ರಾಮಮಂದಿರ | ರಾಮಲಲ್ಲಾ ದರ್ಶನಕ್ಕೆ ಮೊದಲ ದಿನವೇ ಭಾರೀ ನೂಕುನುಗ್ಗಲು: ತಾತ್ಕಾಲಿಕ ಬಂದ್

Date:

Advertisements

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾನ ದರ್ಶನ ಪಡೆಯಲು ಮೊದಲ ದಿನವೇ ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿದ ಕಾರಣ, ನೂಕುನುಗ್ಗಲು ಉಂಟಾಗಿದೆ. ಹೀಗಾಗಿ, ರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‌ ಮಂದಿರದ ಬಾಗಿಲನ್ನು ಮುಚ್ಚಿರುವುದಾಗಿ ವರದಿಯಾಗಿದೆ.

ನೂಕುನುಗ್ಗಲಿನ ದೃಶ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದ್ದು, ವಯೋವೃದ್ಧ ಸಂತರೂ ಕೂಡ ಈ ಜನಜಂಗುಲಿಯಲ್ಲಿ ಸಿಲುಕಿ ಒದ್ದಾಡುತ್ತಿರುವ ದೃಶ್ಯ ದಾಖಲಾಗಿದೆ.

ನಿನ್ನೆ(ಜ.22) ಪ್ರಧಾನಿ ನರೇಂದ್ರ ಮೋದಿ ಹಲವು ಗಣ್ಯರ ಸಮ್ಮುಖದಲ್ಲಿ ನಡೆಸಿದ ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ ಸಾರ್ವಜನಿಕರ ದರ್ಶನಕ್ಕೆ ಇಂದು(ಜ.23) ಅನುವು ಮಾಡಿಕೊಡಲಾಗಿತ್ತು. ಆದರೆ ಬೆಳಗ್ಗೆ ಮೂರು ಗಂಟೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ಈ ರೀತಿಯ ಬೆಳವಣಿಗೆ ಉಂಟಾಗಿದೆ. ಮೈ ಕೊರೆಯುವ ಚಳಿ ಇದ್ದರೂ ಕೂಡ ಜನರು ಪ್ರಮುಖ ದ್ವಾರದ ಬಳಿ ಗುಂಪಾಗಿ ಕಾಯುತ್ತಿರುವ ದೃಶ್ಯ ಕೂಡ ಕಂಡುಬಂದಿದೆ.

Advertisements

ಬೆಳಗ್ಗೆ 7ಕ್ಕೆ ಬಾಗಿಲು ತೆರೆದು ಮತ್ತು 11.30 ರವರೆಗೆ ಹಾಗೂ ಆ ಬಳಿಕ ಮಧ್ಯಾಹ್ನ 2 ರಿಂದ 7ರವರೆಗೆ ಪ್ರವೇಶಕ್ಕೆ ಅವಕಾಶವಿರಲಿದೆ ಎಂದು ದೇವಾಲಯದ ಟ್ರಸ್ಟ್ ತಿಳಿಸಿತ್ತು. ಆದರೆ ವ್ಯಾಪಕ ನೂಕುನುಗ್ಗಲು ಸಂಭವಿಸಿ, ಜನರ ಪ್ರಾಣಾಪಾಯ ಉಂಟಾಗುವ ಸಾಧ್ಯತೆ ಇರುವ ಕಾರಣಕ್ಕೆ ರಾಮ ಮಂದಿರದ ಬಾಗಿಲನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ ಎಂದು ವರದಿಯಾಗಿದೆ. ಅಲ್ಲದೇ, ಸ್ಥಳದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕೂಡ ಏರ್ಪಡಿಸಲಾಗಿದೆ ಎಂದು ವರದಿಯಾಗಿದೆ.

ಈ ನಡುವೆ ಪೊಲೀಸ್ ಭದ್ರತಾ ವ್ಯವಸ್ಥೆಯನ್ನೂ ಮುರಿದ ಕೆಲವು ಮಂದಿ, ಪೊಲೀಸರನ್ನೇ ದೂಡಿಕೊಂಡು ದೇವಸ್ಥಾನದೊಳಗೆ ಪ್ರವೇಶಿಸಿರುವ ಘಟನೆ ಕೂಡ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Download Eedina App Android / iOS

X