ಡಿ ಕೆ ಶಿವಕುಮಾರ್ ಆದೇಶದ ಮೇರೆಗೆ ಬಿ ವೈ ವಿಜಯೇಂದ್ರ ಪಾದಯಾತ್ರೆ: ಯತ್ನಾಳ್‌ ಬಾಂಬ್‌

Date:

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಡಿ ಕೆ ಶಿವಕುಮಾರ್ ಸಲಹೆ ಮೇರೆಗೆ ಬಿ ವೈ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಂಬ್‌ ಸಿಡಿಸಿದ್ದಾರೆ.

- Advertisement -

ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿ, “ಡಿ ಕೆ ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿ ಮಾಡಲು ಬಿ ವೈ ವಿಜಯೇಂದ್ರ ಕೈಜೋಡಿಸಿದ್ದಾರೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಡಿ ಕೆ ಶಿವಕುಮಾರ್ ಆದೇಶದಂತೆ ಸಿದ್ದರಾಮಯ್ಯ ‌ವಿರುದ್ಧ ವಿಜಯೇಂದ್ರ ಪಾದಯಾತ್ರೆ ಮಾಡಲು ಸಿದ್ಧರಾಗಿದ್ದಾರೆ. ಈ ಪಾದಯಾತ್ರೆ ಹೊಂದಾಣಿಕೆ ರಾಜಕಾರಣವಾಗಿದೆ. ಡಿ ಕೆ ಶಿವಕುಮಾರ್ ಅವರ ಉಪಕಾರ ತೀರಿಸಲಿಕ್ಕೆ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ” ಎಂದರು.

“ಮುಡಾ ಮಾಜಿ ಅಧ್ಯಕ್ಷ ಹೆಚ್ ವಿ ರಾಜೀವ್ ಬಿಜೆಪಿಯಲ್ಲೇ ಇದ್ದಾಗ ಈ ಹಗರಣ ನಡೆದಿದೆ. ಈಗ ಅವರು ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್​ ಯಾಕೆ ಸೇರಿದ್ದಾರೆ ಅಂದರೆ ಇದೆಲ್ಲ ಮುಚ್ಚಿ ಹಾಕಲು. ರಾಜೀವ್ ಯಾರ ನಿರ್ದೇಶನದ ಮೇಲೆ ಕಾಂಗ್ರೆಸ್ ಸೇರಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ನನಗಿರುವ ಮಾಹಿತಿ ಪ್ರಕಾರ ಮುಡಾ ವಿಚಾರ ವಿಜಯೇಂದ್ರ ನಡೆಸುತ್ತಿರುವ ಹೋರಾಟದ ಹಿಂದೆ ಡಿ ಕೆ ಶಿವಕುಮಾರ್ ಕೈವಾಡವಿದೆ” ಎಂದು ಗಂಭೀರವಾಗಿ ಆರೋಪಿಸಿದರು.

“ನಾವು ಮತ್ತು ರಮೇಶ್ ಜಾರಕಿಹೊಳಿ‌ ಕೇಂದ್ರದಿಂದ ಒಪ್ಪಿಗೆ ಪಡೆದು ಪ್ರತಿಭಟನೆ ಮಾಡುತ್ತಿದ್ದೇವೆ. ಆದರೆ ಎಲ್ಲಿಂದ ಪ್ರತಿಭಟನೆ ಮಾಡಬೇಕೆಂದು ಇನ್ನೂ ನಿರ್ಣಯವಾಗಿಲ್ಲ. ಬಿಜೆಪಿಯಲ್ಲಿ ಎರಡು ಬಣ ಇಲ್ಲ. ನಮ್ಮ ಪ್ರತಿಭಟನೆ ಪಕ್ಷದ ಪ್ರತಿಭಟನೆ” ಎಂದು ಹೇಳಿದರು.

“ಮಹರ್ಷಿ ವಾಲ್ಮೀಕಿ ನಿಗಮದಲ್ಲೂ ದೊಡ್ಡ ಹಗರಣ ನಡೆದಿದೆ. ಒಂದು ಸಮುದಾಯದಕ್ಕೆ ಹೋಗಬೇಕಾದ ಹಣ ಪೂರ್ತಿ ನುಂಗಿ ಹಾಕಿದ್ದಾರೆ. ಇನ್ನೊಂದು ಕಡೆ ಮುಡಾದಲ್ಲಿ ಒಬ್ಬ ದಲಿತನ ಜಮೀನು ಪೂರ್ತಿ ನುಂಗಿ ಹಾಕಿದ್ದಾರೆ. ಕಾಂಗ್ರೆಸ್ ಭ್ರಷ್ಟಾಚಾರ ವಿರುದ್ದ ಯಾವುದೇ ಒಳ ಒಪ್ಪಂದ ಇಲ್ಲದೇ ನಾವು ಹೋರಾಟ ಮಾಡುತ್ತಿದ್ದೇವೆ. ನಮ್ಮ ಹೋರಾಟ ಭ್ರಷ್ಟರ ವಿರುದ್ಧ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...