೊಂದಿಗೆ ಸಭೆ

ವಿಧಾನಸಭಾ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ರೌಡಿ ಶೀಟರ್‌ ಫಯಾಜ್‌ ಚೌಟಿ ಮತ್ತು ಆತನ ಬೆಂಬಲಿಗರ ಜೊತೆಗೆ ಗುಪ್ತ ಸಭೆ ನಡೆಸಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿಹಾಡುತ್ತಿದೆ.

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆ ಅನೇಕ ಕುತೂಹಲಕಾರಿ ಬೆಳವಣಿಗೆಗಳನ್ನು ನೋಡುತ್ತಿದೆ. ಇದೀಗ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಮ್ಮ ಶಿರಸಿ ಕ್ಷೇತ್ರದಲ್ಲಿ ರೌಡಿಶೀಟರ್‌ ಜೊತೆಗೆ ಸಭೆ ನಡೆಸಿರುವ ಘಟನೆ ಜರುಗಿದೆ.

ಈ ಸುದ್ದಿ ಓದಿದ್ದೀರಾ? ಜನತೆಗೆ ಇನ್ನೂ ಬುದ್ದಿ ಬಂದಿಲ್ಲ, ಹಣ ಪಡೆದು ಮತ ಹಾಕುವ ಚಾಳಿ ಮುಂದುವರೆಸಿದ್ದಾರೆ: ಹೈಕೋರ್ಟ್‌

ಫಯಾಜ್‌ ಚೌಟಿ ಅಪಹರಣ, ಹಣ ವಂಚನೆ ಮತ್ತು ದರೋಡೆ ಸೇರಿದಂತೆ 17ಕ್ಕೂ ಹೆಚ್ಚು ಪ್ರಕರಣ ಎದುರಿಸುತ್ತಿದ್ದಾನೆ. ಆತ ಮತ್ತು ಆತನ 50 ಮಂದಿ ಬೆಂಬಲಿಗರೊಂದಿಗೆ ಕಾಗೇರಿ ತಮ್ಮ ಕಚೇರಿಯಲ್ಲಿ ಮಾತುಕತೆ ನಡೆಸಿದ್ದಾರೆ.

ವಿಧಾನಸಭಾ ಚುನಾವಣೆಯ ಕುರಿತು ಫಯಾಜ್‌ ಚೌಟಿ ಸಭೆ ನಡೆಸಿರುವ ಫೋಟೋ ಇದೀಗ ವೈರಲ್ ಆಗಿದೆ. ಫೋಟೋದಲ್ಲಿ, ಚೌಟಿ ವಿಧಾನಸಭಾ ಅಧ್ಯಕ್ಷರ ಪಕ್ಕದಲ್ಲೇ ಕುಳಿತಿದ್ದಾನೆ.

ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರೌಡಿಶೀಟರ್ ಮತ್ತು ವಿಧಾನಸಭಾ ಅಧ್ಯಕ್ಷರ ನಡುವಿನ ಸಭೆ ನಾನಾ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಕಾಗೇರಿ ಅವರು ಶಿರಸಿಯಲ್ಲಿ ಬಿಜೆಪಿ ಟಿಕೆಟ್‌ನಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ಚುನಾವಣೆ ಎದುರಿಸಲು ಬಿಜೆಪಿ ರೌಡಿಗಳ ಮೊರೆ ಹೋಗುತ್ತಿದೆ. ರೌಡಿ ಶೀಟರ್ ಫೈಟರ್ ರವಿಗೆ ಮೋದಿ ಕೈಮುಗಿಯುತ್ತಾರೆ, ರೌಡಿ ಫಯಾಜ್‌ನೊಂದಿಗೆ ಕಾಗೇರಿ ಗುಪ್ತ ಸಭೆ ನಡೆಸುತ್ತಾರೆ” ಎಂದು ವ್ಯಂಗ್ಯವಾಡಿದೆ.

“ರೌಡಿಗಳನ್ನು ಬಿಜೆಪಿಯ ಸೋಕಾಲ್ಡ್ ಸಜ್ಜನರು ಅಪ್ಪಿ ಮುದ್ದಾಡುತ್ತಿರುವುದೇಕೆ? ಬಿಜೆಪಿ ರೌಡಿ ಮೋರ್ಚಕ್ಕೆ ಸೇರಿಸಿಕೊಳ್ಳಲು ನಡೆಸಿದ ಓಲೈಕೆ ಸಭೆಯೇ?” ಎಂದು ಪ್ರಶ್ನಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈತ್ರಿ ಕಗ್ಗಂಟು | ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ಸಿಗುವುದೇ ಡೌಟು!

ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡಿವೆ. ರಾಜ್ಯದಲ್ಲಿ...

ಕಲಬುರಗಿ | ಕೆಇಎ ಪರೀಕ್ಷಾ ಅಕ್ರಮ ಪ್ರಕರಣ; ಇಬ್ಬರು ಪ್ರಾಂಶುಪಾಲರ ಬಂಧನ

ಕಳೆದ ಅಕ್ಟೋಬರ್‌ 28 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ...

ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಸ್ಥಾಪನೆ: ಸಿದ್ದರಾಮಯ್ಯ ಭರವಸೆ

ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಹೇಳಿಕೆ ಸ್ಥಳದ ಅಭಾವವಿರುವ...

ಗುತ್ತಿಗೆದಾರರ ಬಾಕಿ ಹಣ ಪಾವತಿ ವಿಚಾರ: ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ಕಿಡಿ

'ಇನ್ನೆಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು?' ಹೈಕೋರ್ಟ್‌ ಕಿಡಿ ಬಾಕಿ ಪಾವತಿಯಲ್ಲೂ...