ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಅರ್ಜಿ ವಜಾ ಮಾಡಿದ ಹೈಕೋರ್ಟ್

Date:

  • ಹಲವು ದಿನಗಳಿಂದ ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿತ್ತು
  • ಹೈಕೋರ್ಟ್‌ ನ್ಯಾಯಮೂರ್ತಿ ಕೆ. ನಟರಾಜನ್‌ ಪೀಠದಿಂದ ಅರ್ಜಿ ವಿಚಾರಣೆ

ಆದಾಯಕ್ಕಿಂತಲೂ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರ ಮೇಲೆ ಸಿಬಿಐ ಅಧಿಕಾರಿಗಳು ತನಿಖೆ ನಡೆಸಲು ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕೃರಿಸಿದೆ.

- Advertisement -

ಆದಾಯಕ್ಕಿಂತಲೂ ಹೆಚ್ಚಿನ ಆಸ್ತಿಗಳಿಕೆ ಆರೋಪದ ಮೇಲೆ ಸಿಬಿಐ ತನಿಖೆಗೆ ಮುಂದಾಗಿತ್ತು. ತನಿಖೆಗೆ ತಡೆ ನೀಡುವಂತೆ ಕೋರಿ ಡಿ.ಕೆ ಶಿವಕುಮಾರ್‌ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್‌, ತನ್ನ ತೀರ್ಪುನ್ನು ಕಾಯ್ದಿರಿಸಿತ್ತು. ಕಾಯ್ದಿರಿಸಿದ ತೀರ್ಪುನ್ನು ಇಂದು (ಗುರುವಾರ) ಹೊರಡಿಸಿದ್ದು, ಡಿ.ಕೆ ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಈ ಹಿಂದೆ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಕೆ. ನಟರಾಜನ್‌ ಅವರಿದ್ದ ಏಕಸದಸ್ಯ ಪೀಠವು ಡಿ.ಕೆ.ಶಿವಕುಮಾರ್ ಮತ್ತು ಸಿಬಿಐ ವಕೀಲರ ವಾದವನ್ನು ಆಲಿಸಿ, ತನ್ನ ಆದೇಶ ಕಾಯ್ದಿರಿಸಿತ್ತು. ಜೊತೆಗೆ ಸಿಬಿಐ ತನಿಖೆಗೆ ಇದ್ದ ತಡೆಯಾಜ್ಞೆಯನ್ನು ವಿಸ್ತರಿಸಿತ್ತು.

ಈ ಸುದ್ದಿ ಓದಿದ್ದೀರಾ? : ಚುನಾವಣೆ 2023 | ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಸಮಿತಿ

ನ್ಯಾಯಾಧಿಶರು ಈ ಮೊದಲು ಫೆ. 24ರವರೆಗೂ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿತ್ತು. ಬಳಿಕ ಮಾ.31, ಏ.6, ಏ.13 ಹಾಗೂ ಏ.17ರ ವರೆಗೆ ಮಧ್ಯಂತರ ತಡೆ ನೀಡಿತ್ತು. ಪ್ರಸ್ತುತ ವಿಚಾರಣೆ ಅಂತ್ಯಗೊಂಡಿದ್ದರಿಂದ ತನ್ನ ತೀರ್ಪುನ್ನು ಕಾಯ್ದಿರಿಸಿತ್ತು. ಇದೀಗ, ಅರ್ಜಿಯನ್ನು ರದ್ದುಗೊಳಿಸಿದ್ದಾರೆ.

ಅರ್ಜಿ ವಜಾಗೊಂಡಿರುವುದರಿಂದ ಮತ್ತು ಡಿ.ಕೆ ಶಿವಕುಮಾರ್ ವಿರುದ್ಧ ಹಲವು ಪ್ರಕರಣಗಳು ಬಾಕಿ ಇರುವುದರಿಂದ ಅವರ ನಾಮಪತ್ರ ತಿರಸ್ಕೃತವಾಗುವ ಆತಂಕ ಎದುರಾಗಿದೆ. ಹೀಗಾಗಿ, ಡಿ.ಕೆ ಶಿವಕುಮಾರ್ ಸಹೋದರ ಡಿ.ಕೆ ಸುರೇಶ್‌ ಕೂಡ ಇಂದು ಕನಕಪುರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2027ರ ಚುನಾವಣೆ | ಬಿಜೆಪಿಯ ಲೂಟಿ ವಿರುದ್ಧ ಕಾಂಗ್ರೆಸ್ ಸಮರ: ‘ಸೇವ್ ಗೋವಾ’ ಅಭಿಯಾನದಲ್ಲಿ ರಾಹುಲ್ ಸಾಥ್

2027ರ ಗೋವಾ ವಿಧಾನಸಭೆ ಚುನಾವಣೆಗೆ ಭರ್ಜರಿ ತಳಹದಿ ನಿರ್ಮಿಸಲು ಮುಂದಾಗಿರುವ ಕಾಂಗ್ರೆಸ್,...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್ ಸಾಹೇಬ್’

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ...

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...