ಕೃಷಿ ಬೆಳೆಗಳಿಗೆ ಎಂಎಸ್‌ಪಿ ಜಾರಿಗೆ ಆಗ್ರಹಿಸಿ ಬಿ.ಆರ್ ಪಾಟೀಲ್ ಸತ್ಯಾಗ್ರಹ

Date:

ಕೃಷಿ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮೂಲಕ ಖರೀದಿಸಬೇಕು. ಎಂಎಸ್‌ಪಿಯನ್ನು ಶಾಸನಬದ್ದಗೊಳಿಸಬೇಕು ಮತ್ತು ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ನಾಯಕ ದಲ್ಲೇವಾಲ್ ಅವರ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಬಿ.ಆರ್‌ ಪಾಟೀಲ್ ಒತ್ತಾಯಿಸಿದ್ದಾರೆ.

- Advertisement -

ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಬಿ.ಆರ್‌ ಪಾಟೀಲ್ ಏಕಾಂಗಿ ಸತ್ಯಾಗ್ರಹ ನಡೆಸಿದ್ದಾರೆ. “ಪ್ರೊ. ಎಂ.ಎಸ್ ಸ್ವಾಮಿನಾಥನ್ ವರದಿಯ ಅನ್ವಯ ರೈತರ ಬೆಳೆಗಳಿಗೆ ಸಿ2+50% ಆಧಾರದ ಮೇಲೆ ಕನಿಷ್ಟ ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯಿಸಿ ಜಗತ್ ಸಿಂಗ್ ದಲ್ಲೇವಾಲ್‌ ಅವರು 2024ರ ನವೆಂಬರ್ 26ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರ ಆರೋಗ್ಯ ತೀವ್ರಹದಗೆಟ್ಟಿದೆ. ಆದರೂ, ಕೇಂದ್ರ ಸರ್ಕಾರ ಹೋರಾಟಕ್ಕೆ ಸ್ಪಂದಿಸಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸರ್ವೋಚ್ಛ ನ್ಯಾಯಾಲಯದ ಆದೇಶದ ಮೇರೆಗೆ ದಲ್ಲೇವಾಲ್ ಅವರನ್ನು ಪಂಜಾಬ್ ಪಕ್ಕದ ಖನೌರಿ ಬಾರ್ಡರ್ ಆಸ್ಪ್ರತ್ರೆಗೆ ದಾಖಲಿಸಲಾಗಿದೆ. ಕೇಂದ್ರ ಸರ್ಕಾರವು ದಲ್ಲೇವಾಲ್ ಅವರ ಹಕ್ಕೊತ್ತಾಯಕ್ಕೆ ಸ್ಪಂದಿಸಬೇಕು. ದಲ್ಲೇವಾಲ್ ಅವರನ್ನು ಉಳಿಸಿ, ರೈತರಿಗೆ ಎಂಎಸ್‌ಪಿಯನ್ನು ಶಾಸನಬದ್ಧಗೊಳಿಸಿ ರೈತರನ್ನು ಉಳಿಸಿಬೇಕು” ಎಂದು ಒತ್ತಾಯಿಸಿದ್ದಾರೆ.

ಬಿ.ಆರ್‌ ಪಾಟೀಲ್ ಅವರು ಸತ್ಯಾಗ್ರಹದಲ್ಲಿ ವಿಧಾನ ಪರಿಷತ್‌ ಸದಸ್ಯ ಕಾಂ. ಮೋಹನ್ ಕುಮಾರ್ ಕೊಂಡಜ್ಜಿ, ರೈತ ಹೋರಾಟಗಾರ ವೀರಸಂಗಯ್ಯ ಕೂಡ ಭಾಗಿಯಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...