ವೈದ್ಯರ ಮೇಲೆ ಹಲ್ಲೆ | ಪ್ರಕರಣ ರದ್ದು ಕೋರಿದ್ದ ಅನಂತಕುಮಾರ್ ಹೆಗಡೆ ಅರ್ಜಿ ವಜಾ: ಹೈಕೋರ್ಟ್

Date:

ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕೇಂದ್ರದ ಮಾಜಿ ಸಚಿವ, ಬಿಜೆಪಿ ಮುಖಂಡ ಅನಂತಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲಾಗಿದೆ. ಆ ಪ್ರಕರಣವನ್ನು ರದ್ದು ಕೋರಿ ಅನಂತಕುಮಾರ್ ಹೆಗಡೆ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ.

- Advertisement -

2017ರ ಜನವರಿ 2ರಂದು ಅನಂತ್‌ ಕುಮಾರ್ ಹೆಗಡೆ ಅವರು ತಮ್ಮ ತಾಯಿಯನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಟಿಎಸ್‌ಎಸ್‌ಎಸ್‌ ಆಸ್ಪತ್ರೆಗೆ ಕರೆದೊಯ್ದಿದ್ದರು. ಈ ವೇಳೆ, ಅನಂತ ಕುಮಾರ್ ಹೆಗಡೆ ಮತ್ತು ಅವರ ಸಹೋದರ ಈಶ್ವರ್ ಎಸಳೆ ಅವರು ಆಸ್ಪತ್ರೆಯ ವೈದ್ಯ ಡಾ. ಮಧುಕೇಶ್ವರ್ ಮೇಲೆ ಹಲ್ಲೆ ನಡೆಸಿದ್ದರು. ಅಲ್ಲದೆ, ಆಸ್ಪತ್ರೆ ಸಿಬ್ಬಂದಿಗಳಾದ ಬಾಲಚಂದ್ರ ಭಟ್ಟ, ರಾಹುಲ್ ಮಾಶಲೇಕರ್ ಅವರ ಮೇಲೂ ಹಲ್ಲೆಗೈದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಡಾ. ಮಧುಕೇಶ್ವರ್ ಅವರು ಅನಂತ್ ಕುಮಾರ್ ಹೆಗಡೆ ಮತ್ತು ಈಶ್ವರ್ ವಿರುದ್ಧ ದೂರು ದಾಖಲಿಸಿದ್ದರು. ಜನವರಿ 3ರಂದು ಆಸ್ಪತ್ರೆಯ ಸಿಸಿಟಿವಿ ವಿಡಿಯೊ ತುಣುಕುಗಳನ್ನು ಪರಿಶೀಲಿಸಿದ್ದ, ಶಿರಸಿ ನ್ಯೂ ಮಾರ್ಕೆಟ್ ಪೊಲೀಸ್‌ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದರು. ಕರ್ನಾಟಕ ವೈದ್ಯೋಪಚಾರ ಸಿಬ್ಬಂದಿಯ ಮೇಲೆ ಹಿಂಸಾಚಾರ ಹಾಗೂ ವೈದ್ಯೋಪಚಾರ ಸಂಸ್ಥೆಗಳ ಆಸ್ತಿಗೆ ಹಾನಿ ನಿಷೇಧ ಕಾಯ್ದೆ ಸೆಕ್ಷನ್ 4 ಮತ್ತು ಐಪಿಸಿ ಸೆಕ್ಷನ್‌ 506, 341, 34, 323 ಅಡಿ ಎಫ್ಐಆರ್ ದಾಖಲಿಸಿದ್ದರು.

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡಸಿದ್ದ ಹೈಕೋರ್ಟ್‌, 2017ರ ಸೆಪ್ಟೆಂಬರ್ 20ರಂದು ಪ್ರಕರಣದ ತನಿಖೆಗೆ ತಡೆ ನೀಡಿ ಮಧ್ಯಂತರ ಆದೇಶ ನೀಡಿತ್ತು. ಬಳಿಕ, ಹಲವು ಬಾರಿ ತಡೆಯಾಜ್ಞೆಯನ್ನು ವಿಸ್ತರಿಸಲಾಗಿತ್ತು.

ಈ ಲೇಖನ ಓದಿದ್ದೀರಾ?: RSS- ದೇಶಭಕ್ತರ ಸಂಘಟನೆಯೇ! ಯಶವಂತ್ ಶಿಂದೆ ಅಫಿಡವಿಟ್ ಹೇಳುತ್ತಿರುವುದೇನು?

ಆದರೆ. ಇದೇ ವರ್ಷದ ಆಗಸ್ಟ್‌ ನಡೆದಿದ್ದ ವಿಚಾರಣೆ ವೇಳೆ, ಅನಂತ್‌ ಕುಮಾರ್ ಹೆಗಡೆ ಪರವಾಗಿ ನ್ಯಾಯಾಲಯಕ್ಕೆ ಯಾರೂ ಹಾಜರಾಗಿರಲಿಲ್ಲ. ಹೀಗಾಗಿ, ‘ವಿಚಾರಣೆಯ ಪ್ರಕ್ರಿಯೆಗಳಲ್ಲಿ ಶ್ರದ್ಧೆಯ ಕೊರತೆ ಇದೆ’ ಎಂದಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠವು ಪ್ರಚಾರಣೆಗೆ ಹಾಜರಾಗಲು ಕೊನೆಯ ಬಾರಿಯ ಅವಕಾಶ ನೀಡಿತ್ತು.

ಆದಾಗ್ಯೂ, ಈವರೆಗೆ ಅನಂತ್‌ ಕುಮಾರ್ ಹೆಗಡೆ ಅವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಇಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್, “ಯಾರೂ ಹಾಜರಾಗಿಲ್ಲ ಎಂದ ಮೇಲೆ ನಾನು ಅರ್ಜಿಯನ್ನು ವಜಾಗೊಳಿಸುತ್ತೇನೆ” ಎಂದು ಹೇಳಿದ್ದಾರೆ. ಹೆಗಡೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಇದೀಗ, ಪ್ರಕರಣವು ಪೊಲೀಸ್‌ ತನಿಖೆಗೆ ಮುಕ್ತವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...