ವರುಣಾದಿಂದ ಸ್ಪರ್ಧೆ ಹೈ ಕಮಾಂಡ್ ನಿರ್ಧರಿಸುತ್ತದೆ: ಬಿ ವೈ ವಿಜಯೇಂದ್ರ

Date:

  • ವರುಣಾದಿಂದ ಸ್ಪರ್ಧಿಸಲು ಅವಕಾಶ ಕೇಳಿದ್ದೇನೆ ಎಂದ ಸಿದ್ದರಾಮಯ್ಯ
  • ಮಹತ್ವ ಪಡೆದುಕೊಂಡ ವಿಜಯೇಂದ್ರ ಚುನಾವಣಾ ಸ್ಪರ್ಧೆಯ ವಿಚಾರ

ನಾನು ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದರ ಬಗ್ಗೆ ನಮ್ಮ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ಶುಕ್ರವಾರ ತಮ್ಮ ನಿವಾಸದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗಿನ ಉಪಾಹಾರ ಕೂಟದ ಬಳಿಕ ವಿಜಯೇಂದ್ರ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಅಮಿತ್ ಶಾ ಹಾಗೂ ಯಡಿಯೂರಪ್ಪ ವರುಣಾ ಕ್ಷೇತ್ರದಲ್ಲಿನ ಸ್ಪರ್ಧೆ ವಿಚಾರದ ಬಗ್ಗೆ ಮಾತುಕತೆ ನಡೆಸಿದರು. ಹಾಗೆಯೇ ಪಕ್ಷ ಪ್ರಮುಖರೊಂದಿಗೆ ವಿಧಾನಸಭೆ ಚುನಾವಣೆ ಕಾರ್ಯತಂತ್ರ, ಕ್ಷೇತ್ರಗಳಲ್ಲಿನ ಹಾಲಿ ಪರಿಸ್ಥಿತಿ ಹಾಗೂ ಅಭ್ಯರ್ಥಿಗಳ ಆಯ್ಕೆ ಬಗೆಗೂ ಗಂಭೀರ ಚರ್ಚೆ ನಡೆದಿರುವುದಾಗಿ ತಿಳಿಸಿದರು.

ಶಿಕಾರಿಪುರದ ಜನ ನನ್ನ ಬಗ್ಗೆ ಒಲವು ತೋರಿಸಿದ ಕಾರಣ ಆ ಕ್ಷೇತ್ರದಲ್ಲಿ ನಾನು ಪ್ರಚಾರ ಮಾಡುತ್ತಿದ್ದೇನೆ. ನನ್ನ ಸ್ಪರ್ಧೆ ಎಲ್ಲಿಂದ ಎಂಬುವುದನ್ನು ನಾನೇ ನಿರ್ಧರಿಸಲು ಆಗುವುದಿಲ್ಲ. ನಮ್ಮ ಪಕ್ಷದ ಹೈಕಮಾಂಡ್ ಅದನ್ನು ನಿರ್ಧರಿಸುತ್ತದೆ ಎಂದು ವಿಜಯೇಂದ್ರ ಇದೇ ವೇಳೆ ತಿಳಿಸಿದರು.

ಅಮಿತ್ ಶಾ ತಮ್ಮ ಬೆನ್ನು ತಟ್ಟಿದ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಬೆನ್ನು ತಟ್ಟಿದ ಸದ್ದು ಯಾರು ಯಾರಿಗೆ ಹೇಗೆ ಕೇಳಿಸಿದೆಯೋ ಗೊತ್ತಿಲ್ಲ. ಆದರೆ ಅಮಿತ್ ಶಾ, ಸಂಘಟನೆ ಹೇಗೆ ನಡೆಯುತ್ತಿದೆ, ಮೋರ್ಚಾ ಸಮಾವೇಶಗಳನ್ನು ಎಷ್ಟು ಮಾಡಿದ್ದೀಯಾ ನೀನು, ಖುದ್ದಾಗಿ ಎಷ್ಟು ಜಿಲ್ಲೆಗಳಿಗೆ ಪ್ರವಾಸ ಹೋಗಿದ್ದೀಯಾ ಎಂದು ಕೇಳುತ್ತಾ ಬೆನ್ನು ತಟ್ಟಿದರು ಎಂದು ಸ್ಪಷ್ಟನೆ ನೀಡಿದರು.

ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಕ್ಷೇತ್ರ ಬದಲಾವಣೆ ವಿಚಾರದಲ್ಲಿ ಇಂದು ಹೊಸ ಇಂಗಿತ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ವರುಣಾದಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಹೈ ಕಮಾಂಡ್‌ಗೆ ಕೇಳಿದ್ದೇನೆ ಎಂದಿರುವ ವಿಚಾರವೀಗ ರಾಜಕೀಯ ಲೆಕ್ಕಾಚಾರವನ್ನೇ ಬದಲು ಮಾಡಿದೆ.

ಹೀಗಾಗಿ ಎರಡೂ ರಾಷ್ಟ್ರೀಯ ಪಕ್ಷಗಳ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರ ವಿಜಯೇಂದ್ರ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸ್ಪರ್ಧಾಕ್ಷೇತ್ರಗಳ ಭವಿಷ್ಯ ನಿರ್ಧರಿಸಲಿವೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ ಜಿಲ್ಲೆಯ ನೈತಿಕ ಪೊಲೀಸ್‌ ಗಿರಿಗೆ ಅಂತ್ಯ ಹಾಡುತ್ತೇವೆ: ಸಚಿವ ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾ ಉಸ್ತುವಾರಿಯಾದ ಸಚಿವ ಡಿಜಿಆರ್ ಇಲ್ಲಿನ ಜನ...

ಭ್ರಷ್ಟ ಪಿಡಿಒಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪಿಡಿಒಗಳ ಮೇಲಿನ ತನಿಖೆಯನ್ನು ಚುರುಕುಗೊಳಿಸಿ ಅಂತಹವರ ವಿರುದ್ಧ...

ದಲಿತರ ನ್ಯಾಯಯುತ ಬೇಡಿಕೆಗಳ ಅನುಷ್ಠಾನಕ್ಕೆ ‍ಸರ್ಕಾರ ಬದ್ಧ, ನಿಮ್ಮ ಋಣ ತೀರಿಸುತ್ತೇವೆ: ಡಿಕೆ ಶಿವಕುಮಾರ್

ಅಂಬೇಡ್ಕರ್ ಅಂದರೆ ಶಕ್ತಿ-ಸ್ವಾಭಿಮಾನ ಅವರು ನೀಡಿರುವ ಸಂವಿಧಾನ ಶಕ್ತಿಯನ್ನು ಉಳಿಸಿಕೊಂಡು ಹೋಗಬೇಕಿದೆ....

ನಮ್ಮಲ್ಲಿನ ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿಗೆ ಸೋಲು: ಸ್ವಪಕ್ಷಿಯರ ವಿರುದ್ಧ ಸಿ ಟಿ ರವಿ ಕಿಡಿ

ನಮ್ಮಲ್ಲೂ ರಾಜಿ ರಾಜಕಾರಣ ಮಾಡಿ ತಪ್ಪು ಮಾಡಿದ್ದಾರೆ ಹೊಂದಾಣಿಕೆ ರಾಜಕಾರಣದಿಂದಲೇ ಬಿಜೆಪಿಗೆ ಸೋಲಾಗಿದೆ ಪಕ್ಷದೊಳಗಿನ...