ಬಿಡದಿಯ ಕೇತಗಾನಹಳ್ಳಿಯಲ್ಲಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭಾನುವಾರ ಭೇಟಿ ಮಾಡಿದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, “ರಾಜ್ಯದ ಹಿತದೃಷ್ಟಿಯಿಂದ ದೆಹಲಿ ಮಟ್ಟದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿಯಾಗಿದೆ. ಲೋಕಸಭಾ ಚುನಾವಣೆಗೆ ಎರಡೂ ಪಕ್ಷಗಳ ನಡುವೆ ಸೀಟು ಹಂಚಿಕೆ ಕುರಿತು ಕೇಂದ್ರದ ನಾಯಕರು ಮಾತನಾಡಿ, ನಿರ್ಧಾರ ಕೈಗೊಳ್ಳುತ್ತಾರೆ” ಎಂದರು.
“ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷ ಗೆಲ್ಲಬೇಕು. ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬುದ್ದಿ ಕಲಿಸಬೇಕು. ಆ ನಿಟ್ಟಿನಲ್ಲಿ ನಾನು ಪಕ್ಷದ ಅಧ್ಯಕ್ಷನಾದ ಬಳಿಕ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೆ. ಇದೀಗ, ಪಕ್ಷದ ರಾಜ್ಯಾಧ್ಯಕ್ಷರಾದ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದೇನೆ” ಎಂದು ಹೇಳಿದರು.
“ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ದೇಶದ ಪ್ರಧಾನಿಯಾಗಿ ಮಾಡುವುದು ನಮ್ಮ ಗುರಿ. ಈ ಕುರಿತು, ನಮ್ಮಲ್ಲಿ ಏನೇ ಗೊಂದಲಗಳಿದ್ದರೂ, ಪರಸ್ಪರ ಚರ್ಚಿಸಿ ಪರಿಹಾರ ಕಂಡುಕೊಳ್ಳುತ್ತೇವೆ” ಎಂದರು.
ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಖ್ಯಮಂತ್ರಿಗಳಾದ ಮಾನ್ಯ ಶ್ರೀ @hd_kumaraswamy ಅವರನ್ನು ಇಂದು ಬಿಡದಿಯ ಅವರ ನಿವಾಸದಲ್ಲಿ ಭೇಟಿ ಮಾಡಿ ಮಾನ್ಯ ನರೇಂದ್ರ ಮೋದಿಯವರನ್ನು ಮಗದೊಮ್ಮೆ ಪ್ರಧಾನಿಯನ್ನಾಗಿಸಬೇಕೆಂಬ ನಿಟ್ಟಿನಲ್ಲಿ ಜೆಡಿಎಸ್ ಜೊತೆಗೂಡಿ ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸುವ ದೃಷ್ಟಿಯಿಂದ… pic.twitter.com/Gf1StEa3QG
— Vijayendra Yediyurappa (@BYVijayendra) November 26, 2023