ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆಯಲು ನಿರ್ಧರಿಸಿದೆ. ಈ ನಿರ್ಧಾರವನ್ನು ಖಂಡಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆಳುತ್ತಿದ್ದ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕಪ್ಪು ಬಟ್ಟೆ ಪ್ರದರ್ಶಿಸಿದ್ದಾರೆ. ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಭಾನುವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಗೆ ಭೇಟಿ ನೀಡಿದ್ದರು. ಬಿಜೆಪಿ ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಡನೆಸಿದ್ದಾರೆ. ಅವರೆಲ್ಲರಲ್ಲೂ ವಶಕ್ಕೆ ಪಡೆದಿರುವ ಪೊಲೀಸರು ಹಳೇ ಸಿಎಆರ್ ಮೈದಾನಕ್ಕೆ ಕರೆದೊಯ್ದಿದ್ದಾರೆ.
ಪೊಲೀಸ್ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಕಾರಣಕ್ಕೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ, ಎಲ್ಲರನ್ನೂ ಬಿಡುಗಡೆ ಮಾಡಿದ್ದಾರೆ.
ಬಳಿಕ, ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಒಳಗೊಂಡಂತೆ ಬಿಜೆಪಿ ಕಾರ್ಯಕರ್ತರು ಹುಬ್ಬಳ್ಳಿಯ ಅಕ್ಷಯ ಪಾರ್ಕ್ ವೃತ್ತದಲ್ಲಿ ಧರಣಿ ನಡೆಸಿದ್ದಾರೆ. ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂಪಡೆಯುವ ನಿರ್ಧಾರ ಸರ್ಕಾರ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.