73 ಕೈಗಾರಿಕಾ ಯೋಜನೆಗಳಿಗೆ ಅಸ್ತು, 14,497 ಉದ್ಯೋಗ ಸೃಷ್ಟಿ: ಎಂ ಬಿ ಪಾಟೀಲ

Date:

ರಾಜ್ಯದಲ್ಲಿ ₹3,935 ಕೋಟಿಗೂ ಹೆಚ್ಚಿನ ಹೂಡಿಕೆಯಾಗಲಿರುವ ಒಟ್ಟು 73 ಯೋಜನಾ ಪ್ರಸ್ತಾವನೆಗಳಿಗೆ ಶುಕ್ರವಾರ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇದರಿಂದ 14,497 ಉದ್ಯೋಗಾವಕಾಶ ಸೃಷ್ಟಿಯಾಗಲಿವೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

- Advertisement -

ತಮ್ಮ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯ ಬಳಿಕ ಮಾತನಾಡಿದ ಅವರು, “ಅನುಮೋದನೆ ನೀಡಿರುವ ಯೋಜನೆಗಳ ಪೈಕಿ 10 ಯೋಜನೆಗಳಲ್ಲಿ ತಲಾ 50 ಕೋಟಿ ರೂ.ಗೂ ಹೆಚ್ಚು ಹೂಡಿಕೆ ಆಗಲಿದೆ. ಈ ಯೋಜನೆಗಳಲ್ಲಿ ಇಟಿಎಲ್ ಸೆಕ್ಯೂರ್ ಸ್ಪೇಸ್, ದಶ್ ಪಿ.ವಿ.ಟೆಕ್ನಾಲಜೀಸ್, ಮೈಲಾರ್ ಇನ್ಫ್ರಾ, ಸ್ಯಾಂಗೋ ಆಟೋಮೋಟೀವ್ ಪಾರ್ಟ್ಸ್, ವೇನಾಸ್ ಲ್ಯಾಬ್ಸ್, ಸಿಂಬಯೋ ಜನರಿಕ್ಸ್ ಇಂಡಿಯಾ, ಎಂಎಎಫ್ ಕ್ಲಾತಿಂಗ್, ಎಸ್ಎಎ ಪ್ರಾಕ್ಟ್ಸ್, ನಿಫ್ಕೋ ಸೌತ್ ಇಂಡಿಯಾ ಮ್ಯಾನುಫ್ಯಾಕ್ಚರಿಂಗ್ ಮತ್ತು ರೆನ್ಸ್ ಬಯೋಟೆಕ್ ಕಂಪನಿಗಳು ಸೇರಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಈ ಕಂಪನಿಗಳು ದೇವನಹಳ್ಳಿ, ಸಿರಾ ಕೈಗಾರಿಕಾ ಪ್ರದೇಶ, ಹೂವಿನಹಡಗಲಿ, ರಾಮನಗರ, ಕಡೇಚೂರು, ಚಾಮರಾಜನಗರ, ಗೌರಿಬಿದನೂರು ಮತ್ತು ತುಮಕೂರಿನ ವಸಂತ ನರಸಾಪುರಗಳಲ್ಲಿ ಹೂಡಿಕೆ ಮಾಡಲಿದ್ದು, ಒಟ್ಟು 9,200 ಉದ್ಯೋಗಗಳನ್ನು ಸೃಷ್ಟಿಸಲಿವೆ. ಮೇಲ್ಕಂಡ ಉದ್ದಿಮೆಗಳು ಕನಿಷ್ಠ 96 ಕೋಟಿ ರೂ.ಗಳಿಂದ ಹಿಡಿದು ಗರಿಷ್ಠ 490.50 ಕೋಟಿ ರೂ.ವರೆಗೂ ಬಂಡವಾಳ ತೊಡಗಿಸಲಿವೆ” ಎಂದು ಅವರು ಮಾಹಿತಿ ನೀಡಿದ್ದಾರೆ.

“ಇದಲ್ಲದೆ, ಕನಿಷ್ಠ 15 ಕೋಟಿ ರೂ.ಗಳಿಂದ ಹಿಡಿದು ಗರಿಷ್ಠ 50 ಕೋಟಿ ರೂ.ವರೆಗೂ ಹೂಡಿಕೆ ಮಾಡುವ ಪ್ರಸ್ತಾವನೆ ಸಲ್ಲಿಸಿದ್ದ 59 ಹೊಸ ಯೋಜನೆಗಳಿಗೂ ಒಪ್ಪಿಗೆ ನೀಡಲಾಗಿದೆ. ಇದರಿಂದ 5,297 ಮಂದಿಗೆ ಉದ್ಯೋಗ ಸಿಗಲಿದೆ. ಜೊತೆಗೆ, ಹೆಚ್ಚುವರಿ ಬಂಡವಾಳ ಹೂಡಿಕೆಯ 5 ಯೋಜನೆಗಳಿಗೂ ಅನುಮೋದನೆ ಕೊಟ್ಟಿದ್ದು, ಇದರಿಂದ 87.67 ಕೋಟಿ ರೂ. ಬಂಡವಾಳ ರಾಜ್ಯಕ್ಕೆ ಹರಿದು ಬರಲಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನ್ನಪೂರ್ಣಿ ‘ನಿಷೇಧ’- ಧರ್ಮಗಳ ನಡುವೆ ಬೆಂಕಿ ಇಟ್ಟು ಬೇಳೆ ಬೇಯಿಸುವ ಕೃತ್ಯ

“ರಾಜ್ಯ ಸರ್ಕಾರವು ಉದ್ಯಮ ಸ್ನೇಹಿಯಾಗಿದ್ದು, ಹೂಡಿಕೆದಾರರಿಗೆ ಸುಗಮ ಒಪ್ಪಿಗೆ ಸಿಗುವಂತೆ ನಿಜವಾದ ಅರ್ಥದಲ್ಲಿ ಏಕಗವಾಕ್ಷಿ ಪದ್ಧತಿಯನ್ನು ಜಾರಿಗೆ ತಂದಿದೆ. ಹೂಡಿಕೆದಾರರನ್ನು ಉತ್ತೇಜಿಸವಂತಹ ಹಲವು ಅಂಶಗಳನ್ನು 2020-25ರ ಕೈಗಾರಿಕಾ ನೀತಿಯಲ್ಲಿ ಅಳವಡಿಸಿಕೊಂಡಿದ್ದು, ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗೆ ಆದ್ಯತೆ ಕೊಡಲಾಗಿದೆ. ಇದರಲ್ಲಿ ಪ್ರಾದೇಶಿಕ ಅಸಮಾನತೆ ನಿವಾರಣೆಗೂ ಗಮನ ಹರಿಸಲಾಗಿದ್ದು, ರಾಜ್ಯದ ಎಲ್ಲ ಭಾಗಗಳಲ್ಲೂ ಹೂಡಿಕೆ ಆಗುವಂತೆ ನೋಡಿಕೊಳ್ಳಲಾಗುತ್ತಿದೆ” ಎಂದು ಪಾಟೀಲ ವಿವರಿಸಿದ್ದಾರೆ.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ವ್ಯವಸ್ಥಾಪಕ ನಿರ್ದೇಶಕ ಡಾ.ಮಹೇಶ್, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...