ಅಕಾಡೆಮಿ, ಪ್ರಾಧಿಕಾರದಂತಹ ಸಾಂಸ್ಕೃತಿಕ ಸಂಸ್ಥೆಗಳಿಗೆ ಸ್ವಾಯತ್ತತೆ ಅಗತ್ಯ: ಬರಗೂರು ರಾಮಚಂದ್ರಪ್ಪ

Date:

Advertisements

ಇತ್ತೀಚೆಗೆ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಅಕಾಡೆಮಿ, ಪ್ರಾಧಿಕಾರಗಳ ಅಧ್ಯಕ್ಷರ ಸಭೆ ನಡೆಸಿರುವುದಕ್ಕೆ ಆಕ್ಷೇಪ ಎತ್ತಿರುವ ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ, “ಅಕಾಡೆಮಿ, ಪ್ರಾಧಿಕಾರದಂತಹ ಸಾಂಸ್ಕೃತಿಕ ಸಂಸ್ಥೆಗಳಿಗೆ ಸ್ವಾಯತ್ತತೆ ಅಗತ್ಯವಿದೆ” ಎಂದು ತಿಳಿಸಿದ್ದಾರೆ.

ಈ ಬೆಳವಣಿಗೆ ಬಗ್ಗೆ ಮಾಧ್ಯಮ ಪ್ರಕಟಣೆಯ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಬರಗೂರು, “ಅಕಾಡೆಮಿ ಮತ್ತು ಪ್ರಾಧಿಕಾರಗಳ ಸ್ವಾಯತ್ತತೆಯ ವಿಷಯ ಈಗ ಮುನ್ನಲೆಗೆ ಬಂದಿದೆ. ಈ ಸಂಸ್ಥೆಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ಸರ್ಕಾರವೇ ನಾಮ ನಿರ್ದೇಶನ ಮಾಡುತ್ತದೆ. ಆದರೆ ಈ ನಾಮ ನಿರ್ದೇಶನವು ಪಕ್ಷಕ್ಕೆ ಸಂಬಂಧಿಸಿದ್ದಲ್ಲ. ಅಕಾಡೆಮಿ ಮತ್ತು ಪ್ರಾಧಿಕಾರಗಳು ಸರ್ಕಾರದ ಅಂಗಸಂಸ್ಥೆಗಳೇ ಹೊರತು ರಾಜಕೀಯ ಪಕ್ಷದ ಅಂಗ ಸಂಸ್ಥೆಗಳಲ್ಲ” ಎಂದು ತಿಳಿಸಿದ್ದಾರೆ.

“ಅಕಾಡೆಮಿ ಮತ್ತು ಪ್ರಾಧಿಕಾರಗಳು ನಿಗಮ ಮಂಡಳಿಗಳಂತೆ ಅಲ್ಲವೇ ಅಲ್ಲ. ನಿಗಮ ಮಂಡಳಿಗಳಿಗೆ ಸಾಮಾನ್ಯವಾಗಿ ಸರ್ಕಾರಗಳು ಪಕ್ಷದ ಕಾರ್ಯಕರ್ತರು ಅಥವಾ ಮುಖಂಡರನ್ನು ನಾಮ ನಿರ್ದೇಶನ ಮಾಡುತ್ತವೆ. ಅಕಾಡೆಮಿ ಪ್ರಾಧಿಕಾರಗಳ ನಾಮ ನಿರ್ದೇಶನಕ್ಕೆ ಪಕ್ಷನಿಷ್ಠೆ ಪ್ರಮುಖ ಮಾನದಂಡವಲ್ಲ. ಹೀಗಾಗಿ ಸರ್ಕಾರದ ಈ ಸಾಂಸ್ಕೃತಿಕ ಸಂಸ್ಥೆಗಳಿಗೆ ಸ್ವಾಯತ್ತತೆ ಅಗತ್ಯ. ಈ ಸೂಕ್ಷ್ಮತೆಯ ಅರಿವು ಸಂಬಂಧಪಟ್ಟವರಿಗೆ ಇರಬೇಕು” ಎಂದು ಹಿರಿಯ ಸಾಹಿತಿ ತಿಳಿಸಿದ್ದಾರೆ.

