ಆದಿವಾಸಿ, ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಳ: ಮೋದಿ ಸರ್ಕಾರ, ಆರ್‌ಎಸ್‌ಎಸ್‌ ವಿರುದ್ಧ ಖರ್ಗೆ ವಾಗ್ದಾಳಿ

Date:

ಇತ್ತೀಚೆಗೆ ಬಿಡುಗಡೆಯಾದ ಎನ್‌ಸಿಆರ್‌ಬಿ ವರದಿಯು ದೇಶದಲ್ಲಿ ಆದಿವಾಸಿಗಳು ಮತ್ತು ದಲಿತರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಏರಿಕೆಯಾಗಿದೆ ಎಂಬುದನ್ನು ಬಹಿರಂಗಪಡಿಸಿದೆ. ಇದೇ ವಿಚಾರವಾಗಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದು, ಆರ್‌ಎಸ್‌ಎಸ್‌-ಬಿಜೆಪಿಯನ್ನು ತರಾಟೆಗೆ ತೆದುಕೊಂಡಿದ್ದಾರೆ. ಮೋದಿ ಆಡಳಿತದಲ್ಲಿ ಬಿಜೆಪಿ-ಆರ್‌ಎಸ್‌ಎಸ್‌ ದೇಶದಲ್ಲಿ ಊಳಿಗಮಾನ್ಯ ಮನಸ್ಥಿತಿ ಬೆಳಸುತ್ತಿವೆ ಎಂದು ಆರೋಪಿಸಿದ್ದಾರೆ.

- Advertisement -

2013ರಿಂದ 2023ರವರೆಗಿನ ಎನ್‌ಸಿಆರ್‌ಬಿ ದತ್ತಾಂಶವನ್ನು ಉಲ್ಲೇಖಿಸಿರುವ ಖರ್ಗೆ, “ದಲಿತರ ಮೇಲಿನ ಅಪರಾಧಗಳು ಕಳೆದ 10 ವರ್ಷಗಳಲ್ಲಿ ಶೇ.46 ರಷ್ಟು ಹೆಚ್ಚಾಗಿದೆ. ಆದಿವಾಸಿಗಳ ಮೇಲಿನ ಅಪರಾಧಗಳ ಪ್ರಮಾಣವು ಶೇ.91 ರಷ್ಟು ಹೆಚ್ಚಾಗಿದೆ. ಅಂಚಿನಲ್ಲಿರುವ ಸಮುದಾಯಗಳ ವಿರುದ್ಧ ಹಿಂಸಾತ್ಮಕ ಮತ್ತು ತಾರತಮ್ಯದ ಕ್ರಮಗಳಲ್ಲಿ ವ್ಯಕ್ತವಾಗುವ ಊಳಿಗಮಾನ್ಯ ಮತ್ತು ಜಾತಿವಾದಿ ಮನಸ್ಥಿತಿಯನ್ನು ಬಿಜೆಪಿ ಬೆಳೆಸುತ್ತಿದೆ. ಸಮರ್ಥಿಸುತ್ತಿದೆ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ದಲಿತ ಸಮುದಾಯಕ್ಕೆ ಸೇರಿದ ಭಾರತದ ಸಿಜೆಐ ಬಿ.ಆರ್ ಗವಾಯಿ ಅವರ ಮೇಲೆ ವಕೀಲನೊಬ್ಬ ದಾಳಿ ಮಾಡಿದ್ದಾನೆ. ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲೆಯಲ್ಲಿ ದಲಿತ ವ್ಯಕ್ತಿ ಹರಿಓಂ ವಾಲ್ಮೀಕಿಯ ಹತ್ಯೆ ನಡೆದಿದೆ. ಹರಿಯಾಣದ ದಲಿತ ಐಪಿಎಸ್ ಅಧಿಕಾರಿ ಇತ್ತೀಚಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಹಲವಾರು ತಾರತಮ್ಯ ಮತ್ತು ಹಿಂಸಾಚಾರಗಳು ಜಾತಿಗ್ರಸ್ಥ ಮನಸ್ಥಿತಿಯ ಕಾರಣಕ್ಕೆ ನಡೆದಿವೆ” ಎಂದು ಖರ್ಗೆ ಹೇಳಿದ್ದಾರೆ.

“ಇವು ಪ್ರತ್ಯೇಕ ಘಟನೆಗಳಲ್ಲ. ಇದು ಆರ್‌ಎಸ್‌ಎಸ್-ಬಿಜೆಪಿಯ ಊಳಿಗಮಾನ್ಯ ಮನಸ್ಥಿತಿಯ ಅಪಾಯಕಾರಿ ಅಭಿವ್ಯಕ್ತಿ. ಸಂವಿಧಾನ, ಸಾಮಾಜಿಕ ನ್ಯಾಯ ಹಾಗೂ ಸಮಾನತೆಯ ತತ್ವಗಳ ಮೇಲಿನ ನೇರ ದಾಳಿ. ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಹಾಗೂ ಇತರ ತಳ ಸಮುದಾಯಗಳನ್ನು ದಮನಿಸುವುದೇ ಬಿಜೆಪಿಯ ಗುರಿಯಾಗಿದೆ. ಇದು, ಭಾರತದ ಪ್ರಜಾಪ್ರಭುತ್ವಕ್ಕೆ ಗಂಭೀರ ಬೆದರಿಕೆಯಾಗಿದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...