ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಹೈಕೋರ್ಟ್‌ನಲ್ಲೇ ಇತ್ಯರ್ಥಪಡಿಸಿಕೊಳ್ಳಲು ಸಿಬಿಐಗೆ ಸುಪ್ರೀಂ ಸೂಚನೆ

Date:

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಹೈಕೋರ್ಟ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ.

- Advertisement -

ಇತ್ತೀಚೆಗೆ, ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣವನ್ನು ತನಿಖೆ ನಡೆಸದಂತೆ ಸಿಬಿಐಗೆ ಹೈಕೋರ್ಟ್‌ ವಿಭಾಗೀಯ ಪೀಠ ತಡೆ ನೀಡಿತ್ತು. ಹೈಕೋರ್ಟ್‌ ತಡೆಯಾಜ್ಞೆಯನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಶುಕ್ರವಾರ ಮೇಲ್ಮನವಿಯ ವಿಚಾರಣೆ ನಡೆಸಿರವು ಸುಪ್ರೀಂ ಕೋರ್ಟ್‌, ಪ್ರಕರಣವನ್ನು ಹೈಕೋರ್ಟ್‌ನಲ್ಲೇ ಇತ್ಯರ್ಥಪಡಿಸಿಕೊಳ್ಳುವಂತೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

2017ರಲ್ಲಿ ಡಿಕೆ ಶಿವಕುಮಾರ್ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಇಲಾಖೆ ನೀಡಿದ ವರದಿ ಆಧರಿಸಿ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು. ಆ ಬಳಿಕ ಬಿಎಸ್‌ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು.

ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿದ್ದನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್​ ವಿಭಾಗೀಯ ಪೀಠ, ಸಿಬಿಐ ತನಿಖೆಗೆ ತಡೆ ನೀಡಿತ್ತು.

ಹೈಕೋರ್ಟ್‌ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದ ಸಿಬಿಐ, ತಡೆಯನ್ನು ತೆರವುಗೊಳಿಸುವಂತೆ ಮನವಿ ಮಾಡಿತ್ತು. ಆದರೆ, ಪ್ರಕರಣವನ್ನು ಹೈಕೋರ್ಟ್‌ನಲ್ಲೇ ಇತ್ಯರ್ಥ ಮಾಡಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದೆ. ಪರಿಣಾಮ, ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು...

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ...

‘ಮತದಾನದ ಹಕ್ಕು ಕಸಿಯಲು ಯಾರಿಗೂ ಅಧಿಕಾರವಿಲ್ಲ’: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

"ಈ ದೇಶದಲ್ಲಿ ಹುಟ್ಟಿರುವ ಯಾವುದೇ ನಾಗರಿಕನ ಮತದಾನದ ಹಕ್ಕನ್ನು ಕಸಿಯಲು ಯಾರಿಗೂ...