ನೀರಿನ ಬಿಕ್ಕಟ್ಟಿನ ಕುರಿತ ಚರ್ಚೆಗಾಗಿ ದೆಹಲಿ ಗವರ್ನರ್ ಸಮಯ ಕೋರಿದ ಅತಿಶಿ

Date:

ರಾಷ್ಟ್ರ ರಾಜಧಾನಿ ದೆಹಲಿ ಕುಡಿಯುವ ನೀರಿನ ಮೂಲಗಳಲ್ಲಿ ಒಂದಾದ ಮುನಕ್ ಕಾಲುವೆಗೆ ಹರಿಯಾಣ ‘ಅಸಮರ್ಪಕ’ವಾಗಿ ನೀರು ಹರಿಸುತ್ತಿದ್ದು, ದೆಹಲಿಯಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಈ ಬಗ್ಗೆ ಚರ್ಚಿಸಲು ತುರ್ತು ಸಭೆಗೆ ಸಮಯ ಕೋರಿ ದೆಹಲಿ ರಾಜ್ಯ ಜಲ ಸಚಿವೆ ಅತಿಶಿ ಅವರು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರಿಗೆ ಮನವಿ ಮಾಡಿದ್ದಾರೆ.

- Advertisement -

ನೀರಿನ ಸಮಸ್ಯೆ ಮತ್ತು ಗರ್ವರ್ನರ್‌ರಿಂದ ಸಮಯ ಕೋರಿರುವ ಬಗ್ಗೆ ಅತಿಶಿ ಟ್ವೀಟ್ ಮಾಡಿದ್ದಾರೆ. “ದೆಹಲಿಗೆ ನೀರಿನ ಪೂರೈಕೆಗಾಗಿ ಮುನಕ್ ಕಾಲುವೆಯಿಂದ ದಿನನಿತ್ಯ 1,050 ಕ್ಯೂಸೆಕ್ ನೀರನ್ನು ಪಡೆಯಬೇಕಾಗಿತ್ತು. ಆದರೆ, ಹರಿಣಾಮವು ಕಾಲುವೆಗೆ ಕೇವಲ 840 ಕ್ಯೂಸೆಕ್‌ ನೀರನ್ನು ಹರಿಸುತ್ತಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

“ಹರಿಯಾಣ ಸರ್ಕಾರವು ಮುನಕ್ ಕಾಲುವೆಗೆ ಅಸಮರ್ಪಕವಾಗಿ ನೀರು ಹರಿಸುತ್ತಿರುವ ಬಗ್ಗೆ ತಿಳಿಸಲು ತುರ್ತು ಸಭೆಗೆ ಗವರ್ನರ್‌ ಅವರಲ್ಲಿ ಸಮಯ ಕೋರಿದ್ದೇನೆ” ಎಂದಿದ್ದಾರೆ.

“ಮುನಕ್ ಕಾಲುವೆಯಿಂದ ಸಿಎಲ್‌ಸಿ ಮತ್ತು ಡಿಎಸ್‌ಬಿ ಉಪಕಾಲುವೆಗಳ ಮೂಲಕ ದೆಹಲಿಗೆ 1050 ಕ್ಯೂಸೆಕ್ ನೀರು ಬರಬೇಕಿದೆ. ಆದರೆ, ಕೇವಲ 840 ಕ್ಯೂಸೆಕ್‌ ನೀರು ದೊರೆಯುತ್ತಿದೆ. 7 ನೀರು ಸಂಸ್ಕರಣಾ ಘಟಕಗಳು ಈ ನೀರನ್ನೇ ಅವಲಂಬಿಸಿವೆ. ನೀರಿನ ಪ್ರಮಾಣ ಹೆಚ್ಚಾಗದಿದ್ದರೆ ಒಂದೆರಡು ದಿನಗಳಲ್ಲೇ ದೆಹಲಿಯಾದ್ಯಂತ ನೀರಿನ ಪರಿಸ್ಥಿತಿ ಹದಗೆಡುತ್ತದೆ” ಎಂದು ಅವರು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

 

“ಏರುತ್ತಿರುವ ತಾಪಮಾನದ ನಡುವೆ, ದೆಹಲಿಯು ನೀರಿನ ಕೊರತೆ ಎದುರಿಸುತ್ತಿದೆ. ಗವರ್ನರ್‌ ಅವರು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿದ್ದಾರೆ. ಅವರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಪರಿಹರಿಸಲು ವಿನಂತಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದ | ಚುನಾವಣಾ ಆಯೋಗಕ್ಕೆ INDIA ವಿಪಕ್ಷಗಳ ಘೇರಾವ್; ರಾಹುಲ್‌, ಪ್ರಿಯಾಂಕಾ ಸೇರಿ ಹಲವರು ವಶಕ್ಕೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಅಕ್ರಮಗಳ...

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...