ಕನಿಷ್ಠ 14 ಕೋಟಿ ಜನರು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಪ್ರಯೋಜನದಿಂದ ವಂಚಿತರು: ಕಾಂಗ್ರೆಸ್

Date:

Advertisements

ಕನಿಷ್ಠ 14 ಕೋಟಿ ಜನರು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಪ್ರಯೋಜನದಿಂದ ವಂಚಿತರಾಗಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಹಾಗೆಯೇ ಮತ್ತೆ ಜನಗಣತಿಯನ್ನು ಯಾವಾಗ ನಡೆಸಲಾಗುತ್ತದೆ ಎಂದು ಪ್ರಧಾನಿಯನ್ನು ಪ್ರಶ್ನಿಸಿದೆ.

ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಆರಂಭಿಸಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಮತ್ತು ಜನಗಣತಿ ಕುರಿತಾಗಿ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ನೂತನ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.


“ಸಾಮಾಜಿಕ ಆರ್ಥಿಕ ಅಭಿವೃದ್ಧಿಗೆ ಅಗತ್ಯವಾದ ಸಮಗ್ರ ಜನಗಣತಿಯನ್ನು ಕೇಂದ್ರ ಸರ್ಕಾರವು ಪ್ರತಿ ಹತ್ತು ವರ್ಷಗಳಿಗೊಮ್ಮೆ ನಡೆಸುತ್ತದೆ. ನಮ್ಮ ದೇಶದಲ್ಲಿ ಕೊನೆಯದಾಗಿ 2021ರಲ್ಲಿ ಜನಗಣತಿಯನ್ನು ಪೂರ್ಣಗೊಳಿಸಬೇಕಿತ್ತು. ಆದರೆ ಪ್ರಧಾನಿ ಮೋದಿಯವರು ಜನಗಣತಿಯನ್ನು ಪೂರ್ಣಗೊಳಿಸಿಲ್ಲ” ಎಂದು ಕಾಂಗ್ರೆಸ್‌ ಮುಖಂಡ ಹೇಳಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಉದ್ದೇಶಪೂರ್ವಕವಾಗಿ ಬಿಹಾರದ ಜನಗಣತಿಯಲ್ಲಿ ಮುಸ್ಲಿಂ, ಯಾದವರ ಸಂಖ್ಯೆ ಹೆಚ್ಚಳ: ಅಮಿತ್ ಶಾ

“2021ರ ಜನಗಣತಿಯನ್ನು ನಡೆಸದಿರುವ ಕಾರಣದಿಂದಾಗಿ ಕನಿಷ್ಠ 14 ಕೋಟಿ ಭಾರತೀಯರು 2013ರ ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ ಅಡಿಯಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಎಂದು ಮರು ನಾಮಕರಣಗೊಂಡಿರುವ ಪ್ರಯೋಜನಗಳಿಂದ ವಂಚಿತರಾಗುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ಮತ್ತೆ ಜನಗಣತಿಯನ್ನು ಯಾವಾಗ ನಡೆಸಲಾಗುವುದು ಎಂದು ಪ್ರಧಾನಿ ಶೀಘ್ರದಲ್ಲೇ ದೇಶಕ್ಕೆ ತಿಳಿಸಬೇಕಾಗಿದೆ. ದಶವಾರ್ಷಿಕ ಜನಗಣತಿಯು 1951ರಿಂದ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಯ ಡೇಟಾವನ್ನು ಒದಗಿಸಿದೆ. ನವೀಕರಿಸಿದ ಜನಗಣತಿಯು ಒಬಿಸಿ ಎಂದು ವರ್ಗೀಕರಿಸಲಾದ ಸಮುದಾಯಗಳ ಜನಸಂಖ್ಯೆಯ ಡೇಟಾವನ್ನು ಒದಗಿಸಬೇಕು” ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ? ಜಾತಿ ಜನಗಣತಿ | ಪಕ್ಷಾತೀತವಾಗಿ ಲಿಂಗಾಯತ ಶಾಸಕರ ವಿರೋಧವಿದೆ: ಸಿ ಸಿ ಪಾಟೀಲ್

“ಇದು ನಮ್ಮ ಗಣರಾಜ್ಯದ ಸಂವಿಧಾನದಲ್ಲಿ ಪ್ರತಿಪಾದಿಸಲ್ಪಟ್ಟಿರುವ, ಪ್ರಸ್ತುತ ಮೋದಿ ಮತ್ತು ಚೀರ್‌ಲೀಡರ್‌ಗಳ ಆಕ್ರಮಣಕ್ಕೆ ಒಳಗಾಗಿರುವ ಸಾಮಾಜಿಕ ನ್ಯಾಯಕ್ಕೆ ನಿಜವಾದ ಅರ್ಥವನ್ನು ನೀಡುತ್ತದೆ” ಎಂದು ಹೇಳಿದರು.

ಕಾಂಗ್ರೆಸ್ ತನ್ನ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ರಾಷ್ಟ್ರವ್ಯಾಪಿ ಜಾತಿ ಸಮೀಕ್ಷೆ ನಡೆಸುವುದಾಗಿ ಭರವಸೆ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X