Advertisements

“ಆರಂಭದಲ್ಲಿ ‘ಅಕಾಡೆಮಿಗಳ ಸನ್ನದು’ ಎಂಬ ನಿಯಮಾವಳಿ ಇತ್ತು. ಸರ್ಕಾರದ ಮಧ್ಯ ಪ್ರವೇಶ ಕಡಿಮೆಯಿತ್ತು. ಆನಂತರ 14.3.2005ರಲ್ಲಿ ಈ ಸನ್ನದುವನ್ನು ಪರಿಷ್ಕರಿಸಿ ‘ಅಕಾಡೆಮಿಗಳ ನಿಯಾಮವಳಿ’ಯನ್ನು ಮರು ರಚನೆ ಮಾಡಲಾಯಿತು. ಕೆಲವು ಅಂಶಗಳಲ್ಲಿ ಅಧಿಕಾರಿಗಳ ನಿಯಂತ್ರಣಕ್ಕೆ ಅವಕಾಶ ಕಲ್ಪಿಸಲಾಯಿತು. ಸಾಂಸ್ಕೃತಿಕ ನಿಯಂತ್ರಣದ ಬದಲು ಸಂಪೂರ್ಣ ಸಾಂಸ್ಕೃತಿಕ ಸ್ವಾಯತ್ತತೆ ನೀಡಬೇಕೆಂದು ನನ್ನ ನೇತೃತ್ವದ ಸಾಂಸ್ಕೃತಿಕ ನೀತಿಯಲ್ಲಿ ಶಿಫಾರಸು ಮಾಡಲಾಗಿತ್ತು. ಈ ಹಿಂದೆ ಇದ್ದ ಇದೇ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರವು ಸಚಿವ ಸಂಪುಟದಲ್ಲಿ ಚರ್ಚಿಸಿ, ಸಂಪುಟ ಉಪ ಸಮಿತಿಯ ಪರಿಶೀಲನೆಗೆ ಒಪ್ಪಿಸಿ, ಅನಂತರ ನಮ್ಮ ಸಮಿತಿಯ ಅನೇಕ ಶಿಫಾರಸುಗಳನ್ನು ಒಪ್ಪಿ ಆದೇಶವನ್ನು ಹೊರಡಿಸಿತ್ತು” ಎಂದು ಪ್ರೊ. ಬರಗೂರು ರಾಮಚಂದ್ರಪ್ಪ ನೆನಪಿಸಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ರೈಲು ಅಪಘಾತ : ಊಟಕ್ಕಿಲ್ಲದ ಉಪ್ಪಿನಕಾಯಿಯಂತಾದ ಮೋದಿ ಸರ್ಕಾರದ ‘ಕವಚ್’ ತಂತ್ರಜ್ಞಾನ!

“ದಿನಾಂಕ 10.10.2017ರ ಈ ಆದೇಶದಲ್ಲಿ ‘ಅಕಾಡೆಮಿಯ ಅಂಗರಚನೆ-ನಿಯಮಾವಳಿ ಮತ್ತು ಹಣಕಾಸಿನ ನಿರ್ವಹಣೆಯಲ್ಲಿ ನಿಯಾಮಾನುಸಾರ ಕಾರ್ಯಕ್ರಮಗಳನ್ನು ರೂಪಿಸುವ ಮತ್ತು ಅನುಷ್ಠಾನ ಮಾಡುವ ಸ್ವಾಯತ್ತತೆಯನ್ನು ಅಕಾಡೆಮಿಗಳಿಗೆ ಒದಗಿಸುವುದು’ ಎಂದು ಸ್ಪಷ್ಟವಾಗಿ ದಾಖಲಿಸಲಾಗಿದೆ. ಪ್ರಾಧಿಕಾರಗಳಿಗೆ ಶಾಸನಬದ್ಧ ಅಧಿಕಾರವಿದೆ. ಆದ್ದರಿಂದ ಸ್ವಾಯತ್ತತೆಯು ಅಕಾಡೆಮಿ ಮತ್ತು ಪ್ರಾಧಿಕಾರಗಳ ಅವಿಭಾಜ್ಯ ಅಂಗ ಎನ್ನುವುದನ್ನು ಸರ್ಕಾರ, ಪಕ್ಷ ಮತ್ತು ಈ ಸಾಂಸ್ಕೃತಿಕ ಸಂಸ್ಥೆಗಳ ಪದಾಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕು. ಸ್ವಾಯತ್ತತೆ ವಿಷಯದಲ್ಲಿ ರಾಜಿ ಸಲ್ಲದು” ಎಂದು ಬರಗೂರು ರಾಮಚಂದ್ರಪ್ಪ ಅಭಿಪ್ರಾಯಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